ಬೀದರ್ (Bidar): ರಾಜ್ಯದಲ್ಲಿ ಮುಂದಿನ ವರ್ಷ ‘ವಚನ ವಿಶ್ವವಿದ್ಯಾಲಯ’ (Vachana University) ಸ್ಥಾಪನೆ ಮಾಡಲು ನಿರ್ಧರಿಸಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಹೇಳಿದ್ದಾರೆ.
ಇಂದು ಬೀದರ್ ಜಿಲ್ಲೆಯ ಬಸವಕಲ್ಯಾಣದಲ್ಲಿ ಬಸವಣ್ಣನವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಘೋಷಿಸಿದ್ದಕ್ಕಾಗಿ 160 ಸ್ವಾಮೀಜಿಗಳು, ಗುರುಗಳು ಹಾಗೂ ವೀರಶೈವ ಲಿಂಗಾಯತ ಮಠಾಧೀಶರಿಂದ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.
ಶರಣರ ವಚನಗಳು ಹಾಳೆಗಳಿಗೆ ಸೀಮಿತವಾಗಬಾರದು, ವಚನಗಳ ಪ್ರತಿ ಅಕ್ಷರ ಜನರ ಎದೆಗೆ ಇಳಿಯಬೇಕು. ಆ ಮೂಲಕ ಬಸವಣ್ಣನವರ (Basavanna) ಸಮಸಮಾಜದ ಕನಸು ಸಾಕಾರಗೊಳ್ಳಬೇಕು. ಈ ಉದ್ದೇಶದಿಂದ ಮುಂದಿನ ವರ್ಷ ‘ವಚನ ವಿಶ್ವವಿದ್ಯಾಲಯ’ ಸ್ಥಾಪನೆ ಮಾಡಬೇಕೆಂದು ನಿರ್ಧರಿಸಿದ್ದೇನೆ ಎಂದರು.
ಜಾತಿ ಪದ್ಧತಿ, ಅಸ್ಪೃಶ್ಯತೆ, ಅಸಮಾನತೆ, ಶೋಷಣೆ ಹಾಗೂ ಧಾರ್ಮಿಕ ಢಂಬಾಚಾರದ ವಿರುದ್ಧ ಬಂಡೆದ್ದ ಬಸವಾದಿ ಶರಣರು ಜನರಲ್ಲಿ ಅರಿವುಮೂಡಿಸಲು ಆಯ್ದುಕೊಂಡ ಸಾಧನ “ವಚನ ಸಾಹಿತ್ಯ.” ವಚನಗಳಲ್ಲಿ ಬಸವೇಶ್ವರರಾದಿಯಾಗಿ ನೂರಾರು ಶರಣರ ಬದುಕಿನ ಅನುಭವದ ಸಾರವಿದೆ. ಅಂಧ ಶ್ರದ್ಧೆ- ಮೌಢ್ಯದ ವಿರುದ್ಧದ ಆಕ್ರೋಶವಿದೆ, ಜ್ಞಾನದ ಬೆಳಕಿದೆ ಎಂದು ಹೇಳಿದರು.
#Karnataka #bidar #siddaramaiah #basavanna #vachanauniversity






