ಲಂಬಾಣಿ ತಾಂಡಾದಲ್ಲಿ ಶಿವಣ್ಣ ದಂಪತಿ ಯುಗಾದಿ ಮತಬೇಟೆ..
ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿ ಕೆ.ಎಸ್ ಈಶ್ವರಪ್ಪ ಸೇರಿದಂತೆ ಮೂವರು ಘೋಷಿತ ಅಭ್ಯರ್ಥಿಗಳು ಭರ್ಜರಿ ಪ್ರಚಾರ ಕೈಗೊಂಡಿದ್ದಾರೆ.. ಈ ನಡುವೆ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಮತ್ತು ನಟ ಶಿವರಾಜ್ ಕುಮಾರ್ ಇಂದು ಸಂಜೆ 5 ಗಂಟೆಗೆ ಶಿವಮೊಗ್ಗ ತಾಲ್ಲೂಕಿನ ಕುಂಚೇನಹಳ್ಳಿಯಲ್ಲಿ ಯುಗಾದಿ ಆಚರಣೆಯಲ್ಲಿ ಭಾಗವಹಿಸಿ ವಿಶಿಷ್ಟ ರೀತಿಯ ಪ್ರಚಾರ ಮಾಡಲು ಮುಂದಾಗಿದ್ದಾರೆ.
ಲಂಬಾಣಿ ಸಮುದಾಯದ ಪ್ರಮುಖ ಹಬ್ಬ ‘ಆಟಮ್’ ಯುಗಾದಿ ಹಬ್ಬ ಆಚರಣೆಯಲ್ಲಿ ಇಂದು ಸಂಜೆ 5 ಗಂಟೆಗೆ ಶಿವಣ್ಣ ದಂಪತಿ ಭಾಗವಹಿಸಲಿದ್ದಾರೆ.. ಇನ್ನು ವಿಶೇಷವೆಂದರೆ ಬಂಜಾರ ಸಮುದಾಯದ ಉಡುಗೆಯಲ್ಲಿ ಗೀತಾ ಶಿವರಾಜ್ ಕುಮಾರ್ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ.. ಬಳಿಕ ದೊಡ್ಡಮನೆ ದಂಪತಿಗಳು ಸೇವಾಲಾಲ್ ದೇವಾಲಯ ಸೇರಿದಂತೆ ಗ್ರಾಮದ ವಿವಿಧ ದೇವಾಲಯಗಳಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ.






