• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, May 17, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕೇಂದ್ರದಿಂದ ‘ ಸುಪ್ರೀಂ ‘ ಹಾದಿ ತಪ್ಪಿಸುವ ಪ್ರಯತ್ನ .. ಬರ ಪರಿಹಾರದ ವಿಷಯದಲ್ಲಿ ಹೋರಾಟ ಮುಂದುವರಿಕೆ : CM ಸಿದ್ದರಾಮಯ್ಯ

ಪ್ರತಿಧ್ವನಿ by ಪ್ರತಿಧ್ವನಿ
April 8, 2024
in Top Story, ಇದೀಗ, ಕರ್ನಾಟಕ, ರಾಜಕೀಯ
0
ಕೇಂದ್ರದಿಂದ ‘ ಸುಪ್ರೀಂ ‘ ಹಾದಿ ತಪ್ಪಿಸುವ ಪ್ರಯತ್ನ .. ಬರ ಪರಿಹಾರದ ವಿಷಯದಲ್ಲಿ ಹೋರಾಟ ಮುಂದುವರಿಕೆ : CM ಸಿದ್ದರಾಮಯ್ಯ
Share on WhatsAppShare on FacebookShare on Telegram

ಕೇಂದ್ರದಿಂದ ‘ ಸುಪ್ರೀಂ ‘ ಹಾದಿ ತಪ್ಪಿಸುವ ಪ್ರಯತ್ನ .. ಬರ ಪರಿಹಾರದ ವಿಷಯದಲ್ಲಿ ಹೋರಾಟ ಮುಂದುವರಿಕೆ : CM ಸಿದ್ದರಾಮಯ್ಯ

ADVERTISEMENT

ಕರ್ನಾಟಕಕ್ಕೆ ನ್ಯಾಯಬದ್ಧವಾಗಿ ನೀಡಬೇಕಾಗಿರುವ ಬರಪರಿಹಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ಸುಪ್ರೀಂ ಕೋರ್ಟ್ ಗೆ ಕೂಡಾ ತಪ್ಪು ಮಾಹಿತಿ ನೀಡಿ ನ್ಯಾಯಾಲಯದ ಹಾದಿ ತಪ್ಪಿಸುವ ಪ್ರಯತ್ನ ಮಾಡಿರುವುದು ವಿಷಾದನೀಯ ಅಂತ ಸಿಎಂ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ.ನ್ಯಾಯಬದ್ಧವಾಗಿ ಕರ್ನಾಟಕಕ್ಕೆ ನೀಡಬೇಕಾಗಿರುವ ಬರಪರಿಹಾರವನ್ನು ನೀಡದೆ ಕೇಂದ್ರ ಸರ್ಕಾರ ಕಳೆದ ಐದಾರು ತಿಂಗಳುಗಳಿಂದ ಸತಾಯಿಸುತ್ತಿರುವುದನ್ನು ಕಂಡು ಬೇರೆ ದಾರಿ ಕಾಣದೆ ನ್ಯಾಯ ಕೋರಿ ನಮ್ಮ ಸರ್ಕಾರ ಸುಪ್ರೀಂ ಕೋರ್ಟ್ ಗೆ ಮೊರೆ ಹೋಗಿತ್ತು. ಇಂದು ನ್ಯಾಯಾಲಯದಲ್ಲಿ ನಡೆದ ವಿಚಾರಣೆಯಲ್ಲಿ ಕೇಂದ್ರ ಸರ್ಕಾರದ ಅಡ್ವೋಕೇಟ್ ಜನರಲ್ ತುಷಾರ್ ಮೆಹ್ತಾ ಅವರು ಬರಪರಿಹಾರ ವಿಳಂಬಕ್ಕೆ ಕರ್ನಾಟಕ ಸರ್ಕಾರವೇ ಕಾರಣ. ಇದರ ಹಿಂದೆ ರಾಜಕೀಯ ಉದ್ದೇಶ ಇದೆ ಎಂಬ ಅಭಿಪ್ರಾಯ ಮೂಡುವಂತೆ ವಾದ ಮಾಡಿದ್ದಾರೆ.

ಇದು ಖಂಡನೀಯ ಎಂದು ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ.ಸೆಪ್ಟೆಂಬರ್ ತಿಂಗಳಿನಲ್ಲಿಯೇ ನಷ್ಟದ ವಿವರ ಮತ್ತು ನಿರೀಕ್ಷಿತ ಪರಿಹಾರದ ಮೊತ್ತವನ್ನು ಒಳಗೊಂಡ ಮನವಿ ಪತ್ರವನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಿದ್ದೆವು. ಅದರ ನಂತರ ನಾನು ಮತ್ತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ಗೃಹಸಚಿವ ಅಮಿತ್ ಶಾ ಅವರನ್ನು ದೆಹಲಿಯಲ್ಲಿ ಭೇಟಿ ಮಾಡಿ ಮನವಿ ಮಾಡಿದ್ದೆವು. ನಮ್ಮ ಉಪಮುಖ್ಯಮಂತ್ರಿಗಳು ಪ್ರತ್ಯೇಕವಾಗಿ ಕೇಂದ್ರ ಹಣಕಾಸು ಸಚಿವರನ್ನು ಭೇಟಿ ಮಾಡಿದ್ದರು. ಹೀಗಿದ್ದರೂ ಕರ್ನಾಟಕ ಸರ್ಕಾರ ವಿಳಂಬವಾಗಿ ಮನವಿ ಸಲ್ಲಿಸಿದೆ ಎಂದು ಕೇಂದ್ರ ಹಣಕಾಸು ಸಚಿವರು ಮತ್ತು ಗೃಹಸಚಿವರು ಯಾವ ಮುಜುಗರ ಇಲ್ಲದೆ ಸುಳ್ಳು ಹೇಳುತ್ತಾ ಬಂದಿದ್ದಾರೆ. ಇಂದು ಇದೇ ಸುಳ್ಳನ್ನು ಕೇಂದ್ರ ಸರ್ಕಾರ ಸರ್ವೋಚ್ಚ ನ್ಯಾಯಾಲಯದ ಮುಂದೆಯೂ ಹೇಳಿದೆ.ಕೇಂದ್ರ ಸರ್ಕಾರದ ಅಡ್ವೋಕೇಟ್ ಜನರಲ್ ಅವರ ಹೇಳಿಕೆಯನ್ನು ಪುರಸ್ಕರಿಸಿದ ಸುಪ್ರೀಂ ಕೋರ್ಟ್ ಸದ್ಯಕ್ಕೆ ಪ್ರಕರಣವನ್ನು ಎರಡು ವಾರಗಳ ಕಾಲ ಮುಂದೂಡಿದೆ. ಮುಂದಿನ ವಿಚಾರಣೆಯೊಳಗೆ ಕೇಂದ್ರ ಸರ್ಕಾರ ತನ್ನ ಉತ್ತರವನ್ನು ಸಿದ್ಧಗೊಳಿಸಬೇಕಾಗಿದೆ. ಬರಪರಿಹಾರ ನೀಡಿಕೆಯಲ್ಲಿ ಕೇಂದ್ರ ಸರ್ಕಾರ ರಾಜ್ಯಕ್ಕೆ ಮಾಡಿರುವ ಅನ್ಯಾಯದ ವಿರುದ್ಧದ ನಮ್ಮ ಹೋರಾಟ ಬೀದಿಗಳಲ್ಲಿ ಮಾತ್ರವಲ್ಲ ನ್ಯಾಯಾಲಯದಲ್ಲಿಯೂ ಮುಂದುವರಿಯಲಿದೆ. ಕೇಂದ್ರ ಸರ್ಕಾರದ ಸುಳ್ಳುಗಳನ್ನು ಒಂದೊಂದಾಗಿ ಬಯಲುಗೊಳಿಸುತ್ತಾ ಅದರ ನಿಜಸ್ವರೂಪವನ್ನು ರಾಜ್ಯದ ಜನತೆಯ ಮುಂದಿಡುವ ಪ್ರಯತ್ನವನ್ನು ಮಾಡಲಿದ್ದೇವೆ ಅಂದಿದ್ದಾರೆ.

Tags: BJPCongress PartyDroughtModiSiddaramiah
Previous Post

5, 8 & 9ನೇ ತರಗತಿ ಪರೀಕ್ಷೆ ಮಾಡಿದ್ದು ಸರಿಯಲ್ಲ.. ಸುಪ್ರೀಂಕೋರ್ಟ್‌ ಆದೇಶ

Next Post

ಪ್ರಧಾನಿ ಮೋದಿಯನ್ನ ಮಹಾ-ಪ್ರಭುಗಳು ಎಂದು ಹೀಗಳೆದ ಪ್ರಕಾಶ್ ರಾಜ್ ! ಮೋದಿಗೆ ಮೇಕಪ್ ಮಾಡಲು 45ನಿಮಿಷ ಬೇಕಂತೆ ?! 

Related Posts

“ಹೆಚ್ಚು ಮಕ್ಕಳು ಹುಟ್ಟಿಸಿ, ಹಣ ಪಡೆಯಿರಿ : ಚಂದ್ರಬಾಬು ಹೊಸ ಘೋಷಣೆ”
Top Story

“ಹೆಚ್ಚು ಮಕ್ಕಳು ಹುಟ್ಟಿಸಿ, ಹಣ ಪಡೆಯಿರಿ : ಚಂದ್ರಬಾಬು ಹೊಸ ಘೋಷಣೆ”

by ಪ್ರತಿಧ್ವನಿ
May 16, 2026
0

ಅಮರಾವತಿ : ರಾಜ್ಯದಲ್ಲಿ ಕುಸಿಯುತ್ತಿರುವ ಜನಸಂಖ್ಯೆ ಪ್ರಮಾಣವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಆಂಧ್ರ ಪ್ರದೇಶ ಸರ್ಕಾರ ಮಹತ್ವದ ಘೋಷಣೆ ಮಾಡಿದೆ. ಮೂರನೇ ಮಗುವಿನ ಜನನಕ್ಕೆ ₹30 ಸಾವಿರ ಹಾಗೂ...

Read moreDetails
ಊಬರ್‌, ಓಲಾ, ರಾಪಿಡೋಗೆ ಮಹಾರಾಷ್ಟ್ರ ಸರ್ಕಾರದ ಶಾಕ್!

ಊಬರ್‌, ಓಲಾ, ರಾಪಿಡೋಗೆ ಮಹಾರಾಷ್ಟ್ರ ಸರ್ಕಾರದ ಶಾಕ್!

May 16, 2026
ಅಸ್ಮಿತೆಯ ಸಂಕೋಲೆಯಲಿ ಶಿಕ್ಷಣ-ಶಿಕ್ಷಣಾರ್ಥಿಗಳು

ಅಸ್ಮಿತೆಯ ಸಂಕೋಲೆಯಲಿ ಶಿಕ್ಷಣ-ಶಿಕ್ಷಣಾರ್ಥಿಗಳು

May 16, 2026
ಶ್ರಮಿಕ ವಸತಿ ಶಾಲೆ, ಕೌಶಲ್ಯ ತರಬೇತಿ ಅಕಾಡೆಮಿ ಸ್ಥಾಪನೆ: ಸಚಿವ ಸಂತೋಷ್‌ ಲಾಡ್‌ ಸಭೆ

ಶ್ರಮಿಕ ವಸತಿ ಶಾಲೆ, ಕೌಶಲ್ಯ ತರಬೇತಿ ಅಕಾಡೆಮಿ ಸ್ಥಾಪನೆ: ಸಚಿವ ಸಂತೋಷ್‌ ಲಾಡ್‌ ಸಭೆ

May 16, 2026
ನೀಟ್ ಪೇಪರ್ ಲೀಕ್‌ಗೆ ಹೊಸ ಟ್ವಿಸ್ಟ್ : ಒಂದೇ ಕುಟುಂಬದ 5 ಮಂದಿ ಸತತ ಎರಡು ವರ್ಷ ಪಾಸ್!

ನೀಟ್ ಪೇಪರ್ ಲೀಕ್‌ಗೆ ಹೊಸ ಟ್ವಿಸ್ಟ್ : ಒಂದೇ ಕುಟುಂಬದ 5 ಮಂದಿ ಸತತ ಎರಡು ವರ್ಷ ಪಾಸ್!

May 16, 2026
Next Post
ಪ್ರಧಾನಿ ಮೋದಿಯನ್ನ ಮಹಾ-ಪ್ರಭುಗಳು ಎಂದು ಹೀಗಳೆದ ಪ್ರಕಾಶ್ ರಾಜ್ ! ಮೋದಿಗೆ ಮೇಕಪ್ ಮಾಡಲು 45ನಿಮಿಷ ಬೇಕಂತೆ ?! 

ಪ್ರಧಾನಿ ಮೋದಿಯನ್ನ ಮಹಾ-ಪ್ರಭುಗಳು ಎಂದು ಹೀಗಳೆದ ಪ್ರಕಾಶ್ ರಾಜ್ ! ಮೋದಿಗೆ ಮೇಕಪ್ ಮಾಡಲು 45ನಿಮಿಷ ಬೇಕಂತೆ ?! 

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!