• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬಿಜೆಪಿ ಸಭಾತ್ಯಾಗದ ನಡುವೆ ಪ್ರೀಮಿಯಂ ಎಫ್ಎಆರ್ ತಿದ್ದುಪಡಿ ವಿಧೇಯಕ ಅಂಗೀಕಾರ

Any Mind by Any Mind
February 22, 2024
in Top Story, ಕರ್ನಾಟಕ, ರಾಜಕೀಯ
0
ಖಾಸಗಿ ಶಾಲೆಗಳಲ್ಲಿ ನಾಡಗೀತೆ ಕಡ್ಡಾಯವಲ್ಲ: ಅಧಿವೇಶದಲ್ಲಿ ಭಾರೀ ಚರ್ಚೆ, ಆಕ್ರೋಶ ವ್ಯಕ್ತ
Share on WhatsAppShare on FacebookShare on Telegram

ಬೆಂಗಳೂರು (Bengaluru) : ‘ಪ್ರೀಮಿಯಂ ಎಫ್ಎಆರ್’ ಖರೀದಿ ಮತ್ತು ಮಾರಾಟಕ್ಕೆ ಅವಕಾಶ ಕಲ್ಪಿಸುವ ಮಸೂದೆ ವಿಧಾನ ಪರಿಷತ್ತಿನಲ್ಲಿ ಸುದೀರ್ಘ ಚರ್ಚೆ ಹಾಗೂ ಬಿಜೆಪಿ ಸದಸ್ಯರ ಸಭಾತ್ಯಾಗದ ನಡುವೆ ಗುರುವಾರ ಅಂಗೀಕಾರಗೊಂಡಿತು.

ADVERTISEMENT

ಬೆಂಗಳೂರು ನಗರಾಭಿವೃದ್ಧಿ ಖಾತೆ ಹೊಂದಿರುವ ಡಿಸಿಎಂ ಡಿ.ಕೆ.ಶಿವಕುಮಾರ್ (D.K.Shivakumar) ಅವರು ವಿಧಾನಸಭೆಯಲ್ಲಿ ಅಂಗೀಕಾರ ಸ್ವರೂಪದಲ್ಲಿರುವ ‘ಕರ್ನಾಟಕ ಪಟ್ಟಣ ಮತ್ತು ಗ್ರಾಮಾಂತರ ಯೋಜನೆ (ತಿದ್ದುಪಡಿ) ಮಸೂದೆ-2024’ ಅನ್ನು ವಿಧಾನ ಪರಿಷತ್ನಲ್ಲಿ ಮಂಡಿಸಿದರು.

ಮಾರ್ಗಸೂಚಿ ದರದ ಶೇ.40 ರಷ್ಟು ಶುಲ್ಕವನ್ನು ಸ್ಥಳೀಯ ಯೋಜನಾ ಪ್ರಾಧಿಕಾರ ಅಥವಾ ನಗರ ಸ್ಥಳೀಯ ಸಂಸ್ಥೆಗಳಿಗೆ ಪಾವತಿಸುವ ಮೂಲಕ ಬಹುಮಹಡಿ ಕಟ್ಟಡಗಳಲ್ಲಿ ಹೆಚ್ಚುವರಿ ಅಂತಸ್ತುಗಳನ್ನು ನಿರ್ಮಿಸಬಹುದು ಹಾಗೂ ಎಫ್ಎಆರ್ ಗಳನ್ನು ಬೇರೆಯವರಿಗೆ ಮಾರಾಟ ಮಾಡುವ ಅವಕಾಶವನ್ನು ಈ ಮಸೂದೆಯಲ್ಲಿ ಕಲ್ಪಿಸಲಾಗಿದೆ.

ಪ್ರೀಮಿಯಂ ಎಫ್ಎಆರ್ ಮಿತಿಯನ್ನು ಶೇ. 0.4 ಕ್ಕೆ ನಿಗದಿಪಡಿಸಲಾಗಿದೆ ಹಾಗೂ ಟಿಡಿಆರ್ (Transferable Development Rights) ಬಳಸಿ ನಿರ್ಮಿಸಿರುವ ಕಟ್ಟಡದ ಎಫ್ಎಆರ್ ಮಿತಿಯು ಶೇ 0.6 ರಷ್ಟನ್ನು ಮೀರುವಂತಿಲ್ಲ ಎಂದು ಹೇಳಲಾಗಿದೆ. ಇದರಿಂದಾಗಿ ಸ್ಥಳೀಯ ಸಂಸ್ಥೆಗಳ ಆದಾಯ ಹೆಚ್ಚಾಗುತ್ತದೆ ಮತ್ತು ಅಭಿವೃದ್ದಿ ಕಾರ್ಯಗಳಿಗೆ ವಿನಿಯೋಗವಾಗುತ್ತದೆ. ಎಫ್‌ಎಆರ್‌ಗಳ ಮಾರಾಟದಿಂದ ಸಂಗ್ರಹವಾಗುವ ಶುಲ್ಕವನ್ನು ಭೂಸ್ವಾಧೀನ ಮತ್ತು ಮೂಲಸೌಕರ್ಯ ಅಭಿವೃದ್ಧಿ ಕಾಮಗಾರಿಗಳಿಗೆ ಬಳಸಿಕೊಳ್ಳಬಹುದು ಎಂದು ತಿಳಿಸಲಾಗಿದೆ.

ನಿವೇಶನದ ಅಳತೆ ಮತ್ತು ಮುಂದಿರುವ ರಸ್ತೆಯ ಅಳತೆ ಮೇಲೆ ಇಂತಿಷ್ಟು ಅಂತಸ್ತಿನ ಕಟ್ಟಡ ನಿರ್ಮಾಣ ಮಾಡಬಹುದು ಎಂದು ಅಳತೆ ಮಾಡಿ ಅನುಮತಿ ನೀಡಲಾಗುತ್ತಿತ್ತು. ಈ ಮಸೂದೆಯಿಂದಾಗಿ ಕಟ್ಟಡ ನಿರ್ಮಿಸುವವರು ಪ್ರೀಮಿಯಂ ಎಫ್ಎಆರ್‌‌ಗಳನ್ನು ಖರೀದಿಸಿ, ಕಟ್ಟಡದ ನಿವೇಶನದ ಅಳತೆಗಿಂತ ಹೆಚ್ಚುವರಿ ಅಂತಸ್ತುಗಳನ್ನು ನಿರ್ಮಿಸಿಕೊಳ್ಳಬಹುದು.

ಆಡಳಿತ ಪಕ್ಷದ ಸದಸ್ಯ ನಾಗರಾಜ್ ಯಾದವ್ ಮಾತನಾಡಿ “ಹಳೆಯ ಕಾನೂನಿಗೆ ಹೊಸ ರೂಪ ನೀಡಿರುವುದು ಸ್ವಾಗತಾರ್ಹ. ಸ್ಥಳೀಯ ಸಂಸ್ಥೆಗಳಿಗೆ ಅನುಮತಿ ನೀಡುವ ಅಧಿಕಾರ ನೀಡಿರುವ ಕಾರಣ ಕೆಲಸದ ವಿಳಂಬ ತಪ್ಪುತ್ತದೆ” ಎಂದು ವಿಧೇಯಕಕ್ಕೆ ಬೆಂಬಲ ಸೂಚಿಸಿದರು.

“ಎಫ್ಎಆರ್ ಜಾರಿಯಿಂದ ಬಿಜೆಪಿ ಸದಸ್ಯ ಕೆ.ಎಸ್.ನವೀನ್ ತಿದ್ದುಪಡಿಯನ್ನು ಸ್ವಾಗತಿಸಿ “ಸಣ್ಣ ರಸ್ತೆಗಳು ಇರುವ ಕಡೆ ಜನದಟ್ಟಣೆ ಉಂಟಾಗುತ್ತದೆ ಮತ್ತು ಅಗ್ನಿ ಅವಘಡಗಳು ಉಂಟಾದಾಗ ತೊಂದರೆಯಾಗುತ್ತದೆ ಈ ಕುರಿತು ಸರ್ಕಾರ ಆಲೋಚಿಸಬೇಕು” ಎಂದು ಸಲಹೆ ನೀಡಿದರು

“ಬೆಂಗಳೂರಿನ ಮೂಲಸೌಕರ್ಯಗಳ ಮೇಲೆ ಒತ್ತಡ ಹೆಚ್ಚಾಗಲಿದೆ. ಆದ ಕಾರಣ ಸಮಿತಿ ರಚಿಸಿ ಮತ್ತೊಂದು ಸುತ್ತಿನ ಪರಾಮರ್ಶೆಯ ನಂತರ ಮತ್ತೊಮ್ಮೆ ಪ್ರೀಮಿಯಂ ಎಫ್ ಎಆರ್ ತಿದ್ದುಪಡಿ ಕಾಯ್ದೆಯನ್ನು ಜಾರಿಗೊಳಿಸಲಿ” ಎಂದು ಬಿಜೆಪಿ ಸದಸ್ಯ ಕೇಶವಪ್ರಸಾದ್.ಎಸ್ ಸರ್ಕಾರಕ್ಕೆ ಆಗ್ರಹಿಸಿದರು. ಪರಾಮರ್ಶನ ಸಮಿತಿ ರಚಿಸುವುದಕ್ಕೆ ಆಡಳಿತ ಪಕ್ಷದ ಸದಸ್ಯ ಎಂ.ಆರ್.ಸೀತಾರಾಂ ಅವರು ವಿರೋಧಿಸಿದರು.

ವಿಧೇಯಕದ ಬಗ್ಗೆ ವಿಪಕ್ಷಗಳ ಸದಸ್ಯರು ತಕರಾರು ವ್ಯಕ್ತಪಡಿಸಿದಾಗ “ನಿಮ್ಮ ಎಲ್ಲಾ ಸಂಶಯಗಳಿಗೆ ನಾನು ಉತ್ತರ ನೀಡುತ್ತೇನೆ. ನಿಮ್ಮ ಎಲ್ಲಾ ಸಲಹೆಗಳನ್ನು ಸ್ವೀಕರಿಸಲು ತಯಾರಿದ್ದೇನೆ. ನೀವು ಮಾಡಿದ ಕಾನೂನನ್ನೇ ಸರಳೀಕರಣ ಮಾಡಿ ಕರ್ನಾಟಕದ ಎಲ್ಲಾ ಭಾಗದ ಜನರು ಇದರ ಉಪಯೋಗ ಪಡೆಯಲಿ ಮತ್ತು ಸ್ಥಳೀಯ ಸಂಸ್ಥೆಗಳ ಆದಾಯ ಹೆಚ್ಚಾಗಲಿ ಎನ್ನುವುದಷ್ಟೇ ನಮ್ಮ ಉದ್ದೇಶ. ಬೊಮ್ಮಾಯಿ ಅವರ ಸರ್ಕಾರವೂ ಇದನ್ನು ತಿದ್ದುಪಡಿ ಮಾಡಲು ಹೊರಟಿತ್ತು” ಎಂದು ಡಿಸಿಎಂ ಶಿವಕುಮಾರ್ ಅವರು ಉತ್ತರಿಸಿದರು.

“ಈಗಾಗಲೇ ಈ ಕಾನೂನು ಇದೆ. ನಾವು ಹೊಸದಾಗಿ ತರಲು ಮುಂದಾಗಿಲ್ಲ. ಸ್ಥಳೀಯ ಸಂಸ್ಥೆಗಳು ಸಹ ಇದರ ಉಪಯೋಗ ಪಡೆದುಕೊಳ್ಳಲಿ ಎಂದು ತಿದ್ದುಪಡಿ ಮಾಡಿದ್ದೇವೆ. ಮಂಗಳೂರಿನಲ್ಲಿ ಪ್ರೀಮಿಯಂ ಎಫ್ ಎಆರ್ ಜಾರಿಯಾಗಿತ್ತು. ಇದರಿಂದಾಗಿ ಕಳೆದ 5-6 ವರ್ಷಗಳಲ್ಲಿ 2-3 ಸಾವಿರ ಕೋಟಿಯಷ್ಟು ಆದಾಯ ಬಂದಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲಾ ಕಡೆ ಈ ಅವಕಾಶ ಕಲ್ಪಿಸಲು ವಿಧೇಯಕಕ್ಕೆ ತಿದ್ದುಪಡಿ ಮಾಡಲಾಗಿದೆ” ಎಂದು ಡಿಸಿಎಂ ಹೇಳಿದರು.

ಈ ಬಿಲ್ ಅನ್ನು ತಡೆ ಹಿಡಿದು, ಹೆಚ್ಚಿನ ಚರ್ಚೆ ನಡೆಸುವುದು ಉತ್ತಮ. ಎಲ್ಲರೊಟ್ಟಿಗೆ ಮತ್ತೊಂದು ಸುತ್ತಿನ ಮಾತುಕತೆ ನಡೆಸಿ ಪುನಃ ಮಂಡನೆ ಮಾಡಿ. ಇದರಿಂದ ಅಧಿಕಾರಿಗಳ ಕೈಗೆ ಎಲ್ಲಾ ಅಧಿಕಾರಗಳನ್ನುನೀಡಿದಂತಾಗುತ್ತದೆ” ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟಾ ಶ್ರೀನಿವಾಸ ಪೂಜಾರಿ ಅವರು ವಿಧೇಯಕವನ್ನು ವಿರೋಧಿಸಿ ಸಭಾತ್ಯಾಗ ಮಾಡಿದರು.

#karnataka #bengaluru #assembly #session #dkshivakumar

Previous Post

ಸಿಎಂ ಸಿದ್ದರಾಮಯ್ಯಗೆ ಕೋರ್ಟ್ ಸಂಕಷ್ಟ, ಏನಿದು ಟರ್ಫ್ ಕ್ಲಬ್ ಪ್ರಕರಣ

Next Post

ಲೋಕಸಭಾ ಚುನಾವಣೆಗಾಗಿ 24 ರಾಜ್ಯಗಳಿಗೆ ಅಳಿಸಲಾಗದ ಶಾಯಿ ಪೂರೈಕೆ

Related Posts

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ
Top Story

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

by ಪ್ರತಿಧ್ವನಿ
April 30, 2026
0

ಬೆಂಗಳೂರು : ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು ಜನರ ಸಾವಿಗೆ ಕಾರಣವಾಗಿರುವ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಕಾರ್ಯಪಾಲಕ ಇಂಜಿನಿಯರ್ ಅವರನ್ನು ಅಮಾನತುಗೊಳಿಸಿ, ನೋಟೀಸು ನೀಡುವಂತೆ ಮುಖ್ಯಮಂತ್ರಿ...

Read moreDetails
ಬೌರಿಂಗ್ ದುರಂತದ ಬಳಿಕ ಎಚ್ಚರಗೊಂಡ ಸರ್ಕಾರ: ರಾಜ್ಯದ ಎಲ್ಲಾ ಆಸ್ಪತ್ರೆಗಳಿಗೆ ತಪಾಸಣೆ ಆದೇಶ

ಬೌರಿಂಗ್ ದುರಂತದ ಬಳಿಕ ಎಚ್ಚರಗೊಂಡ ಸರ್ಕಾರ: ರಾಜ್ಯದ ಎಲ್ಲಾ ಆಸ್ಪತ್ರೆಗಳಿಗೆ ತಪಾಸಣೆ ಆದೇಶ

April 30, 2026
ಸೌಜನ್ಯ ಪ್ರಕರಣಕ್ಕೆ ಮತ್ತೆ ಜೀವ: ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಕಠಿಣ ಸೂಚನೆ

ಸೌಜನ್ಯ ಪ್ರಕರಣಕ್ಕೆ ಮತ್ತೆ ಜೀವ: ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಕಠಿಣ ಸೂಚನೆ

April 30, 2026
ಬೇಡ್ತಿ ನದಿಯ ಏತ ನೀರಾವರಿ ಯೋಜನೆ ಎರಡನೇ ಹಂತಕ್ಕೆ ₹180 ಕೋಟಿ

ಮಳೆ ದುರಂತಕ್ಕೆ ಆಘಾತ ವ್ಯಕ್ತಪಡಿಸಿದ ಡಿಕೆಶಿ: “ಆರೋಪದ ಸಮಯವಲ್ಲ, ಪರಿಹಾರವೇ ಮುಖ್ಯ”

April 30, 2026
ಮಳೆಯಲ್ಲಿ ಮುಳುಗಿದ ಬೆಂಗಳೂರು: ಡಿಸಿಎಂ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿ

ಮಳೆಯಲ್ಲಿ ಮುಳುಗಿದ ಬೆಂಗಳೂರು: ಡಿಸಿಎಂ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿ

April 30, 2026
Next Post
ಲೋಕಸಭಾ ಚುನಾವಣೆಗಾಗಿ 24 ರಾಜ್ಯಗಳಿಗೆ ಅಳಿಸಲಾಗದ ಶಾಯಿ ಪೂರೈಕೆ

ಲೋಕಸಭಾ ಚುನಾವಣೆಗಾಗಿ 24 ರಾಜ್ಯಗಳಿಗೆ ಅಳಿಸಲಾಗದ ಶಾಯಿ ಪೂರೈಕೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada