• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮೇಕೆದಾಟು ವಿಚಾರದಲ್ಲಿ ಸಿಡಿದೆದ್ದ ಹೆಚ್.ಡಿ.ಕೆ ! ಡಿಕೆಗೆ ಸಾಲು ಸಾಲು ಪ್ರಶ್ನೆಗಳನ್ನ ಮುಂದಿಟ್ಟ ಕುಮಾರಸ್ವಾಮಿ !

ಪ್ರತಿಧ್ವನಿ by ಪ್ರತಿಧ್ವನಿ
April 7, 2024
in Top Story, ಇದೀಗ, ಕರ್ನಾಟಕ, ರಾಜಕೀಯ
0
ಮೇಕೆದಾಟು ವಿಚಾರದಲ್ಲಿ ಸಿಡಿದೆದ್ದ ಹೆಚ್.ಡಿ.ಕೆ ! ಡಿಕೆಗೆ ಸಾಲು ಸಾಲು ಪ್ರಶ್ನೆಗಳನ್ನ ಮುಂದಿಟ್ಟ ಕುಮಾರಸ್ವಾಮಿ !
Share on WhatsAppShare on FacebookShare on Telegram

ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಸಾಲು ಸಾಲು ಟ್ವೀಟ್ ಮಾಡಿ ಡಿಕೆ ಶಿವಕುಮಾರ್ ಮತ್ತು ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ. ಆ ಮೂಲಕ ಡಿಕೆ ಮುಂದೆ ಮೇಕೆದಾಟು ಯೋಜನೆ ಬಗ್ಗೆ ಸಾಲು ಸಾಲು ಪ್ರಶ್ನೆಗಳನ್ನು ಹೆಚ್.ಡಿ.ಕೆ ಇಟ್ಟಿದ್ದಾರೆ.

ADVERTISEMENT

ಈ ಬಗ್ಗೆ ಟ್ವೀಟ್ ಮಾಡಿರುವ ಹೆಚ್.ಡಿ.ಕೆ , ಅಧಿಕಾರ ಇರುವುದು ನಿಮ್ಮ ಕೈಯ್ಯಲ್ಲಿ. ಜನ ಪೆನ್ನು-ಪೇಪರ್ ಕೊಟ್ಟಿರುವುದೂ ನಿಮಗೇ. ಕೆಲಸ ಮಾಡಿ ಎಂದರೆ ಹಳೆಯದನ್ನು ಕೆದಕುತ್ತಿದ್ದೀರಿ, ಯಾಕೆ? ಜನರು ಕೊಟ್ಟ ಪೆನ್ನು-ಪೇಪರ್ ಹಿಡಿದುಕೊಳ್ಳುವ ನಿಮ್ಮ ಶಕ್ತಿ ಕೇವಲ ಹತ್ತೇ ತಿಂಗಳಿಗೆ ನಿಸ್ತೇಜವಾಯಿತಾ @DKShivakumar ರವರೇ? ಕೈಲಾಗದೆ ಮೈ ಪರಚಿಕೊಳ್ಳುವುದು ಎಂದರೆ ಇದೆ ಅಲ್ಲವೇ? ಎಂದು ವ್ಯಂಗ್ಯವಾಡಿದ್ದಾರೆ.

ಇನ್ನು ಅಧಿಕಾರ ಇದ್ದಾಗಲೇ ಕುಮಾರಸ್ವಾಮಿ ಅವರು ಮೇಕೆದಾಟು ಮಾಡಲಿಲ್ಲ ಎಂದು ಹೇಳಿದ್ದೀರಿ! ಕುಮಾರಸ್ವಾಮಿ ಏನೂ ಮಾಡಿಯೇ ಇಲ್ಲವೆಂದು ಕಟ್ಟುಕಥೆ ಕಟ್ಟಿದ್ದೀರಿ. ಎಷ್ಟಾದರೂ ನೀವು ಸುಳ್ಳು ಫ್ಯಾಕ್ಟರಿಯ ಮೇಟಿ! ಮೇಕೆದಾಟುಗಾಗಿ ನಾನು ಏನೆಲ್ಲಾ ಮಾಡಿದೆ ಎನ್ನುವುದು ನಿಮಗೇಗೆ ಗೊತ್ತಾದೀತು? ಸತ್ಯಕ್ಕೂ ನಿಮಗೂ ಎಣ್ಣೆಶೀಗೇಕಾಯಿ ಸಂಬಂಧ! ಹೌದಲ್ಲವೇ? ಅಂಥ ಹೆಚ್.ಡಿ.ಕೆ ಚಾಟಿ ಬೀಸಿದ್ದಾರೆ.

ಮೇಕೆದಾಟು ನಿರ್ಮಾಣಕ್ಕೆ 2018-19ರಲ್ಲೇ ಸಮಗ್ರ ಯೋಜನಾ ವರದಿ (DPR) ಯನ್ನು ಕೇಂದ್ರಕ್ಕೆ ಸಲ್ಲಿಸಿದ್ದು ಅಂದಿನ ನನ್ನ ಸರಕಾರ. ಆ ಸರಕಾರದಲ್ಲಿ ನೀವು ಸಚಿವರಿದ್ದಿರಿ. ಈ ಮಾಹಿತಿಯೇ ನಿಮಗಿಲ್ಲವೆಂದರೆ ಹೇಗೆ? ಇದೆಂಥಾ ಹತವಿಧಿ!? ಹಾಗಾದರೆ, ಜನರು ಕೊಟ್ಟ ಪೆನ್ನು-ಪೇಪರ್ ಗತಿ ಏನು? 2006-2007ರಲ್ಲೇ ಮಹಾದಾಯಿ  ಯೋಜನೆಗೆ ಸಂಪುಟದಲ್ಲಿಯೇ ಒಪ್ಪಿಗೆ ನೀಡಿ, ₹100 ಕೋಟಿ ಮಂಜೂರು ಮಾಡಿ ಆಗಲೇ ಶಂಕುಸ್ಥಾಪನೆಯನ್ನೂ ನೆರವೇರಿಸಲಾಯಿತು. ಆಮೇಲೆ 5 ವರ್ಷ ನಿಮ್ಮದೇ @INCKarnataka ಸರಕಾರ ಇತ್ತಲ್ಲಾ..? ಏನ್ ಮಾಡ್ತಾ ಇದ್ದಿರಿ ಶಿವಕುಮಾರ್ ಅವರೇ? ಆಗ ಯಾಕೆ ತಾವು ನುಡಿದಂತೆ ನಡೆಯಲಿಲ್ಲ? ಎಂದು ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದಾರೆ.

ಮೇಕೆದಾಟು, ಮಹದಾಯಿ ಸೇರಿ ರಾಜ್ಯದ ನೀರಾವರಿ ಯೋಜನೆಗಳಿಗಾಗಿ ನಾನು ಮುಖ್ಯಮಂತ್ರಿಯಾಗಿ ಆಯಾ ಇಲಾಖೆಯ ಕೇಂದ್ರ ಸಚಿವರನ್ನು ಎಷ್ಟು ಸಲ ಭೇಟಿಯಾಗಿದ್ದೆ ಎನ್ನುವ ಮಾಹಿತಿಯೂ ನಿಮಗಿಲ್ಲವಲ್ಲ? ನಿತಿನ್ ಗಡ್ಕರಿ ಅವರೊಬ್ಬರನ್ನೇ ನಾನು 10 ಸಲ ಭೇಟಿಯಾಗಿದ್ದೆ.  90ರ ಇಳಿವಯಸ್ಸಿನಲ್ಲಿಯೂ ಶ್ರೀ ದೇವೇಗೌಡರು ಸಂಸತ್ತಿನ ಒಳ-ಹೊರಗೆ ರಾಜ್ಯಕ್ಕಾಗಿ ಅವಿರತವಾಗಿ ಹೋರಾಡುತ್ತಿದ್ದಾರೆ. ಸಂಸತ್ ಅಧಿವೇಶನದಲ್ಲಿ ಅವರು ಮೇಕೆದಾಟು ಬಗ್ಗೆ ದನಿ ಎತ್ತಿದರೆ, ರಾಜ್ಯದವರೇ ಆದ ನಿಮ್ಮ ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ಮೌನವ್ರತ ಮಾಡುತ್ತಿದ್ದರು! ನಿಮ್ಮ ಪಕ್ಷದ ಉಳಿದ ಸದಸ್ಯರು ನಿಮ್ಮ ಅಧ್ಯಕ್ಷರು  ಮಾಡಿದ್ದನ್ನೇ ಚಾಚೂ ತಪ್ಪದೇ ಪಾಲಿಸುತ್ತಿದ್ದರು ಎಂದು ಖರ್ಗೆಯವಾಗಿರೂ ಚಾಟಿ ಬೀಸಿದ್ದಾರೆ.

ಕಾಂಗ್ರೆಸ್, ಡಿಎಂಕೆ ಅಣ್ತಮ್ಮ ಪಕ್ಷಗಳಲ್ಲವೇ? ಮೇಕೆದಾಟು ಮಾಡಲು ಕರ್ನಾಟಕದವರಿಗೆ ಬಿಡೋದೇ ಇಲ್ಲ ಎಂದು ಡಿಎಂಕೆ ಚುನಾವಣೆ ಪ್ರಣಾಳಿಕೆಯಲ್ಲೇ ಘೋಷಣೆ ಮಾಡಿದೆ. ಇದಕ್ಕೂ ನಿಮ್ಮದು, ನಿಮ್ಮ ಪಕ್ಷದ್ದು ‘ಮೌನಂ ಶರಣಂ ಗಚ್ಛಾಮಿ!!’ 

ನಿಮ್ಮ ಸರಕಾರದಲ್ಲಿ ಏನೇನ್ ನಡೀತಿದೆ ಶಿವಕುಮಾರ್ ಅವರೇ? ಪೆನ್ನು ಪೇಪರ್ ಕೂಡ ‘ಮೌನಂ ಶರಣಂ ಗಚ್ಛಾಮಿ’ ಎನ್ನುತ್ತಿವೆಯಾ.. ಹೇಗೆ? ಎಂದು ಹ್ಯಾಷ್ ಟ್ಯಾಗ್ ಮೇಕೆದಾಟು ಎಂದು ಹಾಕಿ ಟಾಂಗ್ ಕೊಟ್ಟಿದ್ದಾರೆ.

#ಮೇಕೆದಾಟು

Tags: BJPCongress Partyಎಚ್ ಡಿ ಕುಮಾರಸ್ವಾಮಿಕನಕಪುರಡಿಕೆ ಶಿವಕುಮಾರ್ನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಮಂಡ್ಯಮೇಕೆದಾಟುರಾಮನಗರ
Previous Post

ಸದ್ದಿಲ್ಲದೆ ಶುರುವಾಯ್ತಾ ಆಪರೇಷನ್? ಕೆ.ಪಿ.ನಂಜುಂಡಿ ನಿವಾಸಕ್ಕೆ ಡಿಕೆಶಿ ಧಿಡೀರ ಭೇಟಿ ! 

Next Post

ಕೋಟ್ಯಧಿಪತಿ ಮಹಿಳೆ ಕೊಂದು ಡ್ರಾಮಾ ಮಾಡಿದ್ನಾ ಡ್ರೈವರ್..?

Related Posts

ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..
Top Story

ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

by ಪ್ರತಿಧ್ವನಿ
April 16, 2026
0

ಬೆಂಗಳೂರು : ಇಂದಿನಿಂದ ಮೂರು ದಿನಗಳ ಕಾಲ ಸಂಸತ್ತಿನ ವಿಶೇಷ ನಡೆಯುತ್ತಿದ್ದು, ಪ್ರಮುಖ ಮಸೂದೆಗಳ ಅಂಗೀಕಾರಕ್ಕೆ ಕ್ಷಣಗಣನೆ ಆರಂಭವಾಗಿದೆ. ಕ್ಷೇತ್ರ ವಿಂಗಡಣೆ, ಜನಗಣತಿ ಹಾಗೂ ಮಹಿಳಾ ಮೀಸಲಾತಿ...

Read moreDetails
ಚೀನಾದ ಕ್ಸಿ ಜಿನ್‌ಪಿಂಗ್‌ಗೆ ಹಗ್‌ ಮಾಡಲು ಎದುರು ನೋಡುತ್ತಿದ್ದೇನೆ : ಇರಾನ್‌ ಎದುರು ಸೋತ ಟ್ರಂಪ್‌ ಹೊಸ ವರಸೆ..

ಚೀನಾದ ಕ್ಸಿ ಜಿನ್‌ಪಿಂಗ್‌ಗೆ ಹಗ್‌ ಮಾಡಲು ಎದುರು ನೋಡುತ್ತಿದ್ದೇನೆ : ಇರಾನ್‌ ಎದುರು ಸೋತ ಟ್ರಂಪ್‌ ಹೊಸ ವರಸೆ..

April 16, 2026
ಮದ್ಯ ತೆರಿಗೆ, ಶಿಕ್ಷಣ ಮತ್ತು ಸರ್ಕಾರದ ನೀತಿಗಳ ವಿರುದ್ಧ ಎಚ್. ವಿಶ್ವನಾಥ್ ವಾಗ್ದಾಳಿ- ಸಿಎಂ ಬಿಯರ್ ಗುಟ್ಟು-ರಟ್ಟು!

ಮದ್ಯ ತೆರಿಗೆ, ಶಿಕ್ಷಣ ಮತ್ತು ಸರ್ಕಾರದ ನೀತಿಗಳ ವಿರುದ್ಧ ಎಚ್. ವಿಶ್ವನಾಥ್ ವಾಗ್ದಾಳಿ- ಸಿಎಂ ಬಿಯರ್ ಗುಟ್ಟು-ರಟ್ಟು!

April 16, 2026
ಎಸ್‌ಎಸ್‌ಎಲ್‌ಸಿ ಪರೀಕ್ಷೆ: ತೃತೀಯ ಭಾಷೆಗೆ ಅಂಕಗಳ ಬಗ್ಗೆ ಹೈಕೋರ್ಟ್ ನಿರ್ದೇಶನ ಇಲ್ಲಿದೆ

ಎಸ್‌ಎಸ್‌ಎಲ್‌ಸಿ ಪರೀಕ್ಷೆ: ತೃತೀಯ ಭಾಷೆಗೆ ಅಂಕಗಳ ಬಗ್ಗೆ ಹೈಕೋರ್ಟ್ ನಿರ್ದೇಶನ ಇಲ್ಲಿದೆ

April 16, 2026
ಇಂದು ಸಂಸತ್ತಿನಲ್ಲಿ ಐತಿಹಾಸಿಕ ತಿದ್ದುಪಡಿ ವಿಧೇಯಕ ಮಂಡನೆ

ಇಂದು ಸಂಸತ್ತಿನಲ್ಲಿ ಐತಿಹಾಸಿಕ ತಿದ್ದುಪಡಿ ವಿಧೇಯಕ ಮಂಡನೆ

April 16, 2026
Next Post

ಕೋಟ್ಯಧಿಪತಿ ಮಹಿಳೆ ಕೊಂದು ಡ್ರಾಮಾ ಮಾಡಿದ್ನಾ ಡ್ರೈವರ್..?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada