• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಸಿನಿಮಾ

ಕರ್ನಾಟಕದಲ್ಲಿ ಹೊಂಬಾಳೆ ಫಿಲಂಸ್ ಮೂಲಕ ಬಿಡುಗಡೆಯಾಗುತ್ತಿದೆ ಪೃಥ್ವಿರಾಜ್ ಸುಕುಮಾರನ್ ಅಭಿನಯದ ಬಹು ನಿರೀಕ್ಷಿತ “ಆಡುಜೀವಿತಂ”(ಗೋಟ್ ಲೈಫ್)ಚಿತ್ರ .

ಪ್ರತಿಧ್ವನಿ by ಪ್ರತಿಧ್ವನಿ
March 25, 2024
in ಸಿನಿಮಾ
0
ಕರ್ನಾಟಕದಲ್ಲಿ ಹೊಂಬಾಳೆ ಫಿಲಂಸ್ ಮೂಲಕ ಬಿಡುಗಡೆಯಾಗುತ್ತಿದೆ ಪೃಥ್ವಿರಾಜ್ ಸುಕುಮಾರನ್ ಅಭಿನಯದ ಬಹು ನಿರೀಕ್ಷಿತ “ಆಡುಜೀವಿತಂ”(ಗೋಟ್ ಲೈಫ್)ಚಿತ್ರ .
Share on WhatsAppShare on FacebookShare on Telegram

ADVERTISEMENT

ರಾಷ್ಟ್ರಪ್ರಶಸ್ತಿ ವಿಜೇತ ನಿರ್ದೇಶಕ ಬ್ಲೆಸ್ಸಿ ಅವರ ನಿರ್ದೇಶನದಲ್ಲಿ ಪೃಥ್ವಿರಾಜ್ ಸುಕುಮಾರನ್ ನಾಯಕರಾಗಿ ನಟಿಸಿರುವ ಬಹು ನಿರೀಕ್ಷಿತ “ಆಡುಜೀವಿತಂ”(ಗೋಟ್ ಲೈಫ್) ಚಿತ್ರ ಇದೇ ಮಾರ್ಚ್ 28 ರಂದು ತೆರೆಗೆ ಬರಲಿದೆ. ಹೆಸರಾಂತ ಹೊಂಬಾಳೆ ಫಿಲಂಸ್ ಕರ್ನಾಟಕದ ವಿತರಣೆಯ ಹಕ್ಕನ್ನು ಪಡೆದುಕೊಂಡಿದೆ. ಕರ್ನಾಟಕದಾದ್ಯಂತ ಹೊಂಬಾಳೆ ಫಿಲಂಸ್ ಸಂಸ್ಥೆಯ ವಿಜಯ್ ಕಿರಗಂದೂರ್ ಅವರು ಈ ಚಿತ್ರವನ್ನು ಅರ್ಪಿಸಿ,ಬಿಡುಗಡೆ ಮಾಡುತ್ತಿದ್ದಾರೆ.

ಹೊಂಬಾಳೆ ಫಿಲಂಸ್ ನ ವಿಜಯ್ ಕಿರಗಂದೂರ್ ಅವರು ಹಾಗೂ ನಟ ಪೃಥ್ವಿರಾಜ್ ಸುಕುಮಾರನ್ ಅವರು ಆತ್ಮೀಯ ಸ್ನೇಹಿತರು. ಹೊಂಬಾಳೆ ಫಿಲಂಸ್ ನ “ಕೆ.ಜಿ.ಎಫ್”, “ಕಾಂತಾರ ” ದಂತಹ ಜನಪ್ರಿಯ ಚಿತ್ರಗಳನ್ನು ಕೇರಳದಲ್ಲಿ ಪೃಥ್ವಿರಾಜ್ ಸುಕುಮಾರನ್ ಅವರು ಬಿಡುಗಡೆ ಮಾಡಿದ್ದರು. ಈಗ ಪೃಥ್ವಿರಾಜ್ ಅವರ ನಟನೆಯ, ವಿಭಿನ್ನ ಕಥಾಹಂದರ ಹೊಂದಿರುವ “ಆಡುಜೀವಿತಂ” ಚಿತ್ರವನ್ನು ಹೊಂಬಾಳೆ ಫಿಲಂಸ್ ಸಂಸ್ಥೆ ಕರ್ನಾಟಕದಾದ್ಯಂತ ಅದ್ದೂರಿಯಾಗಿ ಬಿಡುಗಡೆ ಮಾಡುತ್ತಿದೆ. ಈ ಚಿತ್ರದ ಕುರಿತು ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ಆಯೋಜಿಸಲಾಗಿತ್ತು.

ನನಗೆ ವಿಜಯ್ ಕಿರಗಂದೂರ್ ಅವರು ಆತ್ಮೀಯ ಸ್ನೇಹಿತರು ಎಂದು ಮಾತು ಆರಂಭಿಸಿದ ನಟ ಪೃಥ್ವಿರಾಜ್, ನಮ್ಮ “ಆಡುಜೀವಿತಂ” ಚಿತ್ರವನ್ನು ಕರ್ನಾಟಕದಾದ್ಯಂತ ಹೊಂಬಾಳೆ ಫಿಲಂಸ್ ಸಂಸ್ಥೆ ಬಿಡುಗಡೆ ಮಾಡುತ್ತಿದೆ, “ಕೆಜಿಎಫ್”, “ಕಾಂತಾರ” ದಂತಹ ಯಶಸ್ವಿ ಚಿತ್ರಗಳನ್ನು ನಿರ್ಮಾಣ ಮಾಡಿರುವ ಹೊಂಬಾಳೆ ಫಿಲಂಸ್ ಮೂಲಕ ನಮ್ಮ ಚಿತ್ರ ಬಿಡುಗಡೆಯಾಗುತ್ತಿರುವುದು ತುಂಬಾ ಸಂತೋಷವಾಗಿದೆ. ಇನ್ನು ಬ್ಲೆಸ್ಸಿ ಅವರು “ಗೋಟ್ ಲೈಫ್” ಚಿತ್ರ ಮಾಡಬೇಕೆಂದುಕೊಂಡಿದ್ದು 2008 ರಲ್ಲಿ. ಚಿತ್ರೀಕರಣ ಆರಂಭವಾಗಿದ್ದು 2018 ರಲ್ಲಿ. ಈ ಚಿತ್ರಕ್ಕಾಗಿ ಹದಿನಾರು ವರ್ಷಗಳ ಪರಿಶ್ರಮವಿದೆ. ನಾನು ಈ ಚಿತ್ರಕ್ಕಾಗಿ 31 ಕೆಜಿ ತೂಕ ಕಡಿಮೆ ಮಾಡಿಕೊಂಡಿದ್ದೇನೆ. ಇದು ಬೆನ್ಯಾಮಿನ್ ಅವರು ಬರೆದಿರುವ “ಆಡುಜೀವಿತಂ” ಕಾದಂಬರಿ ಆಧಾರಿತ ಚಿತ್ರ. ಈ ಜನಪ್ರಿಯ ಕಾದಂಬರಿ ಈವರೆಗೂ 251 ಬಾರಿ ಮುದ್ರಣವಾಗಿದೆ. ನಜೀಬ್ ಎಂಬುವವರ ಜೀವನದ ನೈಜ ಕಥೆ ಆಧರಿಸಿದೆ. ಅಮಲಾ ಪೌಲ್, ಹಾಲಿವುಡ್ ನಟ ಜಿಮ್ಮಿ ಜೀನ್ ಲೂಯಿಸ್ ಮುಂತಾದವರು ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ. ಹೆಸರಾಂತ ಸಂಗೀತ ನಿರ್ದೇಶಕ ಎ.ಆರ್ ರೆಹಮಾನ್ ಸಂಗೀತ ನೀಡಿದ್ದಾರೆ ಎಂದರು.

ಚಿತ್ರ ಮಾರ್ಚ್ 28 ರಂದು ಮಲಯಾಳಂ, ಕನ್ನಡ ಸೇರಿದಂತೆ ಐದು ಭಾಷೆಗಳಲ್ಲಿ ಏಕಕಾಲಕ್ಕೆ ಬಿಡುಗಡೆಯಾಗುತ್ತಿದೆ. ಚಿತ್ರವನ್ನು ಎಲ್ಲರೂ ನೋಡಿ ಎಂದರು ನಿರ್ದೇಶಕ ಬ್ಲೆಸ್ಸಿ.

ಹಾಲಿವುಡ್ ನಟ ಜಿಮ್ಮಿ ಜೀನ್ ಲೂಯಿಸ್ ಸಹ ಈ ಚಿತ್ರದಲ್ಲಿ ನಟಿಸಿರುವುದಕ್ಕೆ ಸಂತಸ ವ್ಯಕ್ತಪಡಿಸಿದರು.

Tags: @kANNADAMOVIES
Previous Post

ಸುಮಲತಾರನ್ನ ಪಕ್ಷೇತರ ನಿಲ್ಲುವಂತೆ ಯಾರು ಕೇಳಿಲ್ಲ.. ಕುಮಾರಸ್ವಾಮಿ ಹೋದ ಉರನ್ನೆಲ್ಲಾ ಕರ್ಮಭೂಮಿ ಅಂತಾರೆ : ಸಚಿವ ಚೆಲುವರಾಯಸ್ವಾಮಿ

Next Post

ಹೊಸಪೇಟೆಯಲ್ಲಿ ಅದ್ದೂರಿಯಾಗಿ ನೆರವೇರಿತು ಹೊಂಬಾಳೆ ಫಿಲಂಸ್ ನಿರ್ಮಾಣದ “ಯುವ” ಚಿತ್ರದ ಪ್ರೀ ರಿಲೀಸ್ ಇವೆಂಟ್

Related Posts

ಸ್ಟಾರ್ ನಟಿ ಸೌಂದರ್ಯ ನೆನಪು: ವದಂತಿಗಳಿಗೆ ತೆರೆ ಎಳೆದ ಜಗಪತಿ ಬಾಬು – ಭಾವುಕ ಮಾತುಗಳು ವೈರಲ್
ಸಿನಿಮಾ

ಸ್ಟಾರ್ ನಟಿ ಸೌಂದರ್ಯ ನೆನಪು: ವದಂತಿಗಳಿಗೆ ತೆರೆ ಎಳೆದ ಜಗಪತಿ ಬಾಬು – ಭಾವುಕ ಮಾತುಗಳು ವೈರಲ್

by ಪ್ರತಿಧ್ವನಿ
April 26, 2026
0

ಚಿತ್ರರಂಗದಲ್ಲಿ ಅತಿ ಕಡಿಮೆ ಅವಧಿಯಲ್ಲಿ ಅಪಾರ ಖ್ಯಾತಿ ಗಳಿಸಿದ ನಟಿಯರಲ್ಲಿ ಸೌಂದರ್ಯ ಪ್ರಮುಖರು. ತಮ್ಮ ಸಹಜ ಸೌಂದರ್ಯ, ಮೃದು ಅಭಿನಯ ಮತ್ತು ಪಾತ್ರಗಳಿಗೆ ಜೀವ ತುಂಬುವ ಸಾಮರ್ಥ್ಯದಿಂದ...

Read moreDetails
ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

ಸರ್ಜಾ–ದರ್ಶನ್ ಕುಟುಂಬಗಳ ನಡುವೆ ಬಿರುಕು? ಧ್ರುವ ಸರ್ಜಾ ಸ್ಪಷ್ಟನೆಗೆ ತೆರೆಬಿದ್ದ ವದಂತಿಗಳು

April 25, 2026
ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

ಡಾ. ರಾಜ್‌ಕುಮಾರ್ ಜಯಂತಿ ಸಂಭ್ರಮದ ನಡುವೆ ಚೇತನ್ ಅಹಿಂಸ ಹೇಳಿಕೆಗೆ ವಿವಾದ

April 24, 2026
ಗುಡ್‌ ನ್ಯೂಸ್‌ ಕೊಟ್ಟ ದೀಪಿಕಾ ಪಡುಕೋಣೆ : ಬಾಲಿವುಡ್‌ ಬೆಡಗಿಯ ಸಿಹಿ ಸುದ್ದಿ ಏನು..?

ಗುಡ್‌ ನ್ಯೂಸ್‌ ಕೊಟ್ಟ ದೀಪಿಕಾ ಪಡುಕೋಣೆ : ಬಾಲಿವುಡ್‌ ಬೆಡಗಿಯ ಸಿಹಿ ಸುದ್ದಿ ಏನು..?

April 19, 2026
ರಾಮಾಯಣ ಹೇಳಿಕೆಗೆ ನಟ ಪ್ರಕಾಶ್ ರಾಜ್ ವಿರುದ್ಧ ಆಕ್ರೋಶ: ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ

ರಾಮಾಯಣ ಹೇಳಿಕೆಗೆ ನಟ ಪ್ರಕಾಶ್ ರಾಜ್ ವಿರುದ್ಧ ಆಕ್ರೋಶ: ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ

April 16, 2026
Next Post
ಹೊಸಪೇಟೆಯಲ್ಲಿ ಅದ್ದೂರಿಯಾಗಿ ನೆರವೇರಿತು ಹೊಂಬಾಳೆ ಫಿಲಂಸ್ ನಿರ್ಮಾಣದ “ಯುವ” ಚಿತ್ರದ ಪ್ರೀ ರಿಲೀಸ್ ಇವೆಂಟ್

ಹೊಸಪೇಟೆಯಲ್ಲಿ ಅದ್ದೂರಿಯಾಗಿ ನೆರವೇರಿತು ಹೊಂಬಾಳೆ ಫಿಲಂಸ್ ನಿರ್ಮಾಣದ "ಯುವ" ಚಿತ್ರದ ಪ್ರೀ ರಿಲೀಸ್ ಇವೆಂಟ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada