ಬೆಂಗಳೂರು (Bengaluru): ಲೋಕಸಭಾ ಚುನಾವಣೆಗೆ (loksabha election) ಕರ್ನಾಟಕದ (karnataka) 22 ಲೋಕಸಭಾ ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳ ಹೆಸರನ್ನು ಫೈನಲ್ ಮಾಡಲಾಗಿದೆ.
ಪ್ರಧಾನಿ ನರೇಂದ್ರ ಮೋದಿ (Narendra Modi) ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ (j.p.nadda) ನೇತೃತ್ವದಲ್ಲಿ ನವದೆಹಲಿಯಲ್ಲಿ ಸೋಮವಾರ ನಡೆದ ಬಿಜೆಪಿ ಕೇಂದ್ರ ಚುನಾವಣಾ ಸಮಿತಿ (ಸಿಇಸಿ) ಸಭೆಯಲ್ಲಿ 22 ಅಭ್ಯರ್ಥಿಗಳ ಹೆಸರನ್ನು ಫೈನಲ್ ಮಾಡಲಾಗಿದೆ. ಎಲ್ಲಾ ಅಭ್ಯರ್ಥಿಗಳ ಹೆಸರುಗಳನ್ನು ಒಂದು ಅಥವಾ ಎರಡು ದಿನಗಳಲ್ಲಿ ಎರಡು ಪಟ್ಟಿಗಳಲ್ಲಿ ಘೋಷಿಸುವ ನಿರೀಕ್ಷೆಯಿದೆ.
ಮೂಲಗಳ ಪ್ರಕಾರ, ಮೈಸೂರು-ಕೊಡಗು (Mysuru-Kodagu) ಕ್ಷೇತ್ರದ ಸಂಸದ ಪ್ರತಾಪಸಿಂಹ (Pratap Smiha) ಅವರಿಗೆ ಟಿಕೆಟ್ ಕೈ ತಪ್ಪುವುದು ಬಹುತೇಕ ಖಚಿತವಾಗಿದ್ದು,, ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ (Yaduveer Krishnadatta Chamaraja Wadiyar) ಅವರಿಗೆ ಟಿಕೆಟ್ ಸಿಗಲಿದೆ ಎಂದು ತಿಳಿದು ಬಂದಿದೆ.
ಬೆಳಗಾವಿಯಿಂದ ಮಾಜಿ ಸಿಎಂ ಜಗದೀಶ್ ಶೆಟ್ಟರ್ (jagadish sheetar), ಹುಬ್ಬಳ್ಳಿ-ಧಾರವಾಡದಿಂದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ (Prahlad joshi), ಉಡುಪಿ-ಚಿಕ್ಕಮಗಳೂರಿನಿಂದ ಶೋಭಾ ಕರಂದ್ಲಾಜೆ (Shobha Karandlaje) ಮತ್ತು ಶಿವಮೊಗ್ಗದಿಂದ ಬಿ.ವೈ.ರಾಘವೇಂದ್ರ (B.Y.Raghavendra) ಸೇರಿದಂತೆ ಕೆಲವು ಹೆಸರುಗಳನ್ನು ಅನುಮೋದಿಸಲಾಗಿದೆ.
ಚಿಕ್ಕೋಡಿಯಿಂದ ರಮೇಶ್ ಕತ್ತಿ (Ramesh katti), ಚಿಕ್ಕಬಳ್ಳಾಪುರದಿಂದ ಡಾ.ಸುಧಾಕರ್(Dr.k.sudhakar), ವಿಜಯಪುರದಿಂದ ಗೋವಿಂದ್ ಕಾರಜೋಳ (Govinda karjol), ಬೆಂಗಳೂರು ದಕ್ಷಿಣದಿಂದ ತೇಜಸ್ವಿ ಸೂರ್ಯ (tejasvi surya), ಬೆಂಗಳೂರು ಸೆಂಟ್ರಲ್‌ನಿಂದ ಪಿಸಿ ಮೋಹನ್ (p.c.mohan), ಬೆಂಗಳೂರು ಗ್ರಾಮಾಂತರದಿಂದ ಡಾ.ಸಿ.ಎನ್.ಮಂಜುನಾಥ್ (Dr.C.N.Manjunath), ತುಮಕೂರಿನಿಂದ ವಿ ಸೋಮಣ್ಣ (v.sommanna), ಹಾವೇರಿಯಿಂದ ಬಸವರಾಜ ಬೊಮ್ಮಾಯಿ (Basavaraja Bommai) ಹೆಸರನ್ನು ಅಂತಿಮಗೊಳಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ದಕ್ಷಿಣ ಕನ್ನಡ ಸಂಸದ ನಳಿನ್‌ಕುಮಾರ್ ಕಟೀಲ್ (Nalin Kumar Kateel) ಅವರಿಗೆ ಟಿಕೆಟ್ ಕೈ ತಪ್ಪುವ ಸಾಧ್ಯತೆ ಇದ್ದು, ಚಿತ್ರದುರ್ಗದಿಂದ ಕೇಂದ್ರ ಸಚಿವ ನಾರಾಯಣಸ್ವಾಮಿ (Narayana Swamy) ಅವರಿಗೆ ಟಿಕೆಟ್ ಸಿಗುವ ನಿರೀಕ್ಷೆ ಇದೆ.
#karnataka #bengaluru #loksabhaelection #bjp #bjpticketlist





