ಬೆಂಗಳೂರು(Bangalore) ಗ್ರಾಮಾಂತರ ಲೋಕಸಭಾ(LokaSaba) ಕ್ಷೇತ್ರದಿಂದ ಚುನಾವಣೆಗೆ(Election) ಸ್ಪರ್ಧಿಸುವುದು ಖಚಿತ ಆಗ್ತಿದ್ದಂತೆ ಪಕ್ಷ ಸೇರ್ಪಡೆಗೆ ಮುಹೂರ್ತ ಫಿಕ್ಸ್ ಆಗಿದೆ. ಬಿಜೆಪಿ(BJP) ಅಭ್ಯರ್ಥಿ ಆಗಿ ಕಣಕ್ಕಿಳಿಯುವುದು ಖಚಿತ ಆಗಿದೆ. ನಾಳೆ ಸಂಜೆ ವೇಳೆಗೆ ಟಿಕೆಟ್ ಘೋಷಣೆ ಆಗಲಿದ್ದು, ಡಿ.ಕೆ.ಸುರೇಶ್(DK Suresh) ವಿರುದ್ಧ ಜಯದೇವ ಹೃದ್ರೋಗ ಆಸ್ಪತ್ರೆ ನಿವೃತ್ತ ನಿರ್ದೇಶಕ ಡಾ.ಸಿ.ಎನ್. ಮಂಜುನಾಥ್(Dr CN Manjunath) ಅಖಾಡಕ್ಕೆ ಧುಮುಕಲಿದ್ದಾರೆ. ಹೀಗಾಗಿ ನಾಳೆ ಬೆಳಗ್ಗೆ 10 ಗಂಟೆಗೆ ಬಿಜೆಪಿ(BJP) ಪಕ್ಷ ಸೇರ್ಪಡೆ ಅಗಲಿದ್ದಾರೆ ಡಾ. ಮಂಜುನಾಥ್.
ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ ಹಿನ್ನೆಲೆ, ನಾಳೆ ಮಲ್ಲೇಶ್ವರದ ಬಿಜೆಪಿ ಕಚೇರಿ(BJP office) ಯಲ್ಲಿ ಅಧಿಕೃತವಾಗಿ ಪಕ್ಷಕ್ಕೆ ಸೇರಲಿದ್ದಾರೆ. ರಾಜ್ಯಚುನಾವಣಾ ಉಸ್ತುವಾರಿ ರಾಧಾ ಮೋಹನ್‌ದಾಸ್ ಅಗರ್ವಾಲ್, ಮಾಜಿ ಸಿಎಂ ಯಡಿಯೂರಪ್ಪ(Yediyurappa) ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ(BY Vijayendra) ವಿಪಕ್ಷ ನಾಯಕ ಆರ್.ಅಶೋಕ್(R Ashok) ಸೇರಿದಂತೆ ಪ್ರಮುಖ ನಾಯಕರ ಸಮ್ಮುಖದಲ್ಲಿ ಪಕ್ಷ ಸೇರ್ಪಡೆ ಆಗಲಿದ್ದಾರೆ ಎಂದು ಬಿಜೆಪಿ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.













