ಲೋಕಸಭೆ(loksabha) ಎಲೆಕ್ಷನ್ಗೆ ದಿನಗಣನೆ ಆರಂಭವಾಗಿದೆ. ಮೂರನೇ ಬಾರಿಗೆ ಅಧಿಕಾರದ ಚುಕ್ಕಾಣಿ ಹಿಡಿಯಲು ಪಿಎಂ ಮೋದಿ (pmmodiji) ಅಂಡ್ ಟೀಂ ಕಾತುರರಾಗಿದ್ದಾರೆ. NDA ಹಣಿಯಲು INDIA ನಾಯಕರು ರಣತಂತ್ರ ಹೆಣೆಯುತ್ತಿದ್ದಾರೆ . ಇದೆಲ್ಲದರ ನಡುವೆ ಕಮಲಪಾಳಯಕ್ಕೆ ಸಿಹಿ ಸುದ್ದಿಯೊಂದು ಸಿಕ್ಕಿದೆ.

ಇಂಡಿಯಾ ಟುಡೇ ಗ್ರೂಪ್ನ ಮೂಡ್ ಆಫ್ ದಿ ನೇಷನ್ (MOTN) ಸಮೀಕ್ಷೆ ಹೊರಬಿದ್ದಿದೆ. ಸಮೀಕ್ಷೆಯ ಪ್ರಕಾರ, ಬಿಜೆಪಿ ನೇತೃತ್ವದ ಎನ್ಡಿಎ (National Democratic Alliance) 335 ಸ್ಥಾನಗಳನ್ನು ಗೆಲ್ಲುವ ಮೂಲಕ ಸತತ ಮೂರನೇ ಬಾರಿಗೆ ಅಧಿಕಾರಕ್ಕೆ ಮರಳಲಿದೆ ಎಂದು ಭವಿಷ್ಯ ಹೇಳಲಾಗಿದೆ. ಬಿಜೆಪಿ ಏಕಾಂಗಿಯಾಗಿ ಬರೋಬ್ಬರಿ 304 ಸ್ಥಾನಗಳನ್ನು ಗೆಲ್ಲುವ ಸಾಧ್ಯತೆ ಇದೆ. ಹಲವು ರಾಜ್ಯಗಳಲ್ಲಿ ಬಿಜೆಪಿ ಮತ್ತೊಮ್ಮೆ ಕ್ಲೀನ್ ಸ್ವೀಪ್(clean sweep) ಮಾಡಲಿದೆ. ಎನ್ಡಿಎ ಈ ಬಾರಿ 18 ಸ್ಥಾನಗಳನ್ನು ಕಳೆದುಕೊಳ್ಳುವ ನಿರೀಕ್ಷೆಯಿದೆ. INDIA ಒಕ್ಕೂಟ ಇದರ ನೇರ ಲಾಭ ಪಡೆಯಲಿದೆ. INDIA 166 ಸೀಟುಗಳನ್ನು ಪಡೆದುಕೊಳ್ಳಲಿದೆ. ಇತರೆ ಪಕ್ಷಗಳು 42 ಸ್ಥಾನಗಳನ್ನು ಗೆಲ್ಲಬಹುದು ಎಂದು ಸಮೀಕ್ಷೆಯಲ್ಲಿ ಮಾಹಿತಿ ನೀಡಲಾಗಿದೆ. ಕಾಂಗ್ರೆಸ್(congress) 71 ಸ್ಥಾನಗಳೊಂದಿಗೆ ಎರಡನೇ ದೊಡ್ಡ ಪಕ್ಷವಾಗಿ ಹೊರಹೊಮ್ಮಲಿದೆ. ದೇಶದ ಅತ್ಯಂತ ಹಳೆಯ ಪಕ್ಷ ಕಾಂಗ್ರೆಸ್ ಈ ಬಾರಿ 19 ಸ್ಥಾನಗಳನ್ನು ಹೆಚ್ಚಿಸಿಕೊಳ್ಳಲಿದೆ. ಉಳಿದ 168 ಕ್ಷೇತ್ರಗಳಲ್ಲಿ ಪ್ರಾದೇಶಿಕ ಪಕ್ಷಗಳು, ಸ್ವತಂತ್ರ ಅಭ್ಯರ್ಥಿಗಳು ಮೇಲುಗೈ ಸಾಧಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ದಕ್ಷಿಣ ಭಾರತದ ಹಲವು ರಾಜ್ಯಗಳಲ್ಲಿ ಬಿಜೆಪಿ ಸೀಟ್ ಹೆಚ್ಚಿಸಿಕೊಳ್ಳಲು ವಿಫಲವಾಗುತ್ತದೆ. ಉತ್ತರ ಭಾರತದಲ್ಲಿ ಕಾಂಗ್ರೆಸ್ಗೆ ಇನ್ನಷ್ಟು ನೆಲಕಚ್ಚಲಿದೆ. ಬಿಜೆಪಿ ಮತ್ತು ಎನ್ಡಿಎ ಮೈತ್ರಿಕೂಟವು ಪ್ರಾಬಲ್ಯ ಪಡೆಯಲಿದೆ. ಜೊತೆಗೆ ದಕ್ಷಿಣ ಭಾರತದಲ್ಲಿ INDIA ಒಕ್ಕೂಟ ಪ್ರಬಲವಾದ ನೆಲೆಯನ್ನು ಕಂಡುಕೊಳ್ಳಲಿದೆ ಎಂದು ಅಂದಾಜಿಸಲಾಗಿದೆ.

ಲೋಕಸಭೆ(loksabha) ಎಲೆಕ್ಷನ್ಗೆ ದಿನಗಣನೆ ಆರಂಭವಾಗಿದೆ. ಮೂರನೇ ಬಾರಿಗೆ ಅಧಿಕಾರದ ಚುಕ್ಕಾಣಿ ಹಿಡಿಯಲು ಪಿಎಂ ಮೋದಿ (PMmodiji) ಅಂಡ್ ಟೀಂ ಕಾತುರರಾಗಿದ್ದಾರೆ. NDA ಹಣಿಯಲು INDIA ನಾಯಕರು ರಣತಂತ್ರ ಹೆಣೆಯುತ್ತಿದ್ದಾರೆ . ಇದೆಲ್ಲದರ ನಡುವೆ ಕಮಲಪಾಳಯಕ್ಕೆ ಸಿಹಿ ಸುದ್ದಿಯೊಂದು ಸಿಕ್ಕಿದೆ. ಇಂಡಿಯಾ ಟುಡೇ ಗ್ರೂಪ್ನ ಮೂಡ್ ಆಫ್ ದಿ ನೇಷನ್ (MOTN) ಸಮೀಕ್ಷೆ ಹೊರಬಿದ್ದಿದೆ. ಸಮೀಕ್ಷೆಯ ಪ್ರಕಾರ, ಬಿಜೆಪಿ ನೇತೃತ್ವದ ಎನ್ಡಿಎ (National Democratic Alliance) 335 ಸ್ಥಾನಗಳನ್ನು ಗೆಲ್ಲುವ ಮೂಲಕ ಸತತ ಮೂರನೇ ಬಾರಿಗೆ ಅಧಿಕಾರಕ್ಕೆ ಮರಳಲಿದೆ ಎಂದು ಭವಿಷ್ಯ ಹೇಳಲಾಗಿದೆ. ಬಿಜೆಪಿ ಏಕಾಂಗಿಯಾಗಿ ಬರೋಬ್ಬರಿ 304 ಸ್ಥಾನಗಳನ್ನು ಗೆಲ್ಲುವ ಸಾಧ್ಯತೆ ಇದೆ. ಹಲವು ರಾಜ್ಯಗಳಲ್ಲಿ ಬಿಜೆಪಿ ಮತ್ತೊಮ್ಮೆ ಕ್ಲೀನ್ ಸ್ವೀಪ್(clean sweep) ಮಾಡಲಿದೆ. ಎನ್ಡಿಎ ಈ ಬಾರಿ 18 ಸ್ಥಾನಗಳನ್ನು ಕಳೆದುಕೊಳ್ಳುವ ನಿರೀಕ್ಷೆಯಿದೆ.

INDIA ಒಕ್ಕೂಟ ಇದರ ನೇರ ಲಾಭ ಪಡೆಯಲಿದೆ. INDIA 166 ಸೀಟುಗಳನ್ನು ಪಡೆದುಕೊಳ್ಳಲಿದೆ. ಇತರೆ ಪಕ್ಷಗಳು 42 ಸ್ಥಾನಗಳನ್ನು ಗೆಲ್ಲಬಹುದು ಎಂದು ಸಮೀಕ್ಷೆಯಲ್ಲಿ ಮಾಹಿತಿ ನೀಡಲಾಗಿದೆ. ಕಾಂಗ್ರೆಸ್(congress) 71 ಸ್ಥಾನಗಳೊಂದಿಗೆ ಎರಡನೇ ದೊಡ್ಡ ಪಕ್ಷವಾಗಿ ಹೊರಹೊಮ್ಮಲಿದೆ. ದೇಶದ ಅತ್ಯಂತ ಹಳೆಯ ಪಕ್ಷ ಕಾಂಗ್ರೆಸ್ ಈ ಬಾರಿ 19 ಸ್ಥಾನಗಳನ್ನು ಹೆಚ್ಚಿಸಿಕೊಳ್ಳಲಿದೆ. ಉಳಿದ 168 ಕ್ಷೇತ್ರಗಳಲ್ಲಿ ಪ್ರಾದೇಶಿಕ ಪಕ್ಷಗಳು, ಸ್ವತಂತ್ರ ಅಭ್ಯರ್ಥಿಗಳು ಮೇಲುಗೈ ಸಾಧಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ದಕ್ಷಿಣ ಭಾರತದ ಹಲವು ರಾಜ್ಯಗಳಲ್ಲಿ ಬಿಜೆಪಿ ಸೀಟ್ ಹೆಚ್ಚಿಸಿಕೊಳ್ಳಲು ವಿಫಲವಾಗುತ್ತದೆ. ಉತ್ತರ ಭಾರತದಲ್ಲಿ ಕಾಂಗ್ರೆಸ್ಗೆ ಇನ್ನಷ್ಟು ನೆಲಕಚ್ಚಲಿದೆ. ಬಿಜೆಪಿ ಮತ್ತು ಎನ್ಡಿಎ ಮೈತ್ರಿಕೂಟವು ಪ್ರಾಬಲ್ಯ ಪಡೆಯಲಿದೆ. ಜೊತೆಗೆ ದಕ್ಷಿಣ ಭಾರತದಲ್ಲಿ INDIA ಒಕ್ಕೂಟ ಪ್ರಬಲವಾದ ನೆಲೆಯನ್ನು ಕಂಡುಕೊಳ್ಳಲಿದೆ ಎಂದು ಅಂದಾಜಿಸಲಾಗಿದೆ.
#LokaSaba2024 #MPelection #BJPNDA #INDIA #INCindia #BJPindia #NarendraModi #RahulGandhi