ಮಂಡ್ಯ (Mandya): 2024ರ ಲೋಕಸಭಾ ಚುನಾವಣೆಯಲ್ಲಿ (Loksabha Election) ಮಂಡ್ಯ (Mandya) ಕ್ಷೇತ್ರದಿಂದ ಮಾಜಿ ಮುಖ್ಯಮಂತ್ರಿ ಶ್ರೀ ಹೆಚ್.ಡಿ.ಕುಮಾರಸ್ವಾಮಿ (H D Kumarswamy) ಸ್ಪರ್ಧಿಸುವುದು ಬಹುತೇಕ ಫಿಕ್ಸ್ ಎನ್ನಲಾಗುತ್ತಿದೆ.
ಮಂಡ್ಯ ಬಿಜೆಪಿ-ಜೆಡಿಎಸ್ (BJP – JDS) ಅಭ್ಯರ್ಥಿಯಾಗಿ ಕುಮಾರಸ್ವಾಮಿ ಕಣಕ್ಕಿಳಿಯುವುದು ಬಹುತೇಕ ಖಚಿತವಾಗಿದೆ.
ಬಿಜೆಪಿ ಹೈಕಮಾಂಡ್‌ನಿಂದಲೂ ಕುಮಾರಸ್ವಾಮಿ ಸ್ಪರ್ಧೆಗೆ ಸಮ್ಮತಿ ಸೂಚಿಸಿದ್ದಾರೆ ಎನ್ನಲಾಗುತ್ತಿದೆ. ನಿನ್ನೆ ನಡೆದ ಜೆಡಿಎಸ್ ಕೋರ್ ಕಮಿಟಿ ಸಭೆಯಲ್ಲೂ ಕುಮಾರಸ್ವಾಮಿ ಸ್ಪರ್ಧೆ ಬಗ್ಗೆ ಚರ್ಚೆಯಾಗಿದೆ. ಸಭೆಯಲ್ಲಿ ಕುಮಾರಸ್ವಾಮಿ ಮಂಡ್ಯದಿಂದ ಸ್ಪರ್ಧೆ ಮಾಡಲೂ ಎಲ್ಲಾ ನಾಯಕರು ಒಪ್ಪಿಗೆ ಸೂಚಿಸಿದ್ದಾರೆ.
ಮಾ.25ಕ್ಕೆ ಕುಮಾರಸ್ವಾಮಿ ಅವರು ಅಧಿಕೃತ ಅಭ್ಯರ್ಥಿ ಎಂದು ಘೋಷಣೆಯಾಗಲಿದೆ. ಕುಮಾರಸ್ವಾಮಿ ಅವರ ಆಪರೇಷನ್ ಬಳಿಕ ಮಂಡ್ಯದಲ್ಲಿ ಬೃಹತ್ ಸಭೆ ನಡೆಸಿ, ಸಭೆಯ ಮೂಲಕ ಅಧಿಕೃತ ಚುನಾವಣಾ ಅಖಾಡಕ್ಕೆ ಧುಮುಕಲಿದ್ದಾರೆ.
#karnataka #mandya #loksabhaelection #hdkumarswamy #jds