• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 19, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಲೋಕಸಭಾ ಟಿಕೆಟ್​ ಆಯ್ಕೆ ಸಭೆಗೆ ಸಿಎಂ, ಡಿಸಿಎಂ ಗೈರಾಗಿದ್ಯಾಕೆ..?

Krishna Mani by Krishna Mani
March 8, 2024
in Top Story, ಕರ್ನಾಟಕ, ರಾಜಕೀಯ
0
ಲೋಕಸಭಾ ಟಿಕೆಟ್​ ಆಯ್ಕೆ ಸಭೆಗೆ ಸಿಎಂ, ಡಿಸಿಎಂ ಗೈರಾಗಿದ್ಯಾಕೆ..?
Share on WhatsAppShare on FacebookShare on Telegram

ಕೃಷ್ಣಮಣಿ

ADVERTISEMENT

ದೆಹಲಿಯಲ್ಲಿ ಕಾಂಗ್ರೆಸ್​ ಎಲೆಕ್ಷನ್​ ಕಮಿಟಿ (CEC) ಸಭೆ ನಡೆಯುತ್ತಿದೆ. ಈ ಸಭೆಯಲ್ಲಿ ಲೋಕಸಭಾ ಚುನಾವಣೆಗೆ ಸ್ಪರ್ಧೆ ಮಾಡಬೇಕಿರುವ ಅಭ್ಯರ್ಥಿಗಳ ಹೆಸರನ್ನು ಅಂತಿಮ ಮಾಡಲಾಗುತ್ತದೆ. ಆದರೆ ಈ ಸಭೆಯಿಂದ ಸಿಎಂ ಸಿದ್ದರಾಮಯ್ಯ ಹಾಗು ಡಿಸಿಎಂ ಡಿ.ಕೆ ಶಿವಕುಮಾರ್​ ಅವರು ಗೈರು ಹಾಜರಾಗಿದ್ದಾರೆ. ಗುರುವಾರ ಮಧ್ಯಾಹ್ನ 15 ಜನರ ಪಟ್ಟಿ ಜೊತೆಗೆ ಡಿಸಿಎಂ ಡಿ.ಕೆ ಶಿವಕುಮಾರ್​ ದೆಹಲಿಗೆ ತೆರಳಿದ್ದಾರೆ ಎಂದು ಎಲ್ಲಾ ಮಾಧ್ಯಮಗಳಲ್ಲೂ ದೊಡ್ಡ ಸುದ್ದಿಯಾಗಿತ್ತು. ಆದರೆ ನಿನ್ನೆ ನಡೆದ ಸಭೆಯಲ್ಲಿ ( Central Election Commity ) ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್​ ಕಾಣಿಸಿಕೊಳ್ಳಲಿಲ್ಲ. ಈ ಸಂಗತಿ ಎಲ್ಲರಿಗೂ ಅಚ್ಚರಿ ಮೂಡಿಸಿತು.

ಕರ್ನಾಟಕ ರಾಜ್ಯ ಕಾಂಗ್ರೆಸ್​ ಅಧ್ಯಕ್ಷರಾಗಿರುವ ಡಿ.ಕೆ ಶಿವಕುಮಾರ್​​, ಈ ಹಿಂದೆಯೇ ದೆಹಲಿಯಲ್ಲಿ CEC ( Central Election Commity ) ಸಭೆ ನಡೆಯಲಿದೆ. ನಾನೂ ಹಾಗೂ ಸಿಎಂ ಸಿದ್ದರಾಮಯ್ಯ ಸಭೆಯಲ್ಲಿ ಭಾಗಿಯಾಗ್ತೇವೆ ಎಂದು ಮಾಹಿತಿ ನೀಡಿದ್ದರು. ಅದರಂತೆ ದೆಹಲಿಗೂ ತೆರಳಿದ್ದರು. ಆದರೆ CEC ಸಭೆಯಲ್ಲಿ ಭಾಗಿಯಾಗಲು ಸಿಎಂ ಸಿದ್ದರಾಮಯ್ಯ ಮಾತ್ರ ಹೋಗಿರಲಿಲ್ಲ. ದೆಹಲಿಗೆ ಹೋಗ್ತಾರೆ ಎನ್ನಲಾಗಿತ್ತು. ಆದರೆ ಬೀದರ್​ನ ಬಸವ ಕಲ್ಯಾಣದಲ್ಲಿ ನಡೆದ ಅಭಿನಂದನಾ ಸಮಾರಂಭದಲ್ಲಿ ಸಿಎಂ ಸಿದ್ದರಾಮಯ್ಯ ಭಾಗಿಯಾಗಿದ್ದರು. ಅತ್ತ ನವದೆಹಲಿಗೆ ತೆರಳಿದ್ದ ಡಿಸಿಎಂ ಡಿ.ಕೆ ಶಿವಕುಮಾರ್​ ಕಾಂಗ್ರೆಸ್​​ನ ಚುನಾವಣಾ ಸಮಿತಿ ಸಭೆಯಲ್ಲಿ ಭಾಗಿಯಾಗಲು ಸಾಧ್ಯವಾಗಲಿಲ್ಲ.

ಕೇಂದ್ರ ಚುನಾವಣಾ ಸಮಿತಿಯಲ್ಲಿ ಕರ್ನಾಟಕದಿಂದ ಹಾಜರಾಗಿದ್ದು ಇಂಧನ ಸಚಿವ ಕೆ.ಜೆ ಜಾರ್ಜ್​. ಕರ್ನಾಟಕದಿಂದ ( Central Election Commity ) ಚುನಾವಣಾ ಸಮಿತಿ ಸದಸ್ಯರಾಗಿ ಇರುವುದು ಕೆ.ಜೆ ಜಾರ್ಜ್​ ಮಾತ್ರ. ಹೀಗಾಗಿ ಡಿ.ಕೆ ಶಿವಕುಮಾರ್​​ ಅಥವಾ ಸಿಎಂ ಸಿದ್ದರಾಮಯ್ಯ ಸಭೆಯಲ್ಲಿ ಭಾಗಿಯಾಗಲು ಸಾಧ್ಯವಾಗಲಿಲ್ಲ. ಈ ವಿಚಾರ ಮೊದಲೇ ತಿಳಿದಿದ್ದ ಸಿದ್ದರಾಮಯ್ಯ ದೆಹಲಿಗೆ ಪ್ರಯಾಣವನ್ನೇ ಮಾಡಲಿಲ್ಲ. ಆದರೆ ಡಿಸಿಎಂ ಡಿ.ಕೆ ಶಿವಕುಮಾರ್​ ದೆಹಲಿಗೆ ಹೋಗದೆ ಟಿಕೆಟ್ ಘೋಷಣೆ ಆದರೆ ಮುಜುಗರ ಆಗುತ್ತೆ ಅನ್ನೋ ಕಾರಣಕ್ಕೆ ದೆಹಲಿಗೆ ಹೋಗಿದ್ದಾರೆ. ಆದರೆ ಎಐಸಿಸಿ ಮಟ್ಟದಲ್ಲಿ ನಡೆಯುವ CEC ( Central Election Commity ) ಸಭೆಯಿಂದ ದೂರ ಉಳಿಯುವಂತಾಗಿದೆ.

ಈಗಾಗಲೇ AICC ನಾಯಕರು ರಾಜ್ಯಕ್ಕೆ ವೀಕ್ಷಕರನ್ನು ಕಳುಹಿಸಿ, ರಾಜ್ಯ ಹಾಗು ಜಿಲ್ಲಾ ಮಟ್ಟದ ನಾಯಕರಿಂದ ಮಾಹಿತಿ ಸಂಗ್ರಹ ಮಾಡಿದ್ದಾರೆ. ಆ ಮಾಹಿತಿ ಆಧಾರದ ಮೇಲೆ ಟಿಕೆಟ್​ ಫೈನಲ್​ ಮಾಡಲಾಗುತ್ತದೆ. ಈ ಅಂತಿಮ ಕ್ಷಣದಲ್ಲಿ ಒಂದೆರಡು ಸಲಹೆ ಸೂಚನೆ ಕೊಡುವುದಕ್ಕೆ ಕೆ.ಜೆ ಜಾರ್ಜ್​ ಅವರಿಗೆ ಅವಕಾಶವಿದೆ. ಯಾವುದಾದರೂ ಅಭ್ಯರ್ಥಿ ಸೋಲುವ ಸಾಧ್ಯತೆ ಇದ್ದರೆ, ಅಥವಾ ಸಾಕಷ್ಟು ವಿವಾದಗಳಿಂದ ಪಕ್ಷಕ್ಕೆ ಮುಜುಗರ ಮಾಡಿದ್ದರೆ ಅಂತಹ ಅಭ್ಯರ್ಥಿಯನ್ನು ಹೊರಗಿಡುವ ಪ್ರಯತ್ನ ಮಾಡಬಹುದು. ಅದನ್ನು ಹೊರತು ಪಡಿಸಿದರೆ ಟಿಕೆಟ್​ ಹಂಚಿಕೆ ವಿಚಾರ ಹೈಕಮಾಂಡ್​ ಮಟ್ಟದಲ್ಲೇ ನಡೆಯುತ್ತಿದೆ. ಆ ಹೈಕಮಾಂಡ್​ ಟೀಂನಲ್ಲಿ ರಾಜ್ಯದ ಪರವಾಗಿ ಕೆ.ಜೆ ಜಾರ್ಜ್​ ಇದ್ದಾರೆ. ಸಿಎಂ, ಡಿಸಿಎಂ ಟಿಕೆಟ್​ಗಾಗಿ ಎಷ್ಟೇ ಫೈಟ್​ ಮಾಡಿದರು ಅಂತಿಮ ಮುದ್ರೆ ಬೀಳುವುದು ಕೆ.ಜೆ ಜಾರ್ಜ್​ ಮೂಲಕ ಎನ್ನಬಹುದು.

Previous Post

ಅಮೇಥಿಯಿಂದ  ರಾಗಾ ಯುಟರ್ನ್  ?! ಸ್ಮೃತಿ ಇರಾನಿ ವಿರುದ್ಧ ಸ್ಪರ್ಧೆ ಮಾಡಲ್ವಾ ರಾಹುಲ್ ಗಾಂಧಿ ?!

Next Post

ಎರಡು ಹಂತಗಳಲ್ಲಿ ಬಿಜೆಪಿಯ ಲೋಕಸಭಾ ಟಿಕೆಟ್ ಘೋಷಣೆ!

Related Posts

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..
Top Story

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..

by ಪ್ರತಿಧ್ವನಿ
April 18, 2026
0

ಬೆಂಗಳೂರು : ಐಪಿಎಲ್ 2026ರ 26ನೇ ಪಂದ್ಯ ಶನಿವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ದೆಹಲಿ ಕ್ಯಾಪಿಟಲ್ಸ್ ನಡುವೆ ನಡೆಯಿತು. ಈ ರೋಚಕ ಪಂದ್ಯದಲ್ಲಿ, ಡೆಲ್ಲಿ ಕ್ಯಾಪಿಟಲ್ಸ್...

Read moreDetails
ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

April 18, 2026
ಜಿಬಿಎ ಚುನಾವಣೆ ಗೊಂದಲ: ಅಂತಿಮ ಮತದಾರರ ಪಟ್ಟಿ ಪ್ರಕಟ

ಜಿಬಿಎ ಚುನಾವಣೆ ಗೊಂದಲ: ಅಂತಿಮ ಮತದಾರರ ಪಟ್ಟಿ ಪ್ರಕಟ

April 18, 2026
ಮಹಿಳಾ ಮೀಸಲಾತಿ ವಿವಾದ ತೀವ್ರ: ಮಸೂದೆ ಸೋಲಿಗೆ ಕಾರಣವೇನು? ಕಾಂಗ್ರೆಸ್-ಬಿಜೆಪಿ ತರ್ಕ

ಮಹಿಳಾ ಮೀಸಲಾತಿ ವಿವಾದ ತೀವ್ರ: ಮಸೂದೆ ಸೋಲಿಗೆ ಕಾರಣವೇನು? ಕಾಂಗ್ರೆಸ್-ಬಿಜೆಪಿ ತರ್ಕ

April 18, 2026
ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

April 18, 2026
Next Post
ಎರಡು ಹಂತಗಳಲ್ಲಿ ಬಿಜೆಪಿಯ ಲೋಕಸಭಾ ಟಿಕೆಟ್ ಘೋಷಣೆ!

ಎರಡು ಹಂತಗಳಲ್ಲಿ ಬಿಜೆಪಿಯ ಲೋಕಸಭಾ ಟಿಕೆಟ್ ಘೋಷಣೆ!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada