ಸುತ್ತೂರು ಜಾತ್ರಾ ಮಹೋತ್ಸವದ ಅಂಗವಾಗಿ ನಡೆಯುವ ಪ್ರಮುಖ ಕಾರ್ಯಕ್ರಮಗಳಲ್ಲಿ ಒಂದಾಗಿರುವ ಸಾಮೂಹಿಕ ವಿವಾಹ ಕಾರ್ಯಕ್ರಮ ಇಂದು ನಡೆಯಲಿದ್ದು, ಇಂದು ಬೆಳಗ್ಗೆ ನಡೆಯುವ ಸಮಾರಂಭದಲ್ಲಿ 120 ಜೋಡಿ ಸಾಮೂಹಿಕ ವಿವಾಹದ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ.
ಅಂತರ್ಜಾತಿ, ವಿಶೇಷ ಚೇತನ ಜೋಡಿಗಳು ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ. ಸುತ್ತೂರು ಶ್ರೀ ಕ್ಷೇತ್ರದಲ್ಲಿರುವ ಜೆಎಸ್‌ಎಸ್ ಉಚಿತ ವಿದ್ಯಾರ್ಥಿ ನಿಲಯ ಸಮೀಪದ ವಿಶಾಲವಾದ ಜಾಗದಲ್ಲಿ ನಡೆಯಲಿರುವ ಸಾಮೂಹಿಕ ವಿವಾಹ ಆಯೋಜಿಸಲಾಗಿದೆ. ಸುತ್ತೂರು ಕ್ಷೇತ್ರದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರ ಉಪಸ್ಥಿತಿಯಲ್ಲಿ ನಾಡಿನ ವಿವಿಧ ಮಠಾಧೀಶರು, ಜನಪ್ರತಿನಿಧಿಗಳು ನೂತನ ವಧು ವರರಿಗೆ ಆಶೀರ್ವಾದ ಮಾಡಲಿದ್ದಾರೆ. ಸುತ್ತೂರು ಜಾತ್ರೆಯ ಪ್ರಯುಕ್ತ ಪ್ರತಿ ವರ್ಷ ಸಾಮೂಹಿಕ ವಿವಾಹ ನಡೆಸಲಾಗುತ್ತಿದೆ.
ವರ್ಷದಿಂದ ವರ್ಷಕ್ಕೆ ಇಲ್ಲಿ ಮದುವೆಯಾಗುವವರ ಸಂಖ್ಯೆ ಜಾಸ್ತಿಯಾಗುತ್ತಿದೆ. ಕಳೆದ ಒಂದು ದಶಕದಿಂದ ಹಲವು ಜೋಡಿಗಳು ಸಾಮೂಹಿಕ ವಿವಾಹದಲ್ಲಿ ಪಾಲ್ಗೊಂಡು ದಾಂಪತ್ಯಕ್ಕೆ ಕಾಲಿಡುವ ಮೂಲಕ ಹೊಸ ಜೀವನ ಕಟ್ಟಿಕೊಂಡಿದ್ದಾರೆ.
#SutturJathre #Mysore #SutturShree #Karnataka #Nanjangudu






