ನವದೆಹಲಿ (Newdelhi): ಲೋಕಸಭಾ ಚುನಾವಣೆ (Loksabha Election) ಹಿನ್ನೆಲೆಯಲ್ಲಿ ಕಾಂಗ್ರೆಸ್ (Congress) ಮಹಿಳೆಯರಿಗೆ ಐದು ಗ್ಯಾರಂಟಿಗಳನ್ನು (Five Guarantees)ಬುಧವಾರ ಘೋಷಿಸಿದೆ.
ಕರ್ನಾಟಕದ ಗ್ಯಾರಂಟಿ ಯೋಜನೆಗಳಿಂದ ಪ್ರೇರಿತವಾಗಿ ಗ್ಯಾರಂಟಿಗಳನ್ನು ಘೋಷಿಸಲಾಗಿದೆ. ‘ನಾರಿ ನ್ಯಾಯ ಗ್ಯಾರಂಟಿ’ (Nari Naya Guarantee) ಯೋಜನೆ ಅಡಿಯಲ್ಲಿ ಕಾಂಗ್ರೆಸ್ ಮಹಿಳೆಯರಿಗೆ ಐದು ಭರವಸೆಗಳನ್ನು ನೀಡಿದೆ.
ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjuna Kharge) ಅವರು, ಪಕ್ಷವು ಮಹಿಳೆಯರಿಗೆ “ನಾರಿ ನ್ಯಾಯ ಗ್ಯಾರಂಟಿ”ಯನ್ನು ಘೋಷಿಸಿದೆ. ಇದಕ್ಕೂ ಮುನ್ನ ಕಾಂಗ್ರೆಸ್ ಪಕ್ಷ ರೈತ ನ್ಯಾಯ ಮತ್ತು ಯುವ ನ್ಯಾಯದ ಭರವಸೆಗಳನ್ನು ಘೋಷಿಸಿದೆ ಎಂದು ಹೇಳಿದರು.
ನೀವೆಲ್ಲರೂ ಕಾಂಗ್ರೆಸ್ ಪಕ್ಷಕ್ಕೆ ಆಶೀರ್ವಾದ ಮಾಡುತ್ತಿರಿ ಮತ್ತು ಪ್ರಜಾಪ್ರಭುತ್ವ ಹಾಗೂ ಸಂವಿಧಾನವನ್ನು ಉಳಿಸುವ ಈ ಹೋರಾಟದಲ್ಲಿ ನಮ್ಮ ಕೈಗಳನ್ನು ಬಲಪಡಿಸಬೇಕು ಎಂದು ಖರ್ಗೆ ಮನವಿ ಮಾಡಿದ್ದಾರೆ.
ಮಹಾಲಕ್ಷ್ಮಿ ಗ್ಯಾರಂಟಿ (Mahalakshmi Guarantee) ಯೋಜನೆ ಅಡಿ ದೇಶದ ಬಡ ಕುಟುಂಬದ ಮಹಿಳೆಗೆ ವಾರ್ಷಿಕ 1 ಲಕ್ಷ ರೂ. ಆರ್ಥಿಕ ಸಹಾಯವನ್ನು ನೇರವಾಗಿ ಅವರ ಖಾತೆಗೆ ವರ್ಗಾವಣೆ ಮಾಡುವುದಾಗಿ ಮತ್ತು ಕೇಂದ್ರ ಸರ್ಕಾರಿ ಉದ್ಯೋದಗಲ್ಲಿ ಮಹಿಳೆಯರಿಗೆ ಶೇ.50 ರಷ್ಟು ಮೀಸಲಾತಿ ನೀಡುವುದಾಗಿ ಹೇಳಿದೆ.
ಶಕ್ತಿ ಕಾ ಸಮ್ಮಾನ್ ಖಾತರಿ (shakti ka saman katari) ಅಡಿಯಲ್ಲಿ, ಆಶಾ, ಅಂಗನವಾಡಿ ಮತ್ತು ಮಧ್ಯಾಹ್ನದ ಊಟದ ಕಾರ್ಯಕರ್ತೆಯರ ಮಾಸಿಕ ವೇತನಕ್ಕೆ ಕೇಂದ್ರದ ಹಣವನ್ನು ಡಬಲ್ ಮಾಡಲಾಗುವುದು ಎಂದು ಖರ್ಗೆ ಹೇಳಿದ್ದಾರೆ.
ಅಧಿಕಾರ ಮೈತ್ರಿ (adikara mytri) ಗ್ಯಾರಂಟಿ ಅಡಿಯಲ್ಲಿ, ಮಹಿಳೆಯರಿಗೆ ತಮ್ಮ ಕಾನೂನು ಹಕ್ಕುಗಳ ಬಗ್ಗೆ ಶಿಕ್ಷಣ ನೀಡಲು ಮತ್ತು ಅವರಿಗೆ ಸಹಾಯ ಮಾಡಲು ಪ್ಯಾರಾ-ಲೀಗಲ್ ಕಾರ್ಯಕಾರಿಯಾಗಿ ಸೇವೆ ಸಲ್ಲಿಸಲು ಕಾಂಗ್ರೆಸ್ ಪ್ರತಿ ಪಂಚಾಯತ್‌ನಲ್ಲಿ “ಅಧಿಕಾರ ಮೈತ್ರಿ” ಯನ್ನು ನೇಮಿಸುತ್ತದೆ.
ಇನ್ನು ಸಾವಿತ್ರಿ ಬಾಯಿ ಫುಲೆ (Savitri bhai pule) ಹಾಸ್ಟೆಲ್‌ಗಳು ಗ್ಯಾರಂಟಿ ಯೋಜನೆ ಅಡಿ, ದೇಶದಲ್ಲಿ ಉದ್ಯೋಗದಲ್ಲಿರುವ ಮಹಿಳೆಯರಿಗಾಗಿ ಪ್ರತಿ ಜಿಲ್ಲೆಯಲ್ಲಿ ಕನಿಷ್ಠ ಒಂದರಂತೆ ಹಾಸ್ಟೆಲ್‌ಗಳ ಸಂಖ್ಯೆಯನ್ನು ದ್ವಿಗುಣಗೊಳಿಸುವುದಾಗಿ ಕಾಂಗ್ರೆಸ್ ಭರವಸೆ ನೀಡಿದೆ.
#india #newdelhi #loksabhaelection #congress #FiveGuarantees #mallikarjunakharge













