ಉಡುಪಿ (Udupi): ಪೌರತ್ವ ಕಾಯ್ದೆಯನ್ನು ಕೇವಲ ಚುನಾವಣೆಯ ದೃಷ್ಟಿಯಿಂದ ಕೇಂದ್ರ ಸರ್ಕಾರ ಜಾರಿ ಮಾಡಿದ್ದು, ಬಿಜೆಪಿಯವರಿಗೆ (BJP) ಲೋಕಸಭಾ ಚುನಾವಣೆಯಲ್ಲಿ (Loksabha Election) ಸೋಲಿನ ಭಯ ಕಾಡುತ್ತಿರುವುದರಿಂದ ಈ ರೀತಿಯ ಗಿಮಿಕ್ಸ್ ಗಳನ್ನು ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (siddaramaiah) ತಿಳಿಸಿದರು.

ಅವರು ಇಂದು ಉಡುಪಿಯಲ್ಲಿ ಮಾಧ್ಯಮದವರೊಂದಿಗೆ ಪೌರತ್ವ ಕಾಯ್ದೆ ಜಾರಿ ಬಗ್ಗೆ ಮಾತನಾಡಿದ ಅವರು, ಇಷ್ಟು ವರ್ಷಗಳ ಕಾಲ ಈ ಬಗ್ಗೆ ಮೌನವಹಿಸಿ, ಚುನಾವಣೆಯ ಹೊಸ್ತಿಲಲ್ಲಿ ಜಾರಿಗೊಳಿಸಿದ್ದಾರೆ. ರಾಜ್ಯದಲ್ಲಿ ಸಿಎಎ ಜಾರಿ ಬಗ್ಗೆ ನಾಳೆ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಾಗುವುದು ಎಂದರು.
ಪಕ್ಷಕ್ಕೆ ಬಲ
ಜಯಪ್ರಕಾಶ್ ಹೆಗಡೆಯವರು (jayaprakash hegde) ಮತ್ತೊಮ್ಮೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿರುವುದು ಕರಾವಳಿ ಪ್ರದೇಶದಲ್ಲಿ ಪಕ್ಷಕ್ಕೆ ಬಲ ತುಂಬಿದಂತಾಗಿದೆ ಎಂದರು.
ಮೈಸೂರು ಸಂಸದ ಪ್ರತಾಪ್ ಸಿಂಹ (Pratap simha) ಅವರಿಗೆ ಈ ಬಾರಿ ಲೋಕಸಭಾ ಚುನಾವಣೆ ಟಿಕೆಟ್ ನೀಡದೇ ಯದುವೀರ್ (yaduveer) ಅವರಿಗೆ ಟಿಕೆಟ್ ನೀಡುವ ನಿರ್ಧಾರವನ್ನು ಬಿಜೆಪಿ ಕೈಗೊಂಡಿರುವ ಕಾರಣದ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ ಎಂದರು.
#karnataka #udupi #siddaramaiah #congress #bjp













