ಬೆಂಗಳೂರು (Bengaluru): ಹಿಂದೂ (Hindu) ಫೈರ್ ಬ್ರ್ಯಾಂಡ್ ಪುತ್ತಿಲ ಪರಿವಾರದ ಮುಖ್ಯಸ್ಥ ಅರುಣ್ ಕುಮಾರ್ ಪುತ್ತಿಲ (arun kumar puthila) ರವರು ಬಿಜೆಪಿಗೆ (BJP) ಸೇರೋದು ಕನ್ಫರ್ಮ್ ಆಗಿದೆ.
ಈ ಬಗ್ಗೆ ಬೆಂಗಳೂರಲ್ಲಿ ಮಾಜಿ ಸಚಿವ ಸುನಿಲ್ ಕುಮಾರ್ (Sunil Kumar) ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ (B S Yediyurappa) ನಿವಾಸದ ಮುಂದೆ ಮಾಧ್ಯಮಗಳ ಜತೆ ಮಾತಾಡಿದ ಅವರು ಅರುಣ್ ಕುಮಾರ್ ಪುತ್ತಿಲ ಅವರು ಮೋದಿ ಪರಿವಾರದ (Modi Parivara) ಜೊತೆಗೆ ಇರಬೇಕೆಂದು ನಿಶ್ಚಯ ಮಾಡಿದ್ದಾರೆ.ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡದಲ್ಲಿ (Dakshina Kannada) ಅಭ್ಯರ್ಥಿಯ ಗೆಲುviಗಾಗಿ ಶ್ರಮಿಸುತ್ತಾರೆ.

ರಾಜ್ಯಾಧ್ಯಕ್ಷ ವಿಜಯೇಂದ್ರ ಸಮ್ಮುಖದಲ್ಲಿ ಮಾತುಕತೆ ಆಗಿ, ಅವರು ಪಕ್ಷಕ್ಕೆ ಸೇರ್ಪಡೆಯಾಗೋದು ನಿಶ್ಚಯವಾಗಿದೆ ಅಂದಿದ್ದಾರೆ. ಮುಂದಿನ ದಿನಗಳಲ್ಲಿ ಅವರಿಗೆ ಪಕ್ಷ ಸೂಕ್ತವಾದ ಸ್ಥಾನಮಾನ ನೀಡಲಿದೆ ಎಂದು ಸುನಿಲ್‌ಕುಮಾರ್ ಹೇಳಿದ್ದಾರೆ.
ಹಿಂದೂ ಮುಖಂಡ ಅರುಣ್ ಪುತ್ತಿಲ ಬಿಜೆಪಿ ಸೇರ್ಪಡೆಗೆ ಒಪ್ಪಿಗೆ ನೀಡಿರೋದು ಬಿಜೆಪಿ ಗೆ ಬೂಸ್ಟ್ ಸಿಕ್ಕಂತಾಗಿದೆ. ಕಳೆದ ವಿಧಾನಸಭಾ ಚುನಾವಣೆಯಿಂದ ಆರಂಭಗೊಂಡಿದ್ದ ಬಿಜೆಪಿ-ಪುತ್ತಿಲರ ನಡುವಿನ ಸಂಘರ್ಷ ಇದೀಗ ಅಂತ್ಯವಾಗಿದೆ. ಕೊನೆಗೂ ಸಂಧಾನ ಯಶಸ್ವಿಯಾಗಿದೆ.

ಇದೀಗ ಬಿಜೆಪಿ ಮರು ಸೇರ್ಪಡೆಯಾಗಲು ಪುತ್ತಿಲ ಒಪ್ಪಿಗೆ ನೀಡಿದ್ದಾರೆ. ಬಿಜೆಪಿ ರಾಜ್ಯ ಸಂಘಟನಾ ಕಾರ್ಯದರ್ಶಿ ರಾಜೇಶ್ ನೇತೃತ್ವದಲ್ಲಿ ಬೆಂಗಳೂರಿನ ರಾಜ್ಯ ಬಿಜೆಪಿ ಕಚೇರಿಯಲ್ಲಿ ನಡೆದ ಪುತ್ತಿಲರ ಜೊತೆಗಿನ ಸಂಧಾನ ಸಕ್ಸಸ್ ಆಗಿದೆ. ಪುತ್ತಿಲ ಬಿಜೆಪಿ ಸೇರ್ಪಡೆಯಿಂದ ದಕ್ಷಿಣ ಕನ್ನಡದಲ್ಲಿ ಬಿಜೆಪಿ ಗೆಲುವು ಸುಲಭವಾಗಲಿದೆ.
#karnataka #bengaluru #loksabhaelection #arunkumarputhila̳ #bjp #sunilkumar