ಶ್ರೀಕ್ಷೇತ್ರ ಸುತ್ತೂರಿನಲ್ಲಿ ನಡೆಯುತ್ತಿರುವ ಸುತ್ತೂರು ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಳ್ಳುವ ಸಲುವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಮೈಸೂರು ಪ್ರವಾಸ ಕೈಗೊಂಡಿದ್ದಾರೆ.
ದೆಹಲಿಯ ಜಂತರ್-ಮಂತರ್‌ನಲ್ಲಿ ನಡೆಯಲಿರುವ ಕೇಂದ್ರ ಸರ್ಕಾರದ ವಿರುದ್ಧದ ಕಾಂಗ್ರೆಸ್ ಪ್ರತಿಭಟನೆಯಲ್ಲಿ ಪಾಲ್ಗೊಂಡ ಬಳಿಕ ನವದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಸಂಜೆ 4.50ಕ್ಕೆ ಆಗಮಿಸಲಿರುವ ಸಿದ್ದರಾಮಯ್ಯ ಅವರು ನಂತರ ರಸ್ತೆಮಾರ್ಗವಾಗಿ ಸುತ್ತೂರಿಗೆ ತೆರಳಲಿದ್ದಾರೆ.

ಬಳಿಕ ಸಂಜೆ 5:30ಕ್ಕೆ ಸುತ್ತೂರಿನಲ್ಲಿ ನಡೆಯಲಿರುವ ಆದಿಜಗದ್ಗುರು ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಳ್ಳಲಿದ್ದಾರೆ. ಇದಾದ ಬಳಿಕ ಸುತ್ತೂರಿನ ಮಹದೇವಿ ಕಾಲೋನಿಯಲ್ಲಿ ನಡೆಯಲಿರುವ ಶ್ರೀ ಸಿದ್ದಪ್ಪಾಜಿ ದೇವಸ್ಥಾನ ಹಾಗೂ ಶ್ರೀ ಮಾರಮ್ಮ ದೇವಿ ದೇವಸ್ಥಾನದ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ರಾತ್ರಿ 9 ಗಂಟೆ ವೇಳೆಗೆ ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ಹಿಂದಿರುವಲಿದ್ದಾರೆ.
#Siddaramaiah #CMofKarnataka #SutturuJathre #SutturuShree #Karnataka






