• Home
  • About Us
  • ಕರ್ನಾಟಕ
Sunday, October 12, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಅರಣ್ಯ ಸಂರಕ್ಷಣೆ, ವನ್ಯಜೀವಿ -ಮಾನವ ಸಂಘರ್ಷ, ಕಳ್ಳಬೇಟೆ ತಡೆಗೆ ಸಹಯೋಗ: ಈಶ್ವರ ಖಂಡ್ರೆ

Any Mind by Any Mind
March 10, 2024
in Top Story, ಕರ್ನಾಟಕ
0
ಅರಣ್ಯ ಸಂರಕ್ಷಣೆ, ವನ್ಯಜೀವಿ -ಮಾನವ ಸಂಘರ್ಷ, ಕಳ್ಳಬೇಟೆ ತಡೆಗೆ ಸಹಯೋಗ: ಈಶ್ವರ ಖಂಡ್ರೆ
Share on WhatsAppShare on FacebookShare on Telegram

ಬಂಡೀಪುರ (Bandipura): ವನ್ಯಜೀವಿ ಸಂಘರ್ಷ, ಕಳ್ಳಬೇಟೆ ತಡೆ, ಅರಣ್ಯ ಮತ್ತು ವನ್ಯಜೀವಿ ಸಂರಕ್ಷಣೆಗೆ ಕರ್ನಾಟಕ (Karnataka), ತಮಿಳುನಾಡು (Tamilnadu) ಮತ್ತು ಕೇರಳ (Kerala) ರಾಜ್ಯಗಳು ಒಗ್ಗೂಡಿ ಶ್ರಮಿಸಲು ತೀರ್ಮಾನಿಸಿವೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ (Eshwar Khandre) ತಿಳಿಸಿದ್ದಾರೆ.

ADVERTISEMENT

ಬಂಡೀಪುರದ ಹುಲಿ ಸಂರಕ್ಷಿತ ಅರಣ್ಯದ ಸಫಾರಿ ಸ್ವಾಗತ ಕೇಂದ್ರದ ಬಳಿ ನಿರ್ಮಿಸಲಾಗಿದ್ದ ಸಭಾಂಗಣದಲ್ಲಿ ಕೇರಳದ ಅರಣ್ಯ ಸಚಿವ ಎ.ಕೆ. ಶಶೀಂದ್ರನ್ (A.K.Shashindran) ಅವರೊಂದಿಗೆ ಕರ್ನಾಟಕ, ಕೇರಳ ಹಾಗೂ ತಮಿಳುನಾಡು ರಾಜ್ಯಗಳ ಅರಣ್ಯ ಇಲಾಖೆಯ ಉನ್ನತಾಧಿಕಾರಿಗಳ ಪ್ರಥಮ ಸಮನ್ವಯ ಸಭೆಯಲ್ಲಿ ಮಾತನಾಡಿದ ಅವರು, ಇದು ಕೇಂದ್ರ ಸರ್ಕಾರದ ಆದೇಶದ ಮೇಲೆ ನಡೆಯುತ್ತಿರುವ ಸಭೆಯಲ್ಲ ಬದಲಾಗಿ, ದಕ್ಷಿಣದ ಮೂರು ರಾಜ್ಯಗಳ ಕಳಕಳಿ ಮತ್ತು ಸ್ವಯಂ ಪ್ರಯತ್ನದ ಫಲವಾದ ಸಭೆಯಾಗಿದೆ ಎಂದು ತಿಳಿಸಿದರು.

ವನ್ಯ ಜೀವಿಗಳು ಸ್ವಚ್ಛಂದವಾಗಿ ಒಂದು ಕಾಡಿನಿಂದ ಮತ್ತೊಂದಕ್ಕೆ ಸಂಚರಿಸುತ್ತವೆ. ಹಲವಾರು ಶತಮಾನಗಳಿಂದ ತಮಿಳುನಾಡು, ಕೇರಳ ಮತ್ತು ಕರ್ನಾಟಕದ ನಡುವೆ ಆನೆಗಳು ಮುಕ್ತವಾಗಿ ಓಡಾಡುತ್ತಿದ್ದು, ಯಾವುದೇ ವನ್ಯ ಜೀವಿಗೆ ರಾಜ್ಯದ ಗಡಿಯ ಮಿತಿ ಇರುವುದಿಲ್ಲ. ಆನೆ ಕಾರಿಡಾರ್ ಇದೆ. ಹುಲಿಗಳು ಕೂಡ ಒಂದು ಕಾಡಿನಿಂದ ಮತ್ತೊಂದಕ್ಕೆ ಹೋಗುತ್ತವೆ. ಈ ವನ್ಯಜೀವಿಗಳಿಂದ ಯಾವುದೇ ರಾಜ್ಯದಲ್ಲಿ ಅಮೂಲ್ಯ ಜೀವ ಅಥವಾ ಬೆಳೆ ಹಾನಿ ತಗ್ಗಿಸುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆಯೂ ಚರ್ಚಿಸಲಾಗಿದ್ದು ಶೀಘ್ರದಲ್ಲೇ ಇದಕ್ಕೆ ಒಂದು ಮೂರ್ತ ರೂಪ ನೀಡಲಾಗುವುದು ಎಂದರು.

ದಿವಂಗತ ಪ್ರಧಾನಿ ಇಂದಿರಾ ಗಾಂಧಿ (Indra Gandhi)ಅವರು ಅರಣ್ಯ ಸಂರಕ್ಷಣೆ ಮತ್ತು ವನ್ಯಜೀವಿಗಳ ಸಂರಕ್ಷಣೆಗೆ ಒತ್ತು ನೀಡಿ, ಕಾಯಿದೆಗಳನ್ನು ಜಾರಿಗೆ ತಂದರು. ನಂತರದ ಎಲ್ಲ ಸರ್ಕಾರಗಳೂ ವನ ಮತ್ತು ವನ್ಯಜೀವಿ ಸಂಪತ್ತಿನ ರಕ್ಷಣೆಗೆ ಒತ್ತು ನೀಡಿದ ಫಲವಾಗಿ ಇಂದು ಅರಣ್ಯ ಸಂರಕ್ಷಣೆಯೂ ಆಗಿದೆ, ವನ್ಯಜೀವಿಗಳ ಸಂತತಿಯಲ್ಲೂ ಹೆಚ್ಚಳವಾಗಿದೆ ಎಂದರು.

ಅರಣ್ಯ ಮತ್ತು ವನ್ಯಜೀವಿಗಳ ಸಂರಕ್ಷಣೆಗೆ ದಕ್ಷಿಣದ ಈ ಮೂರೂ ರಾಜ್ಯಗಳಲ್ಲಿರುವ ಉತ್ತಮ ರೂಢಿಗಳನ್ನು ಅಳವಡಿಸಿಕೊಂಡು ಪ್ರಕೃತಿ ಪರಿಸರ ಉಳಿಸಲು ಪರಸ್ಪರ ಸಹಯೋಗ ನೀಡಲು ಇಂದಿನ ಸಭೆಯಲ್ಲಿ ತೀರ್ಮಾನಿಸಲಾಯಿತು ಎಂದರು.

ಅರಣ್ಯ, ವನ್ಯಜೀವಿ ಸಂರಕ್ಷಣಾ ಕಾರ್ಯಕ್ರಮಗಳನ್ನು ಕರ್ನಾಟಕ, ಕೇರಳ ಮತ್ತು ತಮಿಳುನಾಡು ಮೂರೂ ರಾಜ್ಯಗಳು ಉತ್ತಮವಾಗಿ ಮಾಡುತ್ತಿವೆ. ಹೀಗಾಗಿಯೇ ಈ ಮೂರೂ ರಾಜ್ಯಗಳಲ್ಲಿ ವನ್ಯ ಜೀವಿಗಳ ಸಂಖ್ಯೆ ಹೆಚ್ಚಳವಾಗಿದೆ. ಈ ಪ್ರಯತ್ನಗಳನ್ನು ಮುಂದುವರಿಸುವುದು ನಿರ್ಣಾಯಕ ಎಂದು ಈಶ್ವರ ಖಂಡ್ರೆ ಒತ್ತಿ ಹೇಳಿದರು.

ವನ್ಯಜೀವಿಗಳ ಮತ್ತು ಜನಸಂಖ್ಯೆಯ ಹೆಚ್ಚಳದಿಂದ ವಸತಿ ಪ್ರದೇಶಗಳು ಅರಣ್ಯದಂಚಿಗೆ ಬರುತ್ತಿರುವ ಕಾರಣ ವನ್ಯಜೀವಿ-ಮಾನವ ಸಂಘರ್ಷ ಪ್ರಕರಣಗಳು ಹೆಚ್ಚಳವಾಗುತ್ತಿವೆ. ಈ ನಿಟ್ಟಿನಲ್ಲಿ ಭೂಮಿಯಲ್ಲಿ ಹುಟ್ಟಿದ ಪ್ರತಿಯೊಂದು ಜೀವಿಗೂ ಬದುಕುವ ಹಕ್ಕಿದೆ. ಹೀಗಾಗಿ ಕಾಡಿನಂಚಿನ ವಸತಿ ಪ್ರದೇಶಗಳ ಜನರು ವನ್ಯಜೀವಿಗಳೊಂದಿಗೆ ಸಹಬಾಳ್ವೆ ನಡೆಸುವುದು ಅತ್ಯಗತ್ಯ ಎಂದು ಪ್ರತಿಪಾದಿಸಿದರು.

ಪ್ರತಿಯೊಂದು ಜೀವವೂ ಅಮೂಲ್ಯವಾಗಿದ್ದು, ಈ ನಿಟ್ಟಿನಲ್ಲಿ ಸಂಘಟಿತ ಪ್ರಯತ್ನಗಳನ್ನು ಮಾಡಬೇಕಾಗಿದೆ. ಕರ್ನಾಟಕದಲ್ಲಿ ಆನೆಗಳು ನಾಡಿಗೆ ಬಾರದಂತೆ ತಡೆಯಲು ಆನೆ ಕಂದಕ ನಿರ್ಮಿಸಲಾಗುತ್ತಿದೆ, ಸೌರ ಬೇಲಿ ಅಳವಡಿಸಲಾಗುತ್ತಿದೆ. ಜೊತೆಗೆ ರೈಲ್ವೆ ಬ್ಯಾರಿಕೇಡ್ ಮಾಡಲಾಗುತ್ತಿದೆ ಎಂದರು.

ಮಾನವ-ಪ್ರಾಣಿ ಸಂಘರ್ಷವನ್ನು ನಿರ್ವಹಿಸಲು ಜಂಟಿ ಪ್ರಮಾಣಿತ ಕಾರ್ಯಾಚರಣಾ ಕಾರ್ಯವಿಧಾನವನ್ನು (ಎಸ್ಒಪಿ) ಅಳವಡಿಸಿಕೊಳ್ಳಲು ಪ್ರಸ್ತಾಪಿಸಿದ ಸಚಿವ ಈಶ್ವರ ಖಂಡ್ರೆ, ವಿವಿಧ ಇಲಾಖೆಗಳ ನಡುವೆ ಸಹಯೋಗ ಈ ನಿಟ್ಟಿನಲ್ಲಿ ಅತ್ಯಗತ್ಯವಾಗಿದೆ ಎಂದರು.

ತಮಿಳುನಾಡಿನ ಅರಣ್ಯ ಇಲಾಖೆಯ ಉನ್ನತಾಧಿಕಾರಿಗಳೂ ಈ ಸಭೆಯಲ್ಲಿ ಭಾಗಿಯಾಗಿದ್ದರು. ಸಭೆಯಲ್ಲಿ ಅರಣ್ಯ ಮತ್ತು ವನ್ಯಜೀವಿ ಸಂರಕ್ಷಣೆಯಲ್ಲಿ ಮೂರೂ ರಾಜ್ಯದಲ್ಲಿ ಅಳವಡಿಸಿಕೊಳ್ಳಲಾಗಿರುವ ಉತ್ತಮ ರೂಢಿಗಳ ಕುರಿತಂತೆ ಚರ್ಚಿಸಿ, ಜ್ಞಾನ ವಿನಿಮಯ ಮಾಡಲಾಯಿತು, ಜೊತೆಗೆ ಹೊಸ ಅನ್ವೇಷಣೆಗಳ ಬಗ್ಗೆಯೂ ಚರ್ಚಿಸಲಾಯಿತು ಎಂದರು.

ವನ್ಯಜೀವಿ -ಮಾನವ ಸಂಘರ್ಷ ಮತ್ತು ಕಳ್ಳಬೇಟೆ ತಡೆ, ಕಾಡ್ಗಿಚ್ಚು ನಿಯಂತ್ರಣಕ್ಕೆ ಅತ್ಯಾಧುನಿಕ ತಂತ್ರಜ್ಞಾನವನ್ನು ಸಮರ್ಥವಾಗಿ ಬಳಸಿಕೊಳ್ಳುವ ಅಗತ್ಯವಿದೆ. ಈ ಬಗ್ಗೆಯೂ ಸಭೆಯಲ್ಲಿ ಸಂಕ್ಷಿಪ್ತವಾಗಿ ಚರ್ಚಿಸಲಾಗಿದ್ದು, ಮುಂದಿನ ದಿನಗಳಲ್ಲಿ ಮೂರೂ ರಾಜ್ಯಗಳ ನಡುವೆ ನಡೆಯುವ ಸಭೆಗಳಲ್ಲಿ ತಂತ್ರಜ್ಞಾನ ಬಳಕೆಗೆ ಒತ್ತು ನೀಡಲಾಗುವುದು. ಜೊತೆಗೆ ಸನ್ನಾ ಮತ್ತು ಲಾಂಟನಾ ಕಳೆಯ ಸಮಸ್ಯೆಯ ನಿವಾರಣೆಗೂ ಸಹಯೋಗ ಅಗತ್ಯವಾಗಿದ್ದು, ತಂತ್ರಜ್ಞಾನ ಅಳವಡಿಕೆ ಮತ್ತು ಕಳೆ ನಾಶಕ್ಕೆ ಒಂದು ಸಲಹಾ ಸಮಿತಿ ರಚಿಸಲು ಪ್ರಸ್ತಾಪಿಸಲಾಗಿದೆ ಎಂದರು.

ಸಭೆಯ ಮುಖ್ಯಾಂಶಗಳು: ಸಹಯೋಗದ ಉಪಕ್ರಮಗಳು

  1. ಹಂಚಿಕೆಯ ಹೊಣೆಗಾರಿಕೆ ಸಮ್ಮತಿ: ವನ್ಯಜೀವಿಗಳ ಆವಾಸಸ್ಥಾನಗಳನ್ನು ಗುರುತಿಸುವುದು ಮತ್ತು ವಿಸ್ತರಿಸುತ್ತಿರುವುದು. ವಿಸ್ತರಣೆಯಾಗುತ್ತಿರುವ ವಸತಿ ಪ್ರದೇಶಗಳ ನಡುವೆಯೂ ಅರಣ್ಯ ಸಂರಕ್ಷಿಸುವ ಬದ್ಧತೆ.
  2. ಸಹಯೋಗದ ಚಾರ್ಟರ್: ಗಡಿಗಳನ್ನು ಮೀರಿ, ಮಾನವ-ಪ್ರಾಣಿ ಸಂಘರ್ಷಗಳನ್ನು ತಗ್ಗಿಸುವ ನಿಟ್ಟಿನಲ್ಲಿ ಒಗ್ಗಟ್ಟಿನಿಂದ ಕೆಲಸ ಮಾಡುವ ಹೃತ್ಪೂರ್ವಕ ಪ್ರತಿಜ್ಞೆ.
  3. ಕಾರ್ಯತಂತ್ರದ ಸಮನ್ವಯ: ತಡೆರಹಿತ ಸಹಯೋಗ, ರಚನಾತ್ಮಕ ಮಾಹಿತಿಯ ಹಂಚಿಕೆ ಮತ್ತು ಮಾನವ-ವನ್ಯಜೀವಿ ಸಂಘರ್ಷ ಸವಾಲುಗಳ ವಿರುದ್ಧ ಜಂಟಿ ಪ್ರಯತ್ನ.
  4. ಸಂಪನ್ಮೂಲ ವಿನಿಮಯ ಕಾರ್ಯಕ್ರಮ: ಸಮನ್ವಯತೆಯನ್ನು ಸಂಕೇತಿಸುವ ಈ ಕಾರ್ಯಕ್ರಮವು ನಿರ್ಣಾಯಕ ಸಂಪನ್ಮೂಲಗಳು, ಪರಿಣತಿ ಮತ್ತು ಜ್ಞಾನದ ವಿನಿಮಯವನ್ನು ಸುಗಮಗೊಳಿಸುತ್ತದೆ.
  5. ವನ್ಯಜೀವಿ ಸಂಖ್ಯೆಯ ಅಂದಾಜು ಮತ್ತು ಜಂಟಿ ಕಾರ್ಯಾಚರಣೆಗಳು: ವನ್ಯಜೀವಿಗಳ ಸಂಖ್ಯೆಯ ಆಧಾರದ ಮೇಲೆ ಮತ್ತು ಸಂಘಟಿತ ಕಾರ್ಯಾಚರಣೆಗಳ ಮೂಲಕ ಮಾಹಿತಿ ಆಧಾರಿತವಾಗಿ ನಿರ್ಧಾರ ತೆಗೆದುಕೊಳ್ಳುವುದು.
  6. ಸಲಹಾ ಮಂಡಳಿ: ವನ್ಯಜೀವಿ ಸಂರಕ್ಷಣಾ ತಜ್ಞರನ್ನು ಒಳಗೊಂಡು, ಸಂಘರ್ಷ ನಿರ್ವಹಣಾ ತಂತ್ರಗಳನ್ನು ಹೆಚ್ಚಿಸಲು ಅಮೂಲ್ಯವಾದ ಒಳನೋಟಗಳನ್ನು ಒದಗಿಸುವ ನಿಟ್ಟಿನಲ್ಲಿ ಒಂದು ಸಲಹಾ ಮಂಡಳಿ ರಚಿಸುವ ಪ್ರಸ್ತಾಪ.
  7. ವಿಮರ್ಶೆ ಮತ್ತು ಹೊಂದಾಣಿಕೆ: ಸುಸ್ಥಿರ ಉತ್ಕೃಷ್ಟತೆ ಮತ್ತು ವಿಕಸನಗೊಳ್ಳುತ್ತಿರುವ ಜವಾಬ್ದಾರಿಗಳಿಗೆ ಹೊಂದಿಕೊಳ್ಳುವಿಕೆಗಾಗಿ ಆಡಳಿತದಲ್ಲಿ ನಿಯಮಿತ ಪರಾಮರ್ಶೆ.

ಭವಿಷ್ಯದ ಹಂಚಿಕೆಯ ದೃಷ್ಟಿಕೋನ:
ಮಾನವ ಮತ್ತು ವನ್ಯಜೀವಿಗಳು ಸಾಮರಸ್ಯದಿಂದ ಸಹಬಾಳ್ವೆ ನಡೆಸುವ ಜವಾಬ್ದಾರಿಯುತ ಸಂರಕ್ಷಣೆಯ ಪರಂಪರೆಯನ್ನು ಸೃಷ್ಟಿಸುವ ಗುರಿಯನ್ನು ಹೊಂದಿರುವ ಆಡಳಿತಾತ್ಮಕ ಗಡಿಗಳನ್ನು ಮೀರಿದ ಹಂಚಿಕೆಯ ದೃಷ್ಟಿಕೋನವನ್ನು ಈ ಚಾರ್ಟರ್ ಒಳಗೊಂಡಿದೆ.

ಸಭೆಯಲ್ಲಿ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳು (ಪಿಸಿಸಿಎಫ್), ಅರಣ್ಯ ಪಡೆ ಮುಖ್ಯಸ್ಥರು, ಮುಖ್ಯ ವನ್ಯಜೀವಿ ವಾರ್ಡನ್ಗಳು ಮತ್ತು ಕರ್ನಾಟಕ, ಕೇರಳ ಮತ್ತು ತಮಿಳುನಾಡಿನ ಇತರ ಅಧಿಕಾರಿಗಳು ಸೇರಿದಂತೆ ಗಣ್ಯ ಗಣ್ಯರು ಉಪಸ್ಥಿತರಿದ್ದರು.

#karnataka #bandipura #karnataka #tamilnadu #kerla #EshwarKhandre

Previous Post

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಗೆ ಟಿಕೆಟ್ ಮಿಸ್ ?! 

Next Post

ಸಂವಿಧಾನ ತಿದ್ದುಪಡಿಗೆ ನಮಗೆ 400 ಸೀಟ್​ಗಳ ಅಗತ್ಯವಿದೆ – ಅನಂತ್​ ಕುಮಾರ್​ ಹೆಗ್ಡೆ !

Related Posts

Top Story

Priyank Kharge: ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು.

by ಪ್ರತಿಧ್ವನಿ
October 12, 2025
0

ಸರ್ಕಾರಿ ಶಾಲಾ ಕಾಲೇಜು ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು ಎಂದು ಒತ್ತಾಯಿಸಿ ಕರ್ನಾಟಕದ ಸಚಿವ ಪ್ರಿಯಾಂಕ್ ಖರ್ಗೆ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ...

Read moreDetails

V Somanna: ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸಿದ ವಿ.ಸೋಮಣ್ಣ

October 12, 2025

ನಮ್ಮ ಅನ್ನ ತಿಂದು ರಾಜ್ಯೋತ್ಸವದ ದಿನ ಕರಾಳ ದಿನ ಆಚರಿಸುವ ಮೂರ್ಕರು ಬೆಳಗಾವಿಯಲ್ಲಿದ್ದಾರೆ.

October 12, 2025

Basavaraj Bommai: ಸಂಭ್ರಮದಿಂದ ಬಂಕಾಪುರ ಹಿಂದೂ ಮಹಾಸಭಾ ಗಣೇಶ ವಿಸರ್ಜನೆ

October 12, 2025

DK Shivakumar: ಇಂತ ಶಾಸಕರನ್ನು ಆಯ್ಕೆ ಮಾಡಿಕೊಂಡ ನಿಮ್ಮ ಪರಿಸ್ಥಿತಿ ಏನೆಂದು ನನಗೆ ಅರ್ಥವಾಗುತ್ತದೆ..!!

October 12, 2025
Next Post
ಸಂವಿಧಾನ ತಿದ್ದುಪಡಿಗೆ ನಮಗೆ 400 ಸೀಟ್​ಗಳ ಅಗತ್ಯವಿದೆ – ಅನಂತ್​ ಕುಮಾರ್​ ಹೆಗ್ಡೆ !

ಸಂವಿಧಾನ ತಿದ್ದುಪಡಿಗೆ ನಮಗೆ 400 ಸೀಟ್​ಗಳ ಅಗತ್ಯವಿದೆ - ಅನಂತ್​ ಕುಮಾರ್​ ಹೆಗ್ಡೆ !

Please login to join discussion

Recent News

Top Story

Priyank Kharge: ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು.

by ಪ್ರತಿಧ್ವನಿ
October 12, 2025
Top Story

V Somanna: ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸಿದ ವಿ.ಸೋಮಣ್ಣ

by ಪ್ರತಿಧ್ವನಿ
October 12, 2025
Top Story

ನಮ್ಮ ಅನ್ನ ತಿಂದು ರಾಜ್ಯೋತ್ಸವದ ದಿನ ಕರಾಳ ದಿನ ಆಚರಿಸುವ ಮೂರ್ಕರು ಬೆಳಗಾವಿಯಲ್ಲಿದ್ದಾರೆ.

by ಪ್ರತಿಧ್ವನಿ
October 12, 2025
Top Story

Basavaraj Bommai: ಸಂಭ್ರಮದಿಂದ ಬಂಕಾಪುರ ಹಿಂದೂ ಮಹಾಸಭಾ ಗಣೇಶ ವಿಸರ್ಜನೆ

by ಪ್ರತಿಧ್ವನಿ
October 12, 2025
Top Story

DK Shivakumar: ಇಂತ ಶಾಸಕರನ್ನು ಆಯ್ಕೆ ಮಾಡಿಕೊಂಡ ನಿಮ್ಮ ಪರಿಸ್ಥಿತಿ ಏನೆಂದು ನನಗೆ ಅರ್ಥವಾಗುತ್ತದೆ..!!

by ಪ್ರತಿಧ್ವನಿ
October 12, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Priyank Kharge: ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು.

October 12, 2025

V Somanna: ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸಿದ ವಿ.ಸೋಮಣ್ಣ

October 12, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada