ಬೆಂಗಳೂರು (Bengaluru): ಮಹತ್ವದ ಹೆಜ್ಜೆಯಾಗಿ ಆರೋಗ್ಯ ಇಲಾಖೆ (Health Department) ನವಜಾತ ಶಿಶುಗಳ ಆಂಬ್ಯುಲೆನ್ಸ್ (Ambulance) ಸೇವೆಯನ್ನು ಆರಂಭಿಸಿದೆ.
ಆರೋಗ್ಯ ಸಚಿವ (Health Minister) ದಿನೇಶ್ ಗುಂಡೂರಾವ್ (Dinesh Gundurao) 4 ನವಜಾತ ಆಂಬ್ಯುಲೆನ್ಸ್ ಸೇವೆಗಳಿಗೆ ಚಾಲನೆ ನೀಡಿದ್ದಾರೆ.
ನವಜಾತ ಶಿಶುಗಳಿಗೆ ತುರ್ತು ಆರೋಗ್ಯ ಸೇವೆ ಮತ್ತು ಶಿಶುಗಳ ಮರಣ ಪ್ರಮಾಣವನ್ನು ಏಕ ಅಂಕಿಗೆ ಇಳಿಸುವ ಗುರಿ ಸಾಧಿಸುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಇದನ್ನು ಪ್ರಾರಂಭಿಸಿದೆ.
ಆಂಬ್ಯುಲೆನ್ಸ್ ಸೇವೆಗೆ ಚಾಲನೆ ನೀಡಿ ಮಾತನಾಡಿದ ದಿನೇಶ್ ಗುಂಡೂರಾವ್ ಅವರು, ಅವಧಿಪೂರ್ವವಾಗಿ ಜನಿಸಿದ ಮಗು ಮತ್ತು ಗಂಭೀರ ಆರೋಗ್ಯ ಸಮಸ್ಯೆಗೆ ತುತ್ತಾಗಿರುವ ಶಿಶುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಸುರಕ್ಷಿತವಾಗಿ ಕರೆದೊಯ್ಯುವ ನಿಟ್ಟಿನಲ್ಲಿ ಈ ಅಂಬ್ಯುಲೆನ್ಸ್ ಗಳು ಸಹಕಾರಿಯಾಗಲಿವೆ. ಸುಧಾರಿತ ಜೀವ ರಕ್ಷಕ ಸೌಲಭ್ಯಗಳನ್ನು ಒಳಗೊಂಡ ವಾಹನದಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಸುರಕ್ಷಿತವಾಗಿ ಕರೆದೊಯ್ಯಬಹುದಾಗಿದೆ. ಜಿಲ್ಲಾ ಮತ್ತು ತಾಲ್ಲೂಕು ಕೇಂದ್ರಗಳಿಂದ ದೂರದ ಪ್ರದೇಶಗಳಲ್ಲಿ ಆರೋಗ್ಯ ಸಮಸ್ಯೆ ಇರುವ ಮತ್ತು ವಿಶೇಷ ಆರೈಕೆಯ ಅಗತ್ಯವಿರುವ ಶಿಶುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಸುರಕ್ಷಿತವಾಗಿ ಆಸ್ಪತ್ರೆಗಳಿಗೆ ಸಾಗಿಸುವಲ್ಲಿ ಅಂಬ್ಯುಲೆನ್ಸ್ ಗಳ ಸೇವೆ ಮುಖ್ಯವಾಗಿದೆ ಎಂದರು.
ನೂತನ ನವಜಾತ ಶಿಶು ಆಂಬ್ಯುಲೆನ್ಸ್ಗಳು ಸೇವೆಗೆ ಲಭ್ಯವಾಗುವುದರ ಮೂಲಕ ಆರೈಕೆಯಲ್ಲಿನ ಅಂತರವು ಕಡಿಮೆಯಾಗಲಿದೆ. ವೆಂಟಿಲೇಟರ್, ಮೇಲ್ವಿಚಾರಣೆ ವ್ಯವಸ್ಥೆಗಳು ಸೇರಿದಂತೆ ಸುಧಾರಿತ ಜೀವ ರಕ್ಷಕ ಸಾಧನಗಳನ್ನು ಈ ಆಂಬ್ಯುಲೆನ್ಸ್ ಗಳು ಒಳಗೊಂಡಿವೆ. ಗಂಭೀರ ಅನಾರೋಗ್ಯ ಸಮಸ್ಯೆ ಎದುರಿಸುತ್ತಿರುವ ನವಜಾತ ಶಿಶುಗಳನ್ನು ಆಂಬ್ಯುಲೆನ್ಸ್ನಲ್ಲಿ ಆರೈಕೆ ಮಾಡಲು ಪರಿಣತಿ ಹೊಂದಿರುವ ನರ್ಸ್ಗಳು ಲಭ್ಯವಿರುತ್ತಾರೆ. ರಾಜ್ಯದ ನಾಲ್ಕು ವಿಭಾಗಗಳ ಪ್ರಮುಖ ಆಸ್ಪತ್ರೆಗಳಿಗೆ ನವಜಾತಾ ಅಂಬ್ಯುಲೆನ್ಸ್ ಅನ್ನ ವಿತರಿಸಲಾಗುತ್ತಿದ್ದು, ಮುಂಬರುವ ದಿನಗಳಲ್ಲಿ ರಾಜ್ಯಾದ್ಯಂತ ನವಜಾತಾ ಅಂಬ್ಯುಲೆನ್ಸ್ ಸೇವೆ ಒದಗಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವುದಾಗಿ ಹೇಳಿದರು.
ಬೆಂಗಳೂರಿನ ವಾಣಿವಿಲಾಸ ಆಸ್ಪತ್ರೆ, ಮೈಸೂರಿನ ಚಲುವಾಂಬ ಆಸ್ಪತ್ರೆ, ರಾಯಚೂರಿನ ರಾಯಚೂರು ವೈದ್ಯಕೀಯ ವಿಜ್ಞಾನ ಸಂಸ್ಥೆ, ಹುಬ್ನಳ್ಳಿಯ ಕರ್ನಾಟಕ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಗೆ ನವಜಾತಾ ಅಂಬ್ಯುಲೆನ್ಸ್ ಗಳನ್ನ ನಿಗದಿಪಡಿಸಲಾಗಿದೆ. ಆರಂಭಿಕ ಹಂತದಲ್ಲೇ ಚಿಕಿತ್ಸೆ ನೀಡುವುದರಿಂದ ಗಂಭೀರ ಅನಾರೋಗ್ಯ ಸಮಸ್ಯೆ ಇರುವ ನವಜಾತ ಶಿಶುಗಳು ಬದುಕುಳಿಯುವ ಸಾಧ್ಯತೆಗಳು ಹೆಚ್ಚಾಗಲಿದೆ.
8’ಜಿ ನೇತ್ರ ಚಿಕಿತ್ಸಾ ಘಟಕ’ಕ್ಕೆ ಚಾಲನೆ: ರಾಷ್ಟ್ರೀಯ ಅಂಧತ್ವ ಮತ್ತು ದೃಷ್ಟಿಹೀನತೆಯ ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ (NPCB&VI) 8 ‘ಜಿಲ್ಲಾ ಸಂಚಾರಿ ನೇತ್ರ ಚಿಕಿತ್ಸಾ ಘಟಕ’ ಕ್ಕೂ ಚಾಲನೆ ನೀಡಿದರು. ಆರೋಗ್ಯ ಸೇವೆಗಳು ಲಭ್ಯವಿಲ್ಲದ ಗ್ರಾಮೀಣ, ಗುಡ್ಡಗಾಡು ಪ್ರದೇಶಗಳಲ್ಲಿರುವ ಜನರಿಗೆ ಕಣ್ಣಿನ ಆರೈಕೆ ಸೇವೆಗಳನ್ನು ತಲುಪಿಸುವ ನಿಟ್ಟಿನಲ್ಲಿ ಜಿಲ್ಲಾ ಸಂಚಾರಿ ನೇತ್ರ ಚಿಕಿತ್ಸಾ ಘಟಕ’ವು ನೆರವಾಗಲಿದೆ.
#bengaluru #ambulance #dineshgundurao #health #healthdepartment