• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಸೌರಶಕ್ತಿ ಕ್ಷೇತ್ರದ ಆವಿಷ್ಕಾರಗಳು, ತಂತ್ರಜ್ಞಾನಗಳು ರೈತರ ಮನೆ ಬಾಗಿಲಿಗೆ ತಲುಪಬೇಕು: ಸಿದ್ದರಾಮಯ್ಯ

Any Mind by Any Mind
March 9, 2024
in Top Story, ಕರ್ನಾಟಕ
0
ಸೌರಶಕ್ತಿ ಕ್ಷೇತ್ರದ ಆವಿಷ್ಕಾರಗಳು, ತಂತ್ರಜ್ಞಾನಗಳು ರೈತರ ಮನೆ ಬಾಗಿಲಿಗೆ ತಲುಪಬೇಕು: ಸಿದ್ದರಾಮಯ್ಯ
Share on WhatsAppShare on FacebookShare on Telegram

ಬೆಂಗಳೂರು (Bengaluru): ಮುಂದಿನ 7 ವರ್ಷಗಳಲ್ಲಿ ರಾಜ್ಯದಲ್ಲಿ 60 ಸಾವಿರ ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆಯ ಗುರಿ ಹೊಂದಿದ್ದೇವೆ. ಈ ದಿಕ್ಕಿನಲ್ಲಿ ನಮ್ಮ ಸಿದ್ಧತೆಗಳು ಆಗಲೇ ಆರಂಭಗೊಂಡಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (siddaramaiah) ಅವರು ಘೋಷಿಸಿದರು.

ADVERTISEMENT

GKVK ಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ರೈತ ಸೌರಶಕ್ತಿ ಮೇಳ (Farmer Solar Fair) ಉದ್ಘಾಟಿಸಿ ಕುಸುಮ್ “ಬಿ” ಮತ್ತು “ಸಿ” ಯೋಜನೆಗಳಿಗೆ ಚಾಲನೆ ನೀಡಿ, ವಿದ್ಯುತ್ ಉಪಕೇಂದ್ರಗಳನ್ನು ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು.

ದೇಶದಲ್ಲೇ ಅತಿ ಹೆಚ್ಚು ಒಣಭೂಮಿ  ಹೊಂದಿರುವ ಎರಡನೇ ರಾಜ್ಯ ಕರ್ನಾಟಕ (Karnataka). ಹೀಗಾಗಿ ಒಣಭೂಮಿಯ ಕೃಷಿಗೆ ಆದ್ಯತೆ ನೀಡಿ ಸಂಶೋಧನೆಗಳು ನಡೆಯಬೇಕು. ಜನಸಂಖ್ಯೆ ಹೆಚ್ಚಾಗಿ ರೈತರ ಬೆಳೆಗಳ ಇಳುವರಿ ಪ್ರಮಾಣ ಕಡಿಮೆ ಆಗುತ್ತಿದೆ. ಆದ್ದರಿಂದ ಸಮಗ್ರ ಕೃಷಿಗೆ ಹೆಚ್ವಿನ ಬೆಂಬಲ ನೀಡುವ ಸಲುವಾಗಿ ಕೃಷಿಯ ಉಪಕಸುಬುಗಳ ಬೆಳವಣಿಗೆಗೆ ಸರ್ಕಾರ ಸಂಪೂರ್ಣ ಸಹಕಾರ, ಬೆಂಬಲ ನೀಡುತ್ತಿದೆ ಎಂದು ನುಡಿದರು.‌

ಪ್ರಸ್ತುತ ರಾಜ್ಯದಲ್ಲಿ 32 ಸಾವಿರ ಮೆಗಾವ್ಯಾಟ್ ವಿದ್ಯುತ್  (electricity) ಉತ್ಪಾದನೆಯಾಗುತ್ತಿದೆ. ಮುಂದಿನ 7 ವರ್ಷಗಳಲ್ಲಿ 60 ಸಾವಿರ ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆಯ ಗುರಿ ಹಮ್ಮಿಕೊಂಡಿದ್ದೇವೆ ಎಂದು ಘೋಷಿಸಿದರು.‌

ಸೋಲಾರ್ (Solar) ವಿದ್ಯುತ್ ಪಂಪ್ ಸೆಟ್ ಮತ್ತು ಪಾನಲ್ ಗಳಿಗೆ ರಾಜ್ಯ ಸರ್ಕಾರದ ಸಬ್ಸಿಡಿ ಮೊತ್ತವನ್ನು ಶೇ.30 ರಿಂದ ಶೇ.50 ಕ್ಕೆ ಹೆಚ್ಚಿಸಿದೆ.  ನಮ್ಮ ಸರ್ಕಾರದ ಈ ಸೌಲಭ್ಯವನ್ನು ರೈತರು ಹೆಚ್ಚೆಚ್ಚು ಬಳಸಿಕೊಳ್ಳಬೇಕು ಎಂದು ಕರೆ ನೀಡಿದರು.

ಸೌರವಿದ್ಯುತ್ (Solar power) ಬಳಕೆಯನ್ನು ಹೆಚ್ಚೆಚ್ಚು ಮಾಡುವ ಮೂಲಕ ವಿದ್ಯುತ್ ಕೊರತೆಯನ್ನು ನೀಗಿಸಿಕೊಳ್ಳಲು ಸಾಧ್ಯವಾಗುತ್ತದೆ. ಆದ್ದರಿಂದ ಈ ಬಗ್ಗೆ ರೈತರಿಗೆ ಹೆಚ್ಚೆಚ್ಚು ಮನವರಿಕೆ ಮಾಡಿಕೊಡಬೇಕು ಎಂದು ಸೂಚಿಸಿದರು.

ಇವತ್ತಿನವರೆಗೂ ನಾಡಿನ ಒಂದು ಕೋಟಿ ಇಪ್ಪತ್ತು ಲಕ್ಷ ಕುಟುಂಬಗಳು ಬಳಸುತ್ತಿರುವ 200 ಯೂನಿಟ್ ವರೆಗಿನ ಉಚಿತ ವಿದ್ಯುತ್ ಗಾಗಿ ರಾಜ್ಯ ಸರ್ಕಾರ ಉಚಿತ ವಿದ್ಯುತ್ತಿನ ಬಾಬ್ತು 5320 ಕೋಟಿ ರೂಪಾಯಿಯನ್ನು ಇಂಧನ ಇಲಾಖೆಗೆ ನೀಡಿದೆ. ನಮ್ಮ ಜನರಿಗೆ ಜೀರೋ ಬಿಲ್ ಬರುತ್ತಿದೆ. ನಮ್ಮ ಸರ್ಕಾರ ಈ ಜನೋಪಯೋಗಿ ಗ್ಯಾರಂಟಿ ಯೋಜನೆಯನ್ನು ಯಶಸ್ವಿಯಾಗಿ ಮುಂದುವರೆಸಲಿದೆ ಎಂದು ಪುನರುಚ್ಚರಿಸಿದರು.

ಸೌರಶಕ್ತಿ ಕ್ಷೇತ್ರದ ಹೊಸ ಆವಿಷ್ಕಾರಗಳು, ತಂತ್ರಜ್ಞಾನಗಳು ರೈತರ ಮನೆ ಬಾಗಿಲಿಗೆ ತಲುಪಿ, ಕೃಷಿಯಲ್ಲಿ ಬಳಕೆ ಆದರೆ ಮಾತ್ರ ಸಾರ್ಥಕತೆ ಬರುತ್ತದೆ. ಕೃಷಿ ಕ್ಷೇತ್ರದಲ್ಲಿ ಹೆಚ್ಚೆಚ್ಚು ಸಂಶೋಧನೆಗಳು ನಡೆದು ಅವು ರೈತರನ್ನು ಮುಟ್ಟಿದಾಗ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ. ರೈತರು ಹೆಚ್ಚೆಚ್ಚು ಆಹಾರ ಬೆಳೆದು ವಿದೇಶಕ್ಕೂ ರಫ್ತು ಮಾಡುವಂತಾಗಬೇಕು. ಇದಕ್ಕೆ ನಮ್ಮ ಸರ್ಕಾರ ಸಕಲ ನೆರವು ನೀಡುತ್ತದೆ ಎಂದರು.

ಸೋಲಾರ್ ವಿದ್ಯುತ್ ಗೆ ಕೇಂದ್ರ ಸರ್ಕಾರ ಕೇವಲ ಶೇ.30 ರಷ್ಟು ಸಬ್ಸಿಡಿ ನೀಡುತ್ತಿದೆ. ಆದರೆ ರಾಜ್ಯ ಸರ್ಕಾರ ಶೇ.50 ರಷ್ಟು ಸಬ್ಸಿಡಿ ನೀಡುತ್ತಿದೆ. ಆದರೂ ಹೆಸರು ಮಾತ್ರ ಮೋದಿಯವರ ಸಬ್ಸಿಡಿ ಎಂದು ವ್ಯಂಗ್ಯವಾಡಿದರು.

ಇಂಧನ ಸಚಿವ ಕೆ.ಜೆ.ಜಾರ್ಜ್(K. J. George), ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್(M.C.sudhakar) , ಮುಖ್ಯಮಂತ್ರಿಗಳ ರಾಜಕೀಯ  ಗೋವಿಂದರಾಜು, ನಸೀರ್ ಅಹಮದ್ , ವಿಧಾನ ಪರಿಷತ್ ಸದಸ್ಯ ಸುಧಾಮ್ ದಾಸ್, ಕ್ರೆಡೆಲ್ ಅಧ್ಯಕ್ಷರಾದ ಶೃಂಗೇರಿ ಶಾಸಕರಾದ ರಾಜುಗೌಡ ಮತ್ತು ಇಂಧನ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

#Karnataka #bengaluru #siddaramaiah #gkvk #Farmersolarfair

Previous Post

ರಾಮಮಂದಿರ ಬ್ಲಾಸ್ಟ್ ಮಾಡ್ತೀವಿ – ಗರ್ಭಗುಡಿಯಲ್ಲಿ ಸಿಕ್ತು ಬೆದರಿಕೆ ಪತ್ರ

Next Post

ಸೌರಶಕ್ತಿ ಬಳಸಿ ರೈತರು ಸ್ವಾವಲಂಬಿಗಳಾಗಬೇಕು: ಸಿಎಂ ಸಿದ್ದರಾಮಯ್ಯ

Related Posts

SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!
Top Story

SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!

by ಪ್ರತಿಧ್ವನಿ
July 5, 2025
0

ಜೂನಿಯರ್‌ ಚಿತ್ರದ ಡ್ಯಾನ್ಸಿಂಗ್‌ ನಂಬರ್..ಡಿಎಸ್‌ಪಿ ಮ್ಯೂಸಿಕ್‌ಗೆ ಕುಣಿದು ಕುಪ್ಪಳಿಸಿದ ಕಿರೀಟಿ-ಶ್ರೀಲೀಲಾ ಕಿರೀಟಿ ಚಿತ್ರರಂಗದಲ್ಲಿ ಛಾಪೂ ಮೂಡಿಸಲು ಸಜ್ಜಾಗಿದ್ದು, ಚೊಚ್ಚಲ ಚಿತ್ರ ಜೂನಿಯರ್‌ ಟೀಸರ್‌ ಈಗಾಗಲೇ ಭಾರೀ ಸದ್ದು...

Read moreDetails

Dolly Dananjay: ಹೊಸ ರೆಟ್ರೋ ಲುಕ್‌ನಲ್ಲಿ ಧನಂಜಯ್..

July 5, 2025

Ranya Rao: ಅಕ್ರಮ ಚಿನ್ನ ಸಾಗಾಟಣೆಯ ನಟಿ ರನ್ಯಾ ರಾವ್ ಗೆ ಸೇರಿದ 34 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು

July 5, 2025
ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

July 5, 2025

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

July 4, 2025
Next Post
ಸೌರಶಕ್ತಿ ಬಳಸಿ ರೈತರು ಸ್ವಾವಲಂಬಿಗಳಾಗಬೇಕು: ಸಿಎಂ ಸಿದ್ದರಾಮಯ್ಯ

ಸೌರಶಕ್ತಿ ಬಳಸಿ ರೈತರು ಸ್ವಾವಲಂಬಿಗಳಾಗಬೇಕು: ಸಿಎಂ ಸಿದ್ದರಾಮಯ್ಯ

Please login to join discussion

Recent News

SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!
Top Story

SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!

by ಪ್ರತಿಧ್ವನಿ
July 5, 2025
Top Story

Dolly Dananjay: ಹೊಸ ರೆಟ್ರೋ ಲುಕ್‌ನಲ್ಲಿ ಧನಂಜಯ್..

by ಪ್ರತಿಧ್ವನಿ
July 5, 2025
Top Story

Ranya Rao: ಅಕ್ರಮ ಚಿನ್ನ ಸಾಗಾಟಣೆಯ ನಟಿ ರನ್ಯಾ ರಾವ್ ಗೆ ಸೇರಿದ 34 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು

by ಪ್ರತಿಧ್ವನಿ
July 5, 2025
ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,
Top Story

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

by ಪ್ರತಿಧ್ವನಿ
July 5, 2025
Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!

SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!

July 5, 2025

Dolly Dananjay: ಹೊಸ ರೆಟ್ರೋ ಲುಕ್‌ನಲ್ಲಿ ಧನಂಜಯ್..

July 5, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!