• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, June 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇತರೆ / Others

ಸೌಜನ್ಯ ಪ್ರಕರಣ: ಸಿಬಿಐಗೆ ಹೈಕೋರ್ಟ್ ನೋಟೀಸ್

Any Mind by Any Mind
February 21, 2024
in ಇತರೆ / Others, ಕರ್ನಾಟಕ
0
ಸೌಜನ್ಯ ಪ್ರಕರಣ: ಸಿಬಿಐಗೆ ಹೈಕೋರ್ಟ್ ನೋಟೀಸ್
Share on WhatsAppShare on FacebookShare on Telegram

ಧರ್ಮಸ್ಥಳದ ಸೌಜನ್ಯ(Soujanya) ಮೇಲಿನ ಅತ್ಯಾಚಾರ ಹಾಗೂ ಕೊಲೆ(Murder) ಪ್ರಕರಣ ಕುರಿತು ಹೈಕೋರ್ಟ್‌(High Court) ನ್ಯಾಯಮೂರ್ತಿ ಕೆ ನಟರಾಜನ್‌ ಅವರಿದ್ದ ಏಕಸದಸ್ಯ ಪೀಠವು CBIಗೆ ನೋಟಿಸ್‌ ಜಾರಿಗೊಳಿಸಲು ಆದೇಶಿಸಿದೆ.

ಮೃತ ಬಾಲಕಿಯ ತಂದೆ ಧರ್ಮಸ್ಥಳದ(Dharmasthala) ಪಾಂಗಳದ ನಿವಾಸಿ ಚಂದಪ್ಪಗೌಡ ಅವರು ಪ್ರಕರಣದ ಮರು ತನಿಖೆಗೆ ಆದೇಶಿಸಬೇಕು ಎಂದು ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ಪೀಠ ಈ ಆದೇಶ ನೀಡಿದೆ. ಪ್ರಕರಣದಿಂದ ಸಂತೋಷ್‌ ರಾವ್ ಅವರನ್ನು ಖುಲಾಸೆಗೊಳಿಸಿ ವಿಚಾರಣಾ ನ್ಯಾಯಾಲಯ ನೀಡಿರುವ ತೀರ್ಪು ಪ್ರಶ್ನಿಸಿ ಸಿಬಿಐ ಸಲ್ಲಿಸಿರುವ ಕ್ರಿಮಿನಲ್‌(Criminal) ಮೇಲ್ಮನವಿ ನ್ಯಾಯಪೀಠದ ಮುಂದೆ ವಿಚಾರಣೆಗೆ ಬಾಕಿ ಇದೆ. ಮೇಲ್ಮನವಿಯ ಜೊತೆಗೆ ಈ ಅರ್ಜಿಯನ್ನೂ ವಿಚಾರಣೆಗೆ ನಿಗದಿಗೊಳಿಸಬೇಕು ಎಂದು ಅರ್ಜಿದಾರರ ಪರ ವಕೀಲ ಬಾಲಕೃಷ್ಣ ಮನವಿ ಮಾಡಿದರು. ಇದನ್ನು ಪರಿಗಣಿಸಿದ ಪೀಠ ರೋಸ್ಟರ್‌ ಅನುಸಾರ ಸೂಕ್ತ ವಿಭಾಗೀಯ ನ್ಯಾಯಪೀಠದ ಮುಂದೆ ವಿಚಾರಣೆಗೆ ನಿಗದಿ ಮಾಡುವಂತೆ ಮುಖ್ಯ ನ್ಯಾಯಮೂರ್ತಿಗಳಿಂದ ಅನುಮತಿ ಪಡೆಯುವಂತೆ ರಿಜಿಸ್ಟ್ರಿಯವರಿಗೆ ಸೂಚಿಸಿದೆ.

ADVERTISEMENT

ರಾಜ್ಯ ಗೃಹಇಲಾಖೆ(Home Department) ಕಾರ್ಯದರ್ಶಿ, ರಾಜ್ಯ ಪೊಲೀಸ್‌ ಮಹಾ ನಿರ್ದೇಶಕರು, CID, ADGP, ಅಪರಾಧ ಮತ್ತು ತಾಂತ್ರಿಕ ಸೇವೆಗಳ ವಿಭಾಗದ ADGP, ದಕ್ಷಿಣಕನ್ನಡ ಪೊಲೀಸ್‌ ವರಿಷ್ಠಾಧಿಕಾರಿ, CID ಉಪ ಪೊಲೀಸ್‌ ವರಿಷ್ಠಾಧಿಕಾರಿ, ಬೆಳ್ತಂಗಡಿ ಪೊಲೀಸ್‌ ಠಾಣಾಧಿಕಾರಿ, ಮತ್ತು CBIಗೆ ನೋಟಿಸ್‌ ಜಾರಿಗೊಳಿಸಲು ಆದೇಶಿಸಿದೆ. ಖುಲಾಸೆಗೊಂಡಿರುವ ಆರೋಪಿ ಸಂತೋಷ್‌ ರಾವ್‌ ಹತ್ತನೇ ಪ್ರತಿವಾದಿಯಾಗಿದ್ದಾರೆ. ಆರೋಪಿ ಸಂತೋಷ್‌ ರಾವ್‌(Santhosh Rao) ನಿರಪರಾಧಿ, ಆತನ ವಿರುದ್ಧ ಯಾವುದೇ ಸಾಕ್ಷ್ಯ ಇಲ್ಲ ಎಂದು ಜೂನ್‌ ೧೬ರಂದು ಸೆಷನ್ಸ್‌ ನ್ಯಾಯಾಲಯ ಖುಲಾಸೆಗೊಳಿಸಿತ್ತು. ಈ ಪ್ರಕರಣದ ನೈಜ ಆರೋಪಿಗಳನ್ನು ಪತ್ತೆ ಮಾಡಿ ಶಿಕ್ಷೆ ವಿಧಿಸಬೇಕು ಎಂದು ಒತ್ತಾಯಿಸಿ ಕಳೆದ ಎಂಟು ತಿಂಗಳಿನಿಂದ ರಾಜ್ಯಾದ್ಯಂತ ಪ್ರತಿಭಟನೆಗಳು ನಡೆದಿದ್ದವು. ದಕ್ಷಿಣಕನ್ನಡದಲ್ಲಿ ಈಗಲೂ ಪ್ರತಿಭಟನೆಗಳು ನಡೆಯುತ್ತಿವೆ. ಸರ್ಕಾರ ಮರು ತನಿಖೆಗೆ ಆದೇಶ ನೀಡಬೇಕು ಎಂಬುದು ಪ್ರತಿಭಟನಾಕಾರರ ಆಗ್ರಹವಾಗಿದೆ.

#SoujanyaCase #RapeMurder #HighCourt #CBI #Karnataka

Previous Post

ಬಿಜೆಪಿಯವರು ರಾಷ್ಟ್ರೀಯವಾದಿಗಳಾಗಲು ಹೇಗೆ ಸಾಧ್ಯ?: ಮುಖ್ಯಮಂತ್ರಿ ಸಿದ್ದರಾಮಯ್ಯ

Next Post

ಮಾಜಿ ಸಂಸದ ಮುದ್ದಹನುಮೇಗೌಡ ಕಾಂಗ್ರೆಸ್‌ ಸೇರ್ಪಡೆಗೆ ಮುಹೂರ್ತ ಫಿಕ್ಸ್‌

Related Posts

ಮತ್ತೆ ಒಂದಾದ ‘ಪ್ರೇಮಂ’ ಜೋಡಿ: ನಿವಿನ್ ಪೌಲಿ 50ನೇ ಸಿನಿಮಾ ‘ವಿಜಯಂ’
Top Story

ಮತ್ತೆ ಒಂದಾದ ‘ಪ್ರೇಮಂ’ ಜೋಡಿ: ನಿವಿನ್ ಪೌಲಿ 50ನೇ ಸಿನಿಮಾ ‘ವಿಜಯಂ’

by ಪ್ರತಿಧ್ವನಿ
June 29, 2026
0

ಬೆಂಗಳೂರು : ಮಲಯಾಳಂ ಸಿನಿಮಾ ಪ್ರೇಕ್ಷಕರು ಕುತೂಹಲದಿಂದ ಕಾಯುತ್ತಿದ್ದ ಬಹುನಿರೀಕ್ಷಿತ ಘೋಷಣೆ ಕೊನೆಗೂ ಹೊರ ಬಿದ್ದಿದೆ. 12 ವರ್ಷಗಳ ನಂತರ, ಬ್ಲಾಕ್ ಬಸ್ಟರ್ ಜೋಡಿ ಎನಿಸಿಕೊಂಡಿರುವ ನಟ...

Read moreDetails
ಬೆಂಗಳೂರಿನಿಂದ 100 ಕಿ.ಮೀ ದೂರದ ಸ್ಥಳಗಳಿಗೆ ಚತುಷ್ಪಥ ರೈಲ್ವೆ: ಸಚಿವ ವಿ.ಸೋಮಣ್ಣ

ಬೆಂಗಳೂರಿನಿಂದ 100 ಕಿ.ಮೀ ದೂರದ ಸ್ಥಳಗಳಿಗೆ ಚತುಷ್ಪಥ ರೈಲ್ವೆ: ಸಚಿವ ವಿ.ಸೋಮಣ್ಣ

June 29, 2026
ವಿದ್ಯುತ್ ಸರಬರಾಜು ಖಾಸಗೀಕರಣ ಪ್ರಶ್ನೆಯೇ ಇಲ್ಲ: ಸಚಿವ ಕೆ.ಜೆ ಜಾರ್ಜ್

ವಿದ್ಯುತ್ ಸರಬರಾಜು ಖಾಸಗೀಕರಣ ಪ್ರಶ್ನೆಯೇ ಇಲ್ಲ: ಸಚಿವ ಕೆ.ಜೆ ಜಾರ್ಜ್

June 29, 2026
ರೈತರಿಗೆ ನೋಯಿಸಬೇಡಿ..ಟೌನ್‌ಶಿಪ್ ಯೋಚನೆ ಕೈ ಬಿಡಿ: ಕೇಂದ್ರ ಸಚಿವ ವಿ.ಸೋಮಣ್ಣ ಸಲಹೆ

ರೈತರಿಗೆ ನೋಯಿಸಬೇಡಿ..ಟೌನ್‌ಶಿಪ್ ಯೋಚನೆ ಕೈ ಬಿಡಿ: ಕೇಂದ್ರ ಸಚಿವ ವಿ.ಸೋಮಣ್ಣ ಸಲಹೆ

June 29, 2026
ವಿಜಯೇಂದ್ರರನ್ನು ಅಧಿಕಾರದಿಂದ ಕಿತ್ತು ಹಾಕಿ: ಸದಾನಂದ ಗೌಡರದ್ದು ಎನ್ನಲಾದ ಆಡಿಯೋ ವೈರಲ್

ವಿಜಯೇಂದ್ರರನ್ನು ಅಧಿಕಾರದಿಂದ ಕಿತ್ತು ಹಾಕಿ: ಸದಾನಂದ ಗೌಡರದ್ದು ಎನ್ನಲಾದ ಆಡಿಯೋ ವೈರಲ್

June 29, 2026
Next Post
ಬಿಜೆಪಿಗೆ ಮುದ್ದುಹನುಮೇಗೌಡ ಗುಡ್‌ಬೈ?

ಮಾಜಿ ಸಂಸದ ಮುದ್ದಹನುಮೇಗೌಡ ಕಾಂಗ್ರೆಸ್‌ ಸೇರ್ಪಡೆಗೆ ಮುಹೂರ್ತ ಫಿಕ್ಸ್‌

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada