• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಟೋ ರ್ಯಾಲಿ: ಕಾಂಗ್ರೆಸ್ ಋಣ ನಮ್ಮ ಮೇಲಿದೆ

ಪ್ರತಿಧ್ವನಿ by ಪ್ರತಿಧ್ವನಿ
March 27, 2024
in ಕರ್ನಾಟಕ, ದೇಶ, ರಾಜಕೀಯ
0
ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಟೋ ರ್ಯಾಲಿ:  ಕಾಂಗ್ರೆಸ್ ಋಣ ನಮ್ಮ ಮೇಲಿದೆ
Share on WhatsAppShare on FacebookShare on Telegram

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಟೋ ರ್ಯಾಲಿ: ಆಟೋ ಚಾಲಕರಿಂದ ಅಭೂತಪೂರ್ವ ಬೆಂಬಲ
ಗ್ಯಾರಂಟಿ ಯೋಜನೆಗಳಿಂದ ಕಾಂಗ್ರೆಸ್ ಋಣ ನಮ್ಮ ಮೇಲಿದೆ; ಸ್ಥಳೀಯ ಅಭ್ಯರ್ಥಿಗೇ ನಮ್ಮ ಮತ ಎಂದ ಆಟೋ ಚಾಲಕರುಬೆಳಗಾವಿ : ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಬುಧವಾರ ಬೆಳಗಾವಿಯಲ್ಲಿ ಆಟೋ ರ್ಯಾಲಿ ನಡೆಸಿ, ಕಾಂಗ್ರೆಸ್ ಅಭ್ಯರ್ಥಿ, ಪುತ್ರ ಮೃಣಾಲ ಹೆಬ್ಬಾಳಕರ್ ಪರವಾಗಿ ಆಟೋ ಚಾಲಕರ ಮತ ಯಾಚಿಸಿದರು.ಈ ವೇಳೆ ಆಟೋ ಚಾಲಕರಿಂದ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದ್ದು, ನಾವ್ಯಾರೂ ಹುಬ್ಬಳ್ಳಿಗೆ ಹೋಗಾಂಗಿಲ್ರಿ, ನಾವೇನಿದ್ರೂ ಬೆಳಗಾವಿಯಲ್ಲೇ ಇರ್ತೀವಿ, ಕುವೆಂಪು ನಗರಕ್ಕೇ ಬರ್ತೀವಿ ಎಂದು ಮಾರ್ಮಿಕವಾಗಿ ಹೇಳುವ ಮೂಲಕ ಕಾಂಗ್ರೆಸ್ ಅಭ್ಯರ್ಥಿಗೆ ಮತ ನೀಡುವ ಭರವಸೆ ನೀಡಿದರು.

ADVERTISEMENT

ಟಿಳಕ ಚೌಕ, ರಾಮದೇವ್ ಹೊಟೆಲ್, ಚನ್ನಮ್ಮ ಸರ್ಕಲ್, ಬೋಗಾರ್ ವೇಸ್, ಚಿತ್ರಾ ಟಾಕೀಸ್, ಗಣೇಶಪುರ ಮೊದಲಾದ ಪ್ರದೇಶಗಳಲ್ಲಿರುವ ಆಟೋ ಸ್ಟ್ಯಾಂಡ್ ಗೆ ಆಟೋದಲ್ಲೇ ತೆರಳಿದ ಲಕ್ಷ್ಮೀ ಹೆಬ್ಬಾಳಕರ್ ಅವರಿಗೆ ಆಟೋ ಚಾಲಕರಿಂದ ಭಾರೀ ಸ್ವಾಗತ, ಬೆಂಬಲ ವ್ಯಕ್ತವಾಯಿತು. ಎಲ್ಲೆಡೆ ಹೂಗುಚ್ಛಗಳನ್ನು ನೀಡಿ ಸಚಿವರನ್ನು ಸ್ವಾಗತಿಸಿದರು.ಮೃಣಾಲ ಹೆಬ್ಬಾಳಕರ್ ಸ್ಥಳೀಯ ಯುವಕನಿದ್ದು, ಕೆಲಸ ಮಾಡುವ ಉತ್ಸಾಹ ಹೊಂದಿದ್ದಾನೆ. ಬೆಳಗಾವಿಯವನಾಗಿದ್ದು, ಬೆಳಗಾವಿಯಲ್ಲೇ ಇದ್ದು ಕೆಲಸ ಮಾಡಲಿದ್ದಾನೆ. ಆಯ್ಕೆಯಾದ ನಂತರವೂ ನಿಮ್ಮ ಕೈಗೆ ಸಿಗಲಿದ್ದಾನೆ.

ಕಾಂಗ್ರೆಸ್ ಪಕ್ಷಕ್ಕೆ ಮತ ನೀಡುವ ಮೂಲಕ ಬೆಳಗಾವಿಯ ಸ್ವಾಭಿಮಾನ ಎತ್ತಿ ಹಿಡಿಯೋಣ. ಒಟ್ಟಾಗಿ ಬೆಳಗಾವಿ ಅಭಿವೃದ್ಧಿ ಮಾಡೋಣ ಎಂದು ಹೆಬ್ಬಾಳಕರ್ ಮನವಿ .ಸಚಿವರ ಮನವಿಗೆ ಸ್ಪಂದಿಸಿದ ಆಟೋ ಚಾಲಕರು, ನೀವೇನೂ ಚಿಂತೆ ಮಾಡಬೇಡಿ ಮೇಡಮ್, ನಾವೆಲ್ಲ ಮೊದಲಿನಿಂದಲೂ ಕಾಂಗ್ರೆಸ್ ಬೆಂಬಲಿಸುತ್ತ ಬಂದಿದ್ದೇವೆ. ಹಿಂದೆ ಬಿಜೆಪಿ ಬೆಂಬಲಿಸಿದವರು ಸಹ ಈ ಬಾರಿ ಹೊರಗಿನ ಅಭ್ಯರ್ಥಿ ಹಾಕಿರುವುದನ್ನು ವಿರೋಧಿಸಿ ಸ್ಥಳೀಯ ಅಭ್ಯರ್ಥಿಗೇ ಬೆಂಬಲ ನೀಡಲಿದ್ದಾರೆ. ಖಂಡಿತ ನಿಮ್ಮ ಪುತ್ರ ಮೃಣಾಲ ಹೆಬ್ಬಾಳಕರ್ ಹೆಚ್ಚಿನ ಬಹುಮತದಿಂದ ಆಯ್ಕೆಯಾಗಲಿದ್ದಾರೆ ಎಂದು ಅಭಯ ನೀಡಿದರು.

ಸಚಿವರೊಬ್ಬರು ಆಟೋ ನಿಲ್ದಾಣಗಳಿಗೆ, ಆಟೋದಲ್ಲೇ ಬಂದಿರುವುದನ್ನು ನೋಡಿ ಆಟೋ ಚಾಲಕರು ಪುಳಕಿತರಾದರು. ಕಾಂಗ್ರೆಸ್ ಸರಕಾರ ತಂದಿರುವ ಗ್ಯಾರಂಟಿ ಯೋಜನೆಗಳು ತಮ್ಮ ಕುಟುಂಬಗಳಿಗೆ ಯಾವ ರೀತಿಯಲ್ಲಿ ನೆರವಾಗುತ್ತಿವೆ ಎನ್ನುವುದನ್ನು ಚಾಲಕರು ಸಚಿವರಿಗೆ ತಿಳಿಸಿ, ರಾಜ್ಯ ಕಾಂಗ್ರೆಸ್ ಸರಕಾರಕ್ಕೆ ಧನ್ಯವಾದ ಸಲ್ಲಿಸಿದರು. ಕಾಂಗ್ರೆಸ್ ಸರಕಾರದ ಋಣ ನಮ್ಮ ಮೇಲಿದೆ. ಬಡವರು ನೆಮ್ಮದಿಯ ಜೀವನ ನಡೆಸಲು ಸಾಧ್ಯವಾಗಿದೆ. ಖಂಡಿತ ನಾವು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುತ್ತೇವೆ. ಹಿಂದೆ ಯಾವುದೇ ಸರಕಾರದಿಂದ ನಮ್ಮ ಮನೆ ಬಾಗಿಲಿಗೆ ಈ ರೀತಿಯ ನೆರವು ಬಂದಿರಲಿಲ್ಲ ಎಂದು ಆಟೋ ಚಾಲಕರು ಹೇಳಿದರು.ಆಟೋ ಚಾಲಕರ ಸಂಘದ ಪ್ರಮುಖರು, ಕಾಂಗ್ರೆಸ್ ಜಿಲ್ಲಾಧ್ಯಕ್ಷ ವಿನಯ ನಾವಲಗಟ್ಟಿ ಸೇರಿದಂತೆ ಅನೇಕ ಪ್ರಮುಖರು ಸಾಥ್ ನೀಡಿದರು.

Tags: 2024 electionsautorallyBJPCongress PartylakshmihebbalkarLoksabha electionಬಿಜೆಪಿ
Previous Post

ಕೊನೆಗೂ ಚಿತ್ರದುರ್ಗ ಟಿಕೆಟ್ ಫೈನಲ್ ಮಾಡಿದ ಬಿಜೆಪಿ ! ಗೋವಿಂದ ಕಾರಜೋಳ ಹೆಸರು ಅಂತಿಮ !

Next Post

ಯುವ ನ್ಯಾಯ ಸಮಾವೇಶದಲ್ಲಿ ಡಿಕೆಶಿ ಗೆಲುವಿನ ಸೂತ್ರ ಬಿಚ್ಚಿಟ್ಟ ಡಿಕೆಶಿ

Related Posts

ವಂಡರ್‌ಲಾದಲ್ಲಿ ಥ್ರಿಲ್ ರೈಡ್ ಅಡಚಣೆ: ಮಧ್ಯದಲ್ಲೇ ನಿಂತ ರೋಲರ್ ಕೋಸ್ಟರ್, ಕಂಗಾಲಾದ ಪ್ರಯಾಣಿಕರು
ಕರ್ನಾಟಕ

ವಂಡರ್‌ಲಾದಲ್ಲಿ ಥ್ರಿಲ್ ರೈಡ್ ಅಡಚಣೆ: ಮಧ್ಯದಲ್ಲೇ ನಿಂತ ರೋಲರ್ ಕೋಸ್ಟರ್, ಕಂಗಾಲಾದ ಪ್ರಯಾಣಿಕರು

by ಪ್ರತಿಧ್ವನಿ
April 16, 2026
0

ಬೆಂಗಳೂರು ಹೊರವಲಯದ ಜನಪ್ರಿಯ ಅಮ್ಯೂಸ್ಮೆಂಟ್ ಪಾರ್ಕ್ ವಂಡರ್‌ಲಾ ನಲ್ಲಿ ರೋಮಾಂಚಕಾರಿ ರೈಡ್ ಮಧ್ಯದಲ್ಲೇ ನಿಂತು ಪ್ರಯಾಣಿಕರು ಕೆಲಕಾಲ ಆತಂಕಕ್ಕೀಡಾದ ಘಟನೆ ಬೆಳಕಿಗೆ ಬಂದಿದೆ. ತಾಂತ್ರಿಕ ದೋಷ ಅಥವಾ...

Read moreDetails
ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..

ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..

April 16, 2026
ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

April 16, 2026
ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

April 16, 2026
ಚೀನಾದ ಕ್ಸಿ ಜಿನ್‌ಪಿಂಗ್‌ಗೆ ಹಗ್‌ ಮಾಡಲು ಎದುರು ನೋಡುತ್ತಿದ್ದೇನೆ : ಇರಾನ್‌ ಎದುರು ಸೋತ ಟ್ರಂಪ್‌ ಹೊಸ ವರಸೆ..

ಚೀನಾದ ಕ್ಸಿ ಜಿನ್‌ಪಿಂಗ್‌ಗೆ ಹಗ್‌ ಮಾಡಲು ಎದುರು ನೋಡುತ್ತಿದ್ದೇನೆ : ಇರಾನ್‌ ಎದುರು ಸೋತ ಟ್ರಂಪ್‌ ಹೊಸ ವರಸೆ..

April 16, 2026
Next Post
ಯುವ ನ್ಯಾಯ ಸಮಾವೇಶದಲ್ಲಿ ಡಿಕೆಶಿ ಗೆಲುವಿನ ಸೂತ್ರ ಬಿಚ್ಚಿಟ್ಟ ಡಿಕೆಶಿ

ಯುವ ನ್ಯಾಯ ಸಮಾವೇಶದಲ್ಲಿ ಡಿಕೆಶಿ ಗೆಲುವಿನ ಸೂತ್ರ ಬಿಚ್ಚಿಟ್ಟ ಡಿಕೆಶಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada