ಬೆಂಗಳೂರು (Bengaluru): ರಾಜ್ಯ ಸರ್ಕಾರದ ವಕ್ತಾರರನ್ನಾಗಿ ಐವರು ಸಚಿವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ನೇಮಕ ಮಾಡಿದ್ದಾರೆ.

ಸಚಿವರಾದ ದಿನೇಶ್ ಗುಂಡೂರಾವ್ (Dinesh Gundurao), ಕೃಷ್ಣ ಭೈರೇಗೌಡ (Krishna Byregowda), ಪ್ರಿಯಾಂಕ್ ಖರ್ಗೆ (priyank kharge), ಈಶ್ವರ ಬಿ.ಖಂಡ್ರೆ (eshwara b kandhre), ಸಂತೋಷ್ ಎಸ್.ಲಾಡ್ (santhosh lad) ಅವರನ್ನು ಸರ್ಕಾರದ ವಕ್ತಾರರನ್ನಾಗಿ ನೇಮಕ ಮಾಡಲಾಗಿದೆ.
ಇವರಿಗೆ ಸರ್ಕಾರದ ಸಾಧನೆಗಳು, ದಾಖಲೆಗಳು ಮತ್ತು ಮಾಹಿತಿಯನ್ನು ಕಾಲಕಾಲಕ್ಕೆ ಒದಗಿಸಲು ಅಗತ್ಯ ಕ್ರಮ ವಹಿಸುವಂತೆ ಎಲ್ಲಾ ಇಲಾಖಾ ಮುಖ್ಯಸ್ಥರುಗಳಿಗೆ ಸೂಕ್ತ ನಿರ್ದೇಶನ ನೀಡಲು ಮುಖ್ಯಮಂತ್ರಿಗಳು ನೇಮಕಾತಿ ಆದೇಶದಲ್ಲಿ ತಿಳಿಸಿದ್ದಾರೆ.
#karnataka #bengaluru #siddaramaiah #congress #stategovernment











