ಮೈಸೂರು (Mysuru): ಬೆಂಗಳೂರಿನಲ್ಲಿ ಬಾಂಬ್ ಬ್ಲಾಸ್ಟ್ ಆಗಿರುವುದು ನಿಜ. ಬಿಜೆಪಿಯವರು ಈ ವಿಚಾರದಲ್ಲಿ ರಾಜಕೀಯ ಮಾಡಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಹೇಳಿದ್ದಾರೆ.
ಮೈಸೂರಿನ ರಾಮಕೃಷ್ಣನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಅಲ್ಪ ಸಂಖ್ಯಾತರ ಓಲೈಕೆಗಾಗಿ ಈ ರೀತಿ ನಡೆದಿದೆ ಎಂಬ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಬಿಜೆಪಿಯವರ ಅವಧಿಯಲ್ಲಿ ಬಾಂಬ್ ಬ್ಲಾಸ್ಟ್ ಆಗಿತಲ್ಲ ಅದೂ ಅಲ್ಪ ಸಂಖ್ಯಾತರ ಓಲೈಕೆ ಕಾರಣಕ್ಕೇ ಆಗಿತ್ತ ? ಬಿಜೆಪಿ ಈ ವಿಷಯದಲ್ಲಿ ರಾಜಕಾರಣ ಮಾಡಬಾರದು ಎಂದಿದ್ದಾರೆ.
ಇದು ಸಂಘಟನೆಯ ಕೆಲಸವೋ ಇಲ್ಲವೋ ಗೊತ್ತಿಲ್ಲ. ಮಂಗಳೂರು ಬಾಂಬ್ ಬ್ಲಾಸ್ಟ್ ಗೂ ಬೆಂಗಳೂರಿನಲ್ಲಿ ನಡೆದಿರುವ ಬ್ಲಾಸ್ಟ್ ಗೂ ಸಂಬಂಧವಿಲ್ಲ.ಪ್ರಕರಣದ ಕುರಿತು ತನಿಖೆ ನಡೆಯುತ್ತಿದೆ. ವರದಿ ಬಳಿಕ ಬಳಿಕ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ನಿನ್ನೆಯೇ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ (dkshivakumar), ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಗಾಯಾಳುಗಳನ್ನು ಭೇಟಿಯಾಗಿದ್ದಾರೆ. ಇಂದು ನಾನು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ, ಮಾಹಿತಿ ಪಡೆಯಲಿದ್ದೇನೆ. ಆಸ್ಪತ್ರೆಗೂ ಭೇಟಿ ನೀಡಲಿದ್ದೇನೆ ಎಂದರು.
ಇನ್ನು ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ವಿಚಾರವಾಗಿ ಮಾತನಾಡಿದ ಅವರು, ಇನ್ನೂ ಯಾವುದೇ ವರದಿ ಕೈ ಸೇರಿಲ್ಲ.
ಎಫ್ ಎಸ್ ಎಲ್ ರಿಪೋರ್ಟ್ ಈವರಗೆ ಬಂದಿಲ್ಲ. ವರದಿ ಬಂದ ಬಳಿಕ ಕ್ರಮ ಕೈಗೊಳ್ಳಲಾಗುವುದು. ಪ್ರಕರಣದಲ್ಲಿ ಯಾರನ್ನೂ ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ ಎಂದು ಬಿಜೆಪಿ ನಾಯಕರ ಟ್ವೀಟ್ ವಿಚಾರಕ್ಕೆ ಪ್ರತಿಕ್ರಿಯಿಸಿದ್ದಾರೆ.
#karnataka #bengaluru #mysuru #rameshwaramcafeblast #cafeblast #blast #bengalurublast #siddaramaiah