ಲೋಕಸಭಾ ಚುನಾವಣೆಯ ಹೊಸ್ತಿಲಿನಲ್ಲಿ ಮತಯಾಚನೆ ಮಾಡುವ ಸಂದರ್ಭದಲ್ಲಿ ಆಕಸ್ಮಿಕವಾಗಿ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯರೆಡ್ಡಿ ಬಿಜೆಪಿ ನಾಯಕಿ ಡಾ.ತೇಜಸ್ವಿನಿ ಅನಂತ್ಕುಮಾರ್ ಅವರನ್ನು ಭೇಟಿಯಾಗಿದ್ದಾರೆ.

ಲಾಲ್ಬಾಗ್ನಲ್ಲಿ ವಾಯುವಿಹಾರ ಮಾಡುತ್ತಿದ್ದಾಗ ಮುಖಾಮುಖಿಯಾದ ಅಭ್ಯರ್ಥಿ ಸೌಮ್ಯರೆಡ್ಡಿ ಹಾಗೂ ಡಾ. ತೇಜಸ್ವಿನಿ ಅನಂತ್ಕುಮಾರ್ರ ಉಭಯಕುಶಲೋಪರಿ ವಿಚಾರಿಸಿದ್ದಾರೆ. ಬಳಿಕ ಡಾ. ತೇಜಸ್ವಿನಿ ಅನಂತ್ಕುಮಾರ್ ಅವರ ಕಾಲಿಗೆ ಬಿದ್ದು ನಮಸ್ಕಾರ ಮಾಡಿ ಆಶೀರ್ವಾದ ಪಡೆದಿದ್ದಾರೆ. ಇನ್ನು ಈ ಬಾರಿಯ ಚುನಾವಣೆಯಲ್ಲಿ ಗೆಲುವು ಸಾಧಿಸಲು ಸಹಾಯ ಮಾಡುವಂತೆ ಬೆಂಬಲ ಕೇಳಿದ್ದು, ನಿಮಗೆ ಒಳ್ಳೆಯದಾಗಲಿ ಎಂದು ತೇಜಸ್ವಿನಿ ಅನಂತ್ಕುಮಾರ್ ಹಾರೈಸಿದ್ದಾರೆ.
