• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, May 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ದೆಹಲಿಯಲ್ಲಿ ಕಾಂಗ್ರೆಸ್‌ ಪ್ರತಿಭಟನೆ: ಇದು ಕರ್ನಾಟಕದ, ಕನ್ನಡಿಗರ ಹಿತಕಾಯುವ ಚಳವಳಿ ಎಂದ ಸಿದ್ದರಾಮಯ್ಯ

Any Mind by Any Mind
February 7, 2024
in ದೇಶ, ರಾಜಕೀಯ
0
ದೆಹಲಿಯಲ್ಲಿ ಕಾಂಗ್ರೆಸ್‌ ಪ್ರತಿಭಟನೆ: ಇದು ಕರ್ನಾಟಕದ, ಕನ್ನಡಿಗರ ಹಿತಕಾಯುವ ಚಳವಳಿ ಎಂದ ಸಿದ್ದರಾಮಯ್ಯ
Share on WhatsAppShare on FacebookShare on Telegram

ʻನನ್ನ ತೆರಿಗೆ, ನನ್ನ ಹಕ್ಕುʼ ಎಂಬ ಘೋಷಣೆಯೊಂದಿಗೆ ರಾಜ್ಯದ ಕಾಂಗ್ರೆಸ್‌ ನಾಯಕರು ದೆಹಲಿಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಬೃಹತ್‌ ಪ್ರತಿಭಟನೆ ನಡೆಸಿದರು. ದೆಹಲಿಯ ಜಂತರ್-ಮಂತರ್‌ನಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್‌ ಸೇರಿದಂತೆ ಹಲವು ನಾಯಕರು ಪಾಲ್ಗೊಂಡು ಕೇಂದ್ರ ಸರ್ಕಾರದ ವಿರುದ್ಧ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕೇಂದ್ರ ಸರ್ಕಾರ ರಾಜ್ಯಕ್ಕೆ ತೆರಿಗೆ ಹಂಚಿಕೆಯಲ್ಲಿ ಮಾಡಿರುವ ಅನ್ಯಾಯದ ವಿರುದ್ಧ ಇಂದು ನವದೆಹಲಿಯ ಜಂತರ್ ಮಂತರ್ ನಲ್ಲಿ ಹಮ್ಮಿಕೊಂಡಿರುವ ಹೋರಾಟ ಕರ್ನಾಟಕದ , ಕನ್ನಡಿಗರ ಹಿತ ಕಾಪಾಡುವ ಚಳವಳಿಯಾಗಿದೆ. ಇದು ರಾಜಕೀಯ ಚಳವಳಿ ಅಲ್ಲ, ಕಳೆದ ಐದಾರು ವರ್ಷಗಳಲ್ಲಿ 1,87,000 ಕೋಟಿ ರೂ.ಗಳಷ್ಟು ನ್ಯಾಯಯುತವಾಗಿ ಬರಬೇಕಾಗಿದ್ದ ಅನುದಾನವನ್ನು ರಾಜ್ಯಕ್ಕೆ ನೀಡಲಾಗಿಲ್ಲ. ಈ ಅನ್ಯಾಯದ ವಿರುದ್ಧ ಪ್ರತಿಭಟನೆಯನ್ನು ಮಾಡಲಾಗುತ್ತಿದೆ.ಜಂತರ್ ಮಂತರ್ ಐತಿಹಾಸಿಕ ಸ್ಥಳವಾಗಿದ್ದು, ಅನೇಕ ಚಳವಳಿಗೆ ಸಾಕ್ಷಿಯಾದ ಸ್ಥಳ. ಇಂತಹ ಜಾಗದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಸೇರಿದಂತೆ ಎಲ್ಲ ಸಚಿವರು, ಶಾಸಕರು ಈ ಹೋರಾಟದಲ್ಲಿ ಭಾಗವಹಿಸಿದ್ದಾರೆ. ಇದು ರಾಜಕೀಯ ಚಳವಳಿ ಅಲ್ಲ. ಕೇಂದ್ರ ಸರ್ಕಾರದ ವಿರುದ್ಧದ ಈ ಹೋರಾಟವನ್ನು ಪಕ್ಷಾತೀತವಾಗಿ ಮಾಡಬೇಕೆಂಬ ಮನವಿಯನ್ನು ರಾಜ್ಯ ಬಿಜೆಪಿಯ ನಾಯಕರಿಗೂ ಮಾಡಲಾಗಿದೆ ಎಂದರು.

ADVERTISEMENT

ಇದು ಐತಿಹಾಸಿಕವಾದ ಪ್ರತಿಭಟನೆ. 14 ನೇ ಹಣಕಾಸು ಆಯೋಗದಲ್ಲಿ ರಾಜ್ಯಕ್ಕೆ ತೆರಿಗೆ ಪಾಲು 4.71 % ಬಂದಿತ್ತು. 15 ನೇ ಹಣಕಾಸು ಆಯೋಗದಲ್ಲಿ 3.64 % ಕ್ಕೆ ಇಳಿಯಿತು. ಇದರಿಂದ ರಾಜ್ಯಕ್ಕೆ ಬರುವ ತೆರಿಗೆಯಲ್ಲಿ ಶೇ. 40 ರಿಂದ 45 ರವರೆಗೆ ಕಡಿತವಾಗಿದೆ. ಒಟ್ಟಾರೆಯಾಗಿ 14 ನೇ ಹಣಕಾಸು ಆಯೋಗದ ಶಿಫಾರಸ್ಸನ್ನೇ 15 ನೇ ಹಣಕಾಸು ಆಯೋಗದಲ್ಲಿ ಅನುಸರಿಸಿದ್ದರೆ, ರಾಜ್ಯಕ್ಕೆ 62,098 ಕೋಟಿ ರೂ. ರಾಜ್ಯಕ್ಕೆ ಬರುತ್ತಿತ್ತು. ರಾಜ್ಯದಿಂದ ಒಟ್ಟು 4,30,000 ಕೋಟಿ ತೆರಿಗೆ ಮೊತ್ತವನ್ನು ಕೇಂದ್ರಕ್ಕೆ ನೀಡಲಾಗುತ್ತದೆ. ಅಂದರೆ 100 ರೂ. ತೆರಿಗೆಯಲ್ಲಿ ರಾಜ್ಯಕ್ಕೆ ಕೇವಲ 12 ರಿಂದ 13 ರೂ. ದೊರೆಯುತ್ತಿದೆ. ಇದು ಕರ್ನಾಟಕ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯ. ಕರ್ನಾಟಕದಿಂದ 25 ಸಂಸದರು ಆಯ್ಕೆಯಾಗಿದ್ದು, ಒಬ್ಬರೂ ಈ ಬಗ್ಗೆ ಕೇಂದ್ರ ಮುಂದೆ ಮಾತನಾಡಿಲ್ಲ. ಅಲ್ಲದೆ ರಾಜ್ಯದ ಮಾಜಿ ಮುಖ್ಯಮಂತ್ರಿಗಳಾದ ಯಡಿಯೂರಪ್ಪ ಅಥವಾ ಬಸವರಾಜ ಬೊಮ್ಮಾಯಿಯವರು ಈ ಅನ್ಯಾಯವನ್ನು ಸರಿಪಡಿಸುವ ಮನವಿ ಮಾಡಿರುವುದಿಲ್ಲ. ಈ ಎಲ್ಲ ಕಾರಣಗಳಿಗಾಗಿ ಇಂದು ನವದೆಹಲಿಯಲ್ಲಿ ಹೋರಾಟ ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿಗಳು ವಿವರಿಸಿದರು.

ಉತ್ತರಪ್ರದೇಶ ರಾಜ್ಯಕ್ಕೆ 2,80,000 ಕೋಟಿ ರೂ. ಕೇಂದ್ರ ನೀಡುತ್ತಿದೆ. ಅಂತೆಯೇ, ಬಿಹಾರ, ಮಧ್ಯಪ್ರದೇಶ, ರಾಜಸ್ಥಾನಗಳಿಗೂ ನೀಡಲಾಗುತ್ತಿದೆ. ಈ ಯಾವ ರಾಜ್ಯಗಳೂ ಜನಸಂಖ್ಯಾ ನಿಯಂತ್ರಣದ ಬಗ್ಗೆ ಕ್ರಮ ಕೈಗೊಂಡಿಲ್ಲ. ಜನಸಂಖ್ಯೆ, ತಲಾ ಆದಾಯ, ಸಮುದಾಯಗಳ ಅಭಿವೃದ್ಧಿ ಸೇರಿದಂತೆ ಹಲವು ಮಾನದಂಡಗಳಿಂದ ಅನುದಾನ ಹಂಚಿಕೆಯನ್ನು ನಿರ್ಧರಿಸಲಾಗುತ್ತದೆ. 15 ನೇ ಹಣಕಾಸು ಆಯೋಗದಲ್ಲಿ 2011ರ ಜನಗಣತಿಯನ್ನು ಪರಿಗಣಿಸುತ್ತಿದ್ದಾರೆ ಎಂದು ತಿಳಿಸಿದರು.

#Siddaramaiah #Congress #Protest #MytaxMyright #JantharManthar

Previous Post

ಸುತ್ತೂರು ಶ್ರೀಕ್ಷೇತ್ರದಲ್ಲಿ ಸಾಮೂಹಿಕ ವಿವಾಹ ಸಂಭ್ರಮ: ದಾಂಪತ್ಯಕ್ಕೆ ಅಡಿಯಿಟ್ಟ 108 ಜೋಡಿ

Next Post

ಅಲ್ಪಸಂಖ್ಯಾತರನ್ನು ಕಾಂಗ್ರೆಸ್ ಏನೂ ಮಾಡಲ್ಲ ಎಂಬ ಭಾವನೆ, ಕಾನೂನಿನ ಭಯವನ್ನೇ ಇಲ್ಲದಂತಾಗಿಸಿದೆ

Related Posts

80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..
Top Story

80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..

by ಪ್ರತಿಧ್ವನಿ
May 23, 2026
0

ಬೆಂಗಳೂರು : ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ, ಪ್ರವಾಸೋದ್ಯಮ, ಉದ್ಯೋಗ ಸೃಷ್ಟಿ, ಆರ್ಥಿಕ ಬೆಳವಣಿಗೆ ಸೇರಿ ಎಲ್ಲಾ ದೃಷ್ಟಿಯಿಂದ ಈ ಭಾಗದ...

Read moreDetails
ದೇಶ ಕಟ್ಟುವ ಕಾರ್ಮಿಕರ ಬದುಕಿಗೆ ಸಹಾಯ ಮಾಡಿದ ಸಮಾಧಾನ ನಮ್ಮ ಸರ್ಕಾರದ್ದು :‌ ಸಚಿವ ಸಂತೋಷ್‌ ಲಾಡ್..

ದೇಶ ಕಟ್ಟುವ ಕಾರ್ಮಿಕರ ಬದುಕಿಗೆ ಸಹಾಯ ಮಾಡಿದ ಸಮಾಧಾನ ನಮ್ಮ ಸರ್ಕಾರದ್ದು :‌ ಸಚಿವ ಸಂತೋಷ್‌ ಲಾಡ್..

May 23, 2026
ಸಾಮಾಜಿಕ ಜಾಲತಾಣದಲ್ಲಿ ಕಾಕ್ರೋಚ್‌ ಓಟಕ್ಕೆ ಬ್ರೇಕ್..?‌ : ಯುವಕರ ಹೋರಾಟ ತುಳಿಯುವ ಷಡ್ಯಂತ್ರವಾ..?

ಸಾಮಾಜಿಕ ಜಾಲತಾಣದಲ್ಲಿ ಕಾಕ್ರೋಚ್‌ ಓಟಕ್ಕೆ ಬ್ರೇಕ್..?‌ : ಯುವಕರ ಹೋರಾಟ ತುಳಿಯುವ ಷಡ್ಯಂತ್ರವಾ..?

May 23, 2026
“ಕರ್ನಾಟಕದ ಜನತೆ ಎಂದಿಗೂ ಕ್ಷಮಿಸುವುದಿಲ್ಲ, ಇತಿಹಾಸವೂ ನಿಮ್ಮ ಕೊಳಕು ಮನಸ್ಥಿತಿಯನ್ನು ದಾಖಲಿಸದೆ ಬಿಡುವುದಿಲ್ಲ”

“ಕರ್ನಾಟಕದ ಜನತೆ ಎಂದಿಗೂ ಕ್ಷಮಿಸುವುದಿಲ್ಲ, ಇತಿಹಾಸವೂ ನಿಮ್ಮ ಕೊಳಕು ಮನಸ್ಥಿತಿಯನ್ನು ದಾಖಲಿಸದೆ ಬಿಡುವುದಿಲ್ಲ”

May 23, 2026
ಗ್ರಾಹಕರ ಜೇಬು ಸುಡುತ್ತಿದೆ ಇಂಧನ ದರ ಏರಿಕೆ : ಪೆಟ್ರೋಲ್‌, ಡೀಸೆಲ್‌ ಬೆಲೆಗಳಲ್ಲಿ ಎಷ್ಟು ಹೆಚ್ಚಳ ಗೊತ್ತಾ..?

ಗ್ರಾಹಕರ ಜೇಬು ಸುಡುತ್ತಿದೆ ಇಂಧನ ದರ ಏರಿಕೆ : ಪೆಟ್ರೋಲ್‌, ಡೀಸೆಲ್‌ ಬೆಲೆಗಳಲ್ಲಿ ಎಷ್ಟು ಹೆಚ್ಚಳ ಗೊತ್ತಾ..?

May 23, 2026
Next Post
ಬಿಜೆಪಿ ದೆಹಲಿ ವರಿಷ್ಠರ ನಿದ್ದೆಗೆಡಿಸಿದ ವಿಜಯೇಂದ್ರ ದಾಳ ಯಾವುದು?

ಅಲ್ಪಸಂಖ್ಯಾತರನ್ನು ಕಾಂಗ್ರೆಸ್ ಏನೂ ಮಾಡಲ್ಲ ಎಂಬ ಭಾವನೆ, ಕಾನೂನಿನ ಭಯವನ್ನೇ ಇಲ್ಲದಂತಾಗಿಸಿದೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada