ಅಬುಧಾಬಿ (Abudhabi): ಅಬುಧಾಬಿಯಲ್ಲಿ ಲೋಕಾರ್ಪಣೆಗೊಂಡ ಬಿಎಪಿಎಸ್ ಹಿಂದೂ ದೇವಾಲಯ (BAPS Hindu temple) ಏಕತೆ ಮತ್ತು ಸಾಮರಸ್ಯದ ಸಂಕೇತವಾಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಹೇಳಿದ್ದಾರೆ.
ಮಂದಿರವನ್ನು ಉದ್ಘಾಟಿಸಿದ ಬಳಿಕ ಮಾತನಾಡಿದ ಪ್ರಧಾನಿ ಮೋದಿ ಅವರು, ಯುಎಇ (UAE) ಒಂದು ಸುವರ್ಣ ಅಧ್ಯಾಯವನ್ನು ಬರೆದಿದೆ. ದೇವಾಲಯ ಏಕತೆ ಮತ್ತು ಸಾಮರಸ್ಯದ ಸಂಕೇತವಾಗಿದೆ. ದೇವಾಲಯ ನಿರ್ಮಾಣದಲ್ಲಿ ಯುಎಇ ಸರ್ಕಾರದ ಪಾತ್ರ ಶ್ಲಾಘನೀಯವಾಗಿದೆ ಎಂದರು.
ಇಲ್ಲಿಯವರೆಗೆ ಬುರ್ಜ್ ಖಲೀಫಾ, ಫ್ಯೂಚರ್ ಮ್ಯೂಸಿಯಂ, ಶೇಖ್ ಜಾಯೆದ್ ಮಸೀದಿ ಮತ್ತಿತರ ಹೈಟೆಕ್ ಕಟ್ಟಡಗಳಿಗೆ ಹೆಸರುವಾಸಿಯಾಗಿದ್ದ ಯುಎಇ ಇದೀಗ ತನ್ನ ಗುರುತಿಗೆ ಮತ್ತೊಂದು ಸಾಂಸ್ಕೃತಿಕ ಅಧ್ಯಾಯವನ್ನು ಸೇರಿಸಿದೆ ಎಂದು ಹೇಳಿದರು.
ಮುಂಬರುವ ದಿನಗಳಲ್ಲಿ ಹೆಚ್ಚಿನ ಸಂಖ್ಯೆಯ ಭಕ್ತರು ಇಲ್ಲಿಗೆ ಆಗಮಿಸುವ ವಿಶ್ವಾಸವಿದೆ. ಇದು ಯುಎಇಗೆ ಬರುವ ಜನರ ಸಂಖ್ಯೆಯನ್ನು ಹೆಚ್ಚಿಸುತ್ತದೆ ಮತ್ತು ಜನರ ಸಂಪರ್ಕವೂ ಹೆಚ್ಚಾಗುತ್ತದೆ. ಇಡೀ ಭಾರತ ಮತ್ತು ಪ್ರಪಂಚದಾದ್ಯಂತ ವಾಸಿಸುವ ಲಕ್ಷಾಂತರ ಭಾರತೀಯರ ಪರವಾಗಿ ಅಧ್ಯಕ್ಷ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಮತ್ತುಯುಎಎ ಸರ್ಕಾರಕ್ಕೆ ಹೃತ್ಪೂರ್ವಕ ಕೃತಜ್ಞತೆ ವ್ಯಕ್ತಪಡಿಸುತ್ತೇನೆ ಎಂದು ಹೇಳಿದರು.
#UAE #abudhabi #bapsmandir #narendramodi