ಲೋಕಸಭಾ ಎಲೆಕ್ಷನ್ ಘೋಷಣೆಯಾಗಿ 3 ದಿನ ಕಳೆದಿದೆ. ಎಲ್ಲಾ ಕ್ಷೇತ್ರದಲ್ಲಿ ರಾಜಕೀಯ ಚಟುವಟಿಕೆ ಜೋರಾಗಿದೆ. ಈ ನಡುವೆ ಡಿಸಿಎಂ ಡಿಕೆಶಿ ದಿಲ್ಲಿಗೆ ಪ್ರಯಾಣ ಮಾಡಿದ್ದಾರೆ. ಬಾಕಿಯಿರೋ ಕ್ಷೇತ್ರಗಳ ಟಿಕೆಟ್ ಫೈನಲ್ ಮಾಡೋಕೆ ವರಿಷ್ಠರ ಭೇಟಿಗೆ ತೆರಳಿದ್ದಾರೆ.
ಬುಧವಾರ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಫೈನಲ್ ಆಗಲಿದೆ. ನನಗೆ ವಿಶ್ವಾಸ ಇದೆ. ಎರಡು ಮೂರು ಕ್ಷೇತ್ರ ಬಿಟ್ಟು ಎಲ್ಲಾ ಅಭ್ಯರ್ಥಿಗಳ ಪಟ್ಟಿ ಫೈನಲ್ ಆಗಲಿದೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದರು.

ಡಿಸಿಎಂ ಡಿಕೆ ಶಿವಕುಮಾರ್ ದೆಹಲಿಗೆ ತೆರಳುವ ಮುನ್ನ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದರು. ಇನ್ನು ಮಾಜಿ ಕೇಂದ್ರ ಸಚಿವ ಡಿ.ವಿ ಸದಾನಂದಗೌಡರನ್ನ ಕಾಂಗ್ರೆಸ್ ಗೆ ಕರೆತರುವ ವಿಚಾರ ಕುರಿತು ಪ್ರತಿಕ್ರಿಯಿಸಿದ ಅವರು, ಲಕ್ಷ್ಮಣ್ ಸವದಿ, ಜಗದೀಶ್ ಶೆಟ್ಟರ್ ಕರೆ ತಂದು ಟಿಕೆಟ್ ನೀಡಿದ್ವಿ. ಜೆಡಿಎಸ್ ನಿಂದ ಎಂ.ಪಿ ಕುಮಾರಸ್ವಾಮಿ, ಆಯನೂರು ಮಂಜುನಾಥ್ ಕತರೆ ತಂದವು. ರಾಜಕೀಯದಲ್ಲಿ ಇದು ಸರ್ವೇ ಸಾಮಾನ್ಯ ಎಂದರು.

ಸೀಟು ಹಂಚಿಕೆ ವಿಚಾರದಲ್ಲಿ ಜೆಡಿಎಸ್ ಅಸಮಾಧಾನ ವಿಚಾರ ಕುರಿತು ಪ್ರತಿಕ್ರಿಯಿಸಿದ ಡಿ.ಕೆ ಶಿವಕುಮಾರ್, ನಮಗೆ ಮೊದಲಿಂದಲೂ ಗೊತ್ತಿರುವ ವಿಚಾರ. ಬಿಜೆಪಿ ಸ್ಟೈಲೇ ಅದು. ಎಲ್ಲಾ ರಾಜ್ಯದಲ್ಲೂ ಹೀಗೆ ಮಾಡ್ತಾರೆ. ಅವರ ಆಂತರಿಕ ವಿಚಾರದ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ ಎಂದು ತಿಳಿಸಿದರು.
