• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ರಾಜ್ಯ ಸರ್ಕಾರ ಲಜ್ಜೆಗೇಡಿ ಸರ್ಕಾರ: ಹೆಚ್.ಡಿ.ಕುಮಾರಸ್ವಾಮಿ

Any Mind by Any Mind
March 10, 2024
in Top Story, ಕರ್ನಾಟಕ
0
ಆಮಿಷ ಒಡ್ಡುವುದು ಕಾಂಗ್ರೆಸ್ ಸಂಸ್ಕೃತಿ: ಹೆಚ್.ಡಿ.ಕುಮಾರಸ್ವಾಮಿ
Share on WhatsAppShare on FacebookShare on Telegram

ಬೆಂಗಳೂರು (Bengaluru): ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಲಜ್ಜೆಗೇಡಿ ಸರ್ಕಾರ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ (H.D.Kumarswamy)

ADVERTISEMENT

ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಕುಮಾರಸ್ವಾಮಿ ಅವರು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಸರಣಿ ಪೋಸ್ಟ್ ಮಾಡಿ ಹರಿಹಾಯ್ದಿದ್ದಾರೆ.

ರಾಜ್ಯ ಇತಿಹಾಸದಲ್ಲಿ ಕಂಡೂ ಕೇಳರಿಯದ ಬರವಿದೆ. ಜಲಕ್ಷಾಮ ಬಿಗಡಾಯಿಸಿದೆ. ಹನಿ ನೀರಿಗೂ ತತ್ವಾರ, ಜನ ಜಾನುವಾರುಗಳ ಹಾಹಾಕಾರ. ಪರಿಸ್ಥಿತಿ ಹೀಗಿದ್ದರೂ ಕಾಂಗ್ರೆಸ್ ಸರಕಾರ ಕೋಟಿ ಕೋಟಿ ರೂ. ಜನರ ತೆರಿಗೆ ಹಣ ಸುರಿದು ಗ್ಯಾರಂಟಿ ಸಮಾವೇಶಗಳನ್ನು ಮಾಡುತ್ತಿದೆ! ಇದು ಲಜ್ಜೆಗೇಡು ಸರ್ಕಾರ ಎಂದು ವಾಗ್ದಾಳಿ ನಡೆಸಿದ್ದಾರೆ.

‘ರೋಮ್ ಹೊತ್ತು ಉರಿಯುತ್ತಿದ್ದರೆ ನೀರೋ ಪಿಟೀಲು ಬಾರಿಸುತ್ತಿದ್ದ!’ ಸಿದ್ದರಾಮಯ್ಯನವರೇ ನೀವೇ ನಮ್ಮ ನೀರೋ!! ರಾಜ್ಯದ ಪಾಲಿನ ಝೀರೋ!! ನಿಮಗೆ ಜನರ ಚಿಂತೆ ಇಲ್ಲ, ಚುನಾವಣೆ ಚಿಂತೆಯಷ್ಟೇ..ಆ ಚಿಂತೆಯೇ ನಿಮ್ಮ ಪಕ್ಷ, ಸರಕಾರಕ್ಕೆ ಚಿತೆಯಾಗಲಿದೆ. ಇದು ಜನರೇ ನುಡಿಯುತ್ತಿರುವ ಭವಿಷ್ಯ. ಪ್ರಜೆಗಳ ಮಾತು, ಆ ಪರಮೇಶ್ವರನ ಮಾತು ಒಂದೇ! ಸುಳ್ಳಾಗದು ಎಂದಿದ್ದಾರೆ.

ಬರ ಪೀಡಿತ ರೈತರಿಗೆ ಕೊಡಲು ಈ ನಿಮ್ಮ ಸರಕಾರಕ್ಕೆ 2000 ರೂ. ಗತಿ ಇಲ್ಲ. ಆದರೆ, ಗ್ಯಾರಂಟಿ ಸಮಾವೇಶಗಳಿಗೆ ಬೇಕಾದಷ್ಟು ಹಣವಿದೆ. ತುರ್ತು ಉದ್ದೇಶಕ್ಕೆ ಇರಿಸಿರುವ ಜಿಲ್ಲಾಧಿಕಾರಿ,ತಹಸೀಲ್ದಾರುಗಳ ಪಿಡಿ ಖಾತೆಗೆ ನಿಮ್ಮ ಸರಕಾರ ಕನ್ನ ಹಾಕಿದೆ. ಜನರ ಹಾಹಾಕಾರವೇ ನಿಮಗೆ ಭರ್ಜರಿ ಆಹಾರ!! ಹೌದಲ್ಲವೇ? ಇದೆಂಥಾ ಸಿದ್ದನಾಮಿಕ್ಸ್ ಸಿದ್ದರಾಮಯ್ಯ ನವರೇ? ಎಂದು ಪ್ರಶ್ನಿಸಿದ್ದಾರೆ.

ಈ ಗ್ಯಾರಂಟಿ ಸಮಾವೇಶಗಳಿಗೆ, ಜಾಹೀರಾತು ಜಾತ್ರೆಗಳಿಗೆ ವರ್ಷದಿಂದ ಎಷ್ಟು ಸಾವಿರ ಕೋಟಿ ಸುರಿದಿದ್ದೀರಿ ಸಿದ್ದರಾಮಯ್ಯನವರೇ? ಜನರ ಮುಂದೆ ಲೆಕ್ಕ ಇಡಿ. ಬೇಕಾದರೆ ‘ಗ್ಯಾರಂಟಿ ಪ್ರಚಾರ ಸಮಾವೇಶ ಖರ್ಚು ಬಾಬತ್ತಿನ ಶ್ವೇತಪತ್ರ’ ಹೊರಡಿಸಿ. ನಿಮ್ಮ ಸರಕಾರದ ಅಸಲಿ ಬಣ್ಣ ಏನೆಂಬುದು ಜನರಿಗೆ ಗೊತ್ತಾಗಲಿ ಎಂದಿದ್ದಾರೆ.‌

ಒಂದು ವರ್ಷದಿಂದ ನಿಮ್ಮ ಇಡೀ ಸರಕಾರದ ಬದುಕು ಜಾಹೀರಾತು ಮೇಳದಲ್ಲೇ ಮುಗಿದು ಹೋಗಿದೆ. ನಿಮ್ಮ ಹಿಂದೆ ಮುಂದೆ ಸುತ್ತುವ ಪಟಾಲಂಗಳ ಏಜೆನ್ಸಿಗಳ ಮೂಲಕ ‘ಜಾಹೀರಾತು ಜಾತ್ರೆ’ಯನ್ನು ಎಗ್ಗಿಲ್ಲದೆ ಮಾಡುತ್ತಿದ್ದೀರಿ. ಬರದಲ್ಲಿ ಬೆಂದು ಕಣ್ಣೀರು ಹಾಕುತ್ತಿರುವ ಜನರ ಹಣವನ್ನು ಹೀಗೆ ಪ್ರಚಾರದ ತೆವಲಿಗೆ ಸುರಿಯುತ್ತಿರುವ ನಿಮಗೆ ನಾಚಿಕೆ ಆಗುವುದಿಲವೇ? ಎಂದು ವಾಗ್ದಾಳಿ ನಡೆಸಿದ್ದಾರೆ.

#karnataka #bengaluru #hdkumarswamy #siddaramaiah #congress #jds

Previous Post

ರಾಜ್ಯದಲ್ಲಿ ಬ್ಯಾನ್ ಆಗುತ್ತಾ ಕಾಟನ್ ಕ್ಯಾಂಡಿ & ಗೋಬಿ ಮಂಚೂರಿ ?!   

Next Post

2 ಸಾವಿರ ಕೆಜಿ ಗಾಂಜಾ ಜಪ್ತಿ ಮಾಡಿದ NCB ಅಧಿಕಾರಿಗಳು

Related Posts

ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ
Top Story

ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

by ಪ್ರತಿಧ್ವನಿ
April 11, 2026
0

2019ರಲ್ಲಿ ಒಂದು ಕನಸು ಆರಂಭವಾಯಿತು…ಸತ್ಯದ ಧ್ವನಿಯನ್ನು ಜನರಿಗೆ ತಲುಪಿಸುವ ಕನಸು…ಆ ಕನಸಿನ ಹೆಸರು – ಪ್ರತಿಧ್ವನಿ ನ್ಯೂಸ್. ಇಂದು, 2026ರ ಏಪ್ರಿಲ್ 11… ಪ್ರತಿಧ್ವನಿ ತನ್ನ ಏಳು...

Read moreDetails
ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

April 11, 2026
₹10,000 ಮೇಲ್ಪಟ್ಟ ಯುಪಿಐ ವಹಿವಾಟಿಗೆ ‘ಒಂದು ಗಂಟೆ’ ವಿಳಂಬ? ವಂಚನೆ ತಡೆಗೆ RBI ಹೊಸ ಯೋಜನೆ

ಪ್ಲೂಟೋಗೆ ಮತ್ತೆ ಗ್ರಹ ಸ್ಥಾನಮಾನ? ಬಾಲಕಿಯ ಪತ್ರದಿಂದ ವಿಜ್ಞಾನ ಲೋಕದಲ್ಲಿ ಚರ್ಚೆ

April 10, 2026
ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ

ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ

April 10, 2026
ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

April 10, 2026
Next Post
2 ಸಾವಿರ ಕೆಜಿ ಗಾಂಜಾ ಜಪ್ತಿ ಮಾಡಿದ NCB ಅಧಿಕಾರಿಗಳು

2 ಸಾವಿರ ಕೆಜಿ ಗಾಂಜಾ ಜಪ್ತಿ ಮಾಡಿದ NCB ಅಧಿಕಾರಿಗಳು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada