ಕಾಲಿವುಡ್ ನಟ ವಿಜಯ್ ದಳಪತಿ (Vijay Thalapathy) ಅವರು ಸಾಕಷ್ಟು ಸಮಯದಿಂದ ರಾಜಕೀಯಕ್ಕೆ ಎಂಟ್ರಿ ಕೊಡುತ್ತಾರೆ ಎಂಬ ಸುದ್ದಿ ಹಬ್ಬಿತ್ತು. ಈಗ ‘ತಮಿಳಿಗ ವೆಟ್ರಿ ಕಳಗಂ ಎಂಬ ಪಕ್ಷ ಸ್ಥಾಪಿಸಿ ವಿಜಯ್ ರಾಜಕೀಯ ಅಖಾಡಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಇದೀಗ ಈ ಹಿಂದೆ ಅವರು ನೀಡಿರುವ ಹೇಳಿಕೆಯೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ನೀವು ನಿಜ ಜೀವನದಲ್ಲಿ ಮುಖ್ಯಮಂತ್ರಿಯಾದರೆ ಏನಾಗುತ್ತದೆ ಎಂದು ವಿಜಯ್ ಅವ್ರಿಗೆ ಕೇಳಿದಾಗ ಸಿಎಂ ಆದರೆ ʻನಾನು ಎಂದಿಗೂ ನಟಿಸುವುದಿಲ್ಲ’ ಎಂದು ಉತ್ತರಿಸಿದ್ದರು. ರಾಜಕೀಯಕ್ಕೆ ವಿಜಯ್ ಎಂಟ್ರಿ ಕೊಟ್ಟಿರೋ ಬೆನ್ನಲ್ಲೇ ಸಿಎಂ ಸ್ಥಾನದ ಕುರಿತು ನೀಡಿದ್ದ ಹೇಳಿಕೆ ಸೋಷಿಯಲ್ ಮೀಡಿಯಾದಲ್ಲಿ ಸಾಕಷ್ಟು ಸದ್ದು ಮಾಡುತ್ತಿದೆ.

ವಿಜಯ್ ಪಕ್ಷ ಸ್ಥಾಪಿಸಿರುವುದಕ್ಕೆ ಅಭಿಮಾನಿಗಳಿಗೆ ಖುಷಿ ಕೊಟ್ಟಿದೆ. ಅವರ ಮುಂದಿನ ನಡೆಗಾಗಿ ಫ್ಯಾನ್ಸ್ ಕಾಯುತ್ತಿದ್ದಾರೆ. ಕಳೆದ ನವೆಂಬರ್ನಲ್ಲಿ ತ್ರಿಷಾ ಜೊತೆಗಿನ ವಿಜಯ್ ದಳಪತಿ ಸಿನಿಮಾ ರಿಲೀಸ್ ಆದ್ಮೇಲೆ ಹೊಸ ಚಿತ್ರಗಳನ್ನು ವಿಜಯ್ ಒಪ್ಪಿಕೊಂಡಿದ್ದಾರೆ. ಈ ಮದ್ಯ ರಾಜಕೀಯದಲ್ಲಿ ಹೇಗೆ ಸಕ್ರಿಯರಾಗಿರುತ್ತಾರೆ ಕಾದು ನೋಡಬೇಕಿದೆ.
#Vijay #Dalapativijay #Tamilnadu #Kollywood #Politics












