ಪಂಜಾಬ್ ಚಂಡೀಗಢದಲ್ಲಿ ಇಂಡಿಯಾ ಒಕ್ಕೂಟದೊಂದಿಗೆ (INDIA Bloc) ಯಾವುದೇ ಮೈತ್ರಿ ಇಲ್ಲ ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ (Arvind Kejriwal) ಘೋಷಿಸಿದ್ದಾರೆ.

ಈ ಘೋಷಣೆಯಿಂದ ಇಂಡಿಯಾ ಒಕ್ಕೂಟಕ್ಕೆ ಮತ್ತೊಂದು ಹಿನ್ನಡೆಯಾಗಿದ್ದು, ಆಮ್ ಆದ್ಮಿ ಪಕ್ಷವು ಮಹಾಮೈತ್ರಿಯನ್ನು ತೊರೆದಿದೆ. ಪಕ್ಷದ ರಾಷ್ಟ್ರೀಯ ಸಂಚಾಲಕ ಕೇಜ್ರಿವಾಲ್ ಈ ಸಂಬಂಧ ಘೋಷಣೆ ಮಾಡಿದ್ದಾರೆ. ಅಲ್ಲದೆ ಎಎಪಿ ಎಲ್ಲಾ ಕ್ಷೇತ್ರಗಳಲ್ಲಿಯೂ ಸ್ಪರ್ಧೆ ಮಾಡಲಿದೆ ಎಂದಿದ್ದಾರೆ.

ಇಂಡಿಯಾ ಒಕ್ಕೂಟ ತೊರೆಯಲು ಆರ್‌ಎಲ್‌ಡಿ ನಾಯಕ ಜಯಂತ್ ಚೌಧರಿ ಸಿದ್ಧರಾಗಿದ್ದಾರೆ. ಮಾಜಿ ಪ್ರಧಾನಿ ಚರಣ್ ಸಿಂಗ್ ಅವರಿಗೆ ‘ಭಾರತ ರತ್ನ’ ಮರಣೋತ್ತರ ಪ್ರಶಸ್ತಿ ಘೋಷಿಸಿದ ಬಳಿಕ ಬಿಜೆಪಿ ಜೊತೆ ಮೈತ್ರಿಗೆ ಮುಂದಾಗಿದ್ದಾರೆ. ಒಬ್ಬೊಬ್ಬರೇ ಇಂಡಿಯಾ ಒಕ್ಕೂಟದಿಂದ ಹೊರ ಬರುತ್ತಿದ್ದು ಕಾಂಗ್ರೆಸ್ ಪಕ್ಷಕ್ಕೆ ದೊಡ್ಡ ಹಿನ್ನಡೆಯಾಗಿದೆ.
#I.N.D.I.A #APP #Aravindhkejriwal #Congress #Punjab #Chandigarh






