ಯಾವುದೇ ಒತ್ತಡ ಬಂದರೂ ನಾನು ಮಂಡ್ಯ(Mandya) ಲೋಕಸಭಾ(LokaSaba) ಕ್ಷೇತ್ರದಿಂದ ಸ್ಪರ್ಧಿಸಲ್ಲ ಎಂದು ನಿಖಿಲ್ ಕುಮಾರಸ್ವಾಮಿ(NikhilKumarswamy) ಸ್ಪಷ್ಟನೆ ನೀಡಿದ್ದಾರೆ.

ಮಂಡ್ಯದ ಪಾಂಡವಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭಾ ಚುನಾವಣೆಯಲ್ಲಿ ನಾನು ಹಾಗೂ ಕುಮಾರಸ್ವಾಮಿ ಅವರು ಸ್ಪರ್ಧೆ ಮಾಡಬೇಕೆಂದು ಕಾರ್ಯಕರ್ತರ, ಮುಖಂಡರ ಒತ್ತಡ ಇದೆ. ಆದರೆ ನನ್ನ ಮಾತು ಎಲ್ಲಾ ಸಮಯದಲ್ಲೂ ಒಂದೇ, ನಾನು ಮಂಡ್ಯ ಕ್ಷೇತ್ರದ ಆಕಾಂಕ್ಷಿಯಲ್ಲ. ಮಂಡ್ಯ ಕ್ಷೇತ್ರದಿಂದ ನಾನು ಸ್ಪರ್ಧಿಸಲ್ಲಿ. ಯಾವುದೇ ಒತ್ತಡ ಬಂದರೂ ನಾನು ಲೋಕಸಭಾ ಚುನಾವಣೆಗೆ ನಿಲ್ಲಲ್ಲ ಎಂದು ಚುನಾವಣೆ ಸ್ಪರ್ಧೆ ಕುರಿತ ಚರ್ಚೆಗೆ ಸ್ಪಷ್ಟನೆ ನೀಡಿದರು.

NDA ಮೈತ್ರಿಕೂಟದಲ್ಲಿ ಯಾವ ರೀತಿ ಚುನಾವಣೆ ಎದುರಿಸುವ ಬಗ್ಗೆ ಚರ್ಚೆ ಆಗಿದೆ. ನನ್ನ ಪ್ರವಾಸ ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಮಾತ್ರ ಸೀಮಿತವಾಗಿಲ್ಲ. ಕೋಲಾರ, ಹಾಸನ, ಮೈಸೂರು ಸೇರಿದಂತೆ ಎಲ್ಲಾ ಕಡೆ ಪ್ರವಾಸ ಮಾಡುತ್ತೇನೆ. ನಾನು ಮಂಡ್ಯ ಅಭ್ಯರ್ಥಿ ಆಗಿದ್ದ ಕಾರಣ ಮಂಡ್ಯದಲ್ಲಿ ಹೆಚ್ಚೆಚ್ಚು ಓಡಾಡಲು ಕೇಳಿದ್ದಾರೆ. ಮುಂದಿನ ದಿನಗಳಲ್ಲಿ ಜಿಲ್ಲೆಯ ಕ್ಷೇತ್ರಗಳಿಗೂ ಭೇಟಿ ನೀಡುತ್ತೇನೆ.
ಮೈತ್ರಿಗೆ ಬಿಜೆಪಿ ನಾಯಕರ ಅಸಮಾಧಾನ ವಿಚಾರವಾಗಿ ಮಾತನಾಡಿದ ಅವರು, ಅಮಿತ್ ಶಾ ಅವರ ಸಭೆಯಲ್ಲಿ ಬಿಜೆಪಿಯ ನಾಯಕರಿಗೆ ಸಂದೇಶ ಹೋಗಿದೆ. ನಮ್ಮ ಕಡೆಯಿಂದ ಯಾವುದೇ ಅಸಮಾಧಾನ ಇಲ್ಲ. ನಾವು ಯಾವುದೇ ಪ್ರತಿಕ್ರಿಯೆ ಕೊಡಲ್ಲ. ಮೂರನೇ ಬಾರಿ ಮೋದಿ ಪ್ರಧಾನಿ ಆಗಬೇಕೆಂದು ನಮ್ಮ ಆಶಯ. ನಾವು ಯಾವುದೇ ಗೊಂದಲಕ್ಕೆ ಎಡೆ ಮಾಡಿಕೊಡಲ್ಲ ಎಂದಿದ್ದಾರೆ.
#Mandya #NikhilKumaraswamy #MPelection #JDSBJP