ಪೌರತ್ವ ತಿದ್ದುಪಡಿ ಕಾಯ್ದೆ (CAA) ಅನುಷ್ಠಾನಕ್ಕೆ ತಡೆ ನೀಡಲು ಸುಪ್ರೀಂ ಕೋರ್ಟ್(Supreme court) ನಿರಾಕರಿಸಿದೆ. ಅಲ್ಲದೇ, ಕಾಯ್ದೆಯನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಗಳಿಗೆ ಪ್ರತಿಕ್ರಿಯೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ (central government) ಸುಪ್ರೀಂ 3 ವಾರಗಳ ಕಾಲಾವಕಾಶ ನೀಡಿದೆ. ಸಿಎಎ(CAA) ಸಂಬಂಧಿಸಿದಂತೆ ಕಳೆದ ವಾರ ಕೇಂದ್ರ ಸರ್ಕಾರ ರಾಷ್ಟ್ರವ್ಯಾಪಿ ಜಾರಿಗೆ ತರಬೇಕು ಎಂದು ಅಧಿಸೂಚನೆ ಹೊರಡಿಸಿದೆ. ಕಾಯ್ದೆಯನ್ನು ಪ್ರಶ್ನಿಸಿ ಸುಪ್ರೀಂಗೆ 237 ಅರ್ಜಿಗಳು ಸಲ್ಲಿಕೆಯಾಗಿತ್ತು.

ಕೇಂದ್ರ ಸರ್ಕಾರ CAA ಜಾರಿಗೊಳಿಸದ ಹಾಗೆ ಸುಪ್ರೀಂ ಕೋರ್ಟ್ (Supreme Court) ತಡೆಯಾಜ್ಞೆ ನೀಡಬೇಕು ಎಂದು ಕೋರಿ ಕೋರ್ಟ್ ಗೆ ಅರ್ಜಿಗಳು ಸಲ್ಲಿಕೆಯಾಗಿದ್ದವು. ಆದ್ರೆ ಸುಪ್ರೀಂ ಕೋರ್ಟ್ ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿಲ್ಲ. ಕೇಂದ್ರ ಸರ್ಕಾರದ ಕಾಯ್ದೆಗೆ (CAA act) ಸುಪ್ರೀಂ ಕೋರ್ಟ್ ತಡೆ ನೀಡುವುದಿಲ್ಲ ಎಂದು ಹೇಳಿದ್ದು ಗಮನಾರ್ಹವಾಗಿದೆ.

ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ (D.Y.Chandrachood) ನೇತೃತ್ವದ ಪೀಠವು, 2024 ರ CAA ನಿಯಮಗಳಿಗೆ ತಡೆಯಾಜ್ಞೆ ಕೋರಿ ಸಲ್ಲಿಸಿರುವ ಅರ್ಜಿಗಳಿಗೆ ಪ್ರತಿಕ್ರಿಸಲು ಕೇಂದ್ರ ಸರ್ಕಾರಕ್ಕೆ ಸೂಚನೆ ಕೊಟ್ಟಿದೆ. ಒಟ್ಟು 237 ಅರ್ಜಿಗಳು ಬಂದಿರೋದರಿಂದ ಇಲ್ಲಿ ಕೇಳಲಾಗಿರುವ ಪ್ರಶ್ನೆಗಳು , ಗೊಂದಲಗಳು ಮತ್ತು ಆತಂಕಗಳ ಬಗ್ಗೆ ಕೇಂದ್ರ ಸರ್ಕಾರ ಪ್ರತಿಕ್ರಿಯಬೇಕು ಎಂದು ಸೂಚಿಸಿದೆ. ಆ ಮೂಲಕ CAA ನಿಯಮಗಳ ಜಾರಿ ಇನ್ನಷ್ಟು ಸುಮಗವಾಗಲಿದೆ.






