• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ 8 ವಿಧಾನಸಭಾ ಕ್ಷೇತ್ರಗಳು ಬರುತ್ತದೆ.

ಪ್ರತಿಧ್ವನಿ by ಪ್ರತಿಧ್ವನಿ
April 12, 2024
in Top Story, ರಾಜಕೀಯ
0
ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ 8 ವಿಧಾನಸಭಾ ಕ್ಷೇತ್ರಗಳು ಬರುತ್ತದೆ.
Share on WhatsAppShare on FacebookShare on Telegram

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ 8 ವಿಧಾನಸಭಾ ಕ್ಷೇತ್ರಗಳು ಬರುತ್ತದೆ.
ಬೊಮ್ಮನಹಳ್ಳಿ, ಬಿಟಿಎಂಲೇಔಟ್, ಜಯನಗರ, ಪದ್ಮನಾಭನಗರ, ಚಿಕ್ಕಪೇಟೆ, ಬಸವನಗುಡಿ, ವಿಜಯನಗರ ಹಾಗೂ ಗೋವಿಂದರಾಜನಗರ ಕ್ಷೇತ್ರಗಳು.
ಈ 8 ಕ್ಷೇತ್ರಗಳ ಪೈಕಿ 5 ಮಂದಿ ಬಿಜೆಪಿ ಶಾಸಕರುಗಳು, 3 ಮಂದಿ ಕಾಂಗ್ರೆಸ್‌ನ ಶಾಸಕರಿದ್ದಾರೆ.

ADVERTISEMENT

ಇನ್ನು ಈ ಬಾರಿಯ ಅಖಾಡದಲ್ಲಿ ತೇಜಸ್ವಿ ಸೂರ್ಯ V/S ಸೌಮ್ಯರೆಡ್ಡಿ ಕಣದಲ್ಲಿದ್ದು, ಬಿಜೆಪಿ V/S ಕಾಂಗ್ರೆಸ್ ಅಖಾಡ ರಂಗೇರಿದೆ.

ಇನ್ನು ಲಾಭ ನಷ್ಟದ ಲೆಕ್ಕಾಚಾರಕ್ಕೆ ಬಂದರೆ, ಕಳೆದ 8 ಚುನಾವಣೆಯಿಂದಲೂ ಇದು ಬಿಜೆಪಿಯ ಭದ್ರಕೋಟೆ. ಅನಂತ್‌ಕುಮಾರ್ ಇಲ್ಲಿ ಸತತವಾಗಿ ಆಯ್ಕೆಯಾಗುತ್ತಾ ಬಂದಿದ್ದಾರೆ. ಬ್ರಾಹ್ಮಣ, ಒಕ್ಕಲಿಗ, ವೀರಶೈವ- ಲಿಂಗಾಯತ, ರೆಡ್ಡಿ, ಎಸ್‌ಸಿ, ಎಸ್‌ಟಿ, ಹಿಂದುಳಿದ ವರ್ಗಗಳ ಮತಗಳಿದೆ.

ಇನ್ನು ಈ ಬಾರಿಯ ಅಖಾಡದಲ್ಲಿ ಇಬ್ಬರು ಯುವಕರು ಕಣದಲ್ಲಿದ್ದಾರೆ.

ಹಾಲಿ ಸಂಸದ, ಬ್ರಾಹ್ಮಣ ಸಮುದಾಯಕ್ಕೆ ಸೇರಿದ ತೇಜಸ್ವಿ ಸೂರ್ಯ, ರಾಜಕಾರಣದ ಹಿನ್ನೆಲೆಯನ್ನು ಹೊಂದಿದ್ದು, ಅನಂತ್‌ಕುಮಾರ್ ಅವರ ಕಟ್ಟಾ ಅನುಯಾಯಿಯಾಗಿ, ಕಳೆದ ಬಾರಿ ಮೊದಲ ಬಾರಿಗೆ ಸಂಸತ್ ಪ್ರವೇಶ ಮಾಡಿದ್ರು. ಜೊತೆಗೆ ಅವರು ಈಗ ಬಿಜೆಪಿಯ ರಾಷ್ಟ್ರೀಯಾಧ್ಯಕ್ಷರಾಗಿ ಕಾರ್ಯನಿರ್ವಹಣೆ ಮಾಡುತ್ತಿದ್ದಾರೆ. ಕಳೆದ ಬಾರಿ ಕಾಂಗ್ರೆಸ್‌ನಿಂದ ಬಿ.ಕೆ. ಹರಿಪ್ರಸಾದ್ ಅವರನ್ನು ಮಣಿಸಿ ಸಂಸತ್ ಪ್ರವೇಶಿಸಿದ್ರು. ಈ ಬಾರಿ ಸೌಮ್ಯರೆಡ್ಡಿ ಅವರನ್ನು ಎದುರಿಸುತ್ತಿದ್ದಾರೆ. ಇದು ಪ್ರಬಲ ಬಿಜೆಪಿಯ ಭದ್ರಕೋಟೆ ಆಗಿರುವ ಕಾರಣ, ಇಲ್ಲಿ ಗೆಲುವಿನ ಶೇಕಡಾವಾರು ತೇಜಸ್ವಿ ಸೂರ್ಯರದ್ದೇ ಎಂಬ ಮಾತುಗಳು ಕೇಳಿ ಬರುತ್ತಿದೆ.

ಇನ್ನು ಇದೇ ಮೊದಲ ಬಾರಿಗೆ ಸಂಸತ್ ಪ್ರವೇಶ ಮಾಡುವ ಆಸೆಯಿಂದ ಮಾಜಿ ಶಾಸಕಿ ಸೌಮ್ಯರೆಡ್ಡಿ ಕಾಂಗ್ರೆಸ್‌ನಿಂದ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಕಳೆದ 2018 ರ ರಾಜ್ಯ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿನ ಜಯನಗರ ವಿಧಾನಸಭಾ ಕ್ಷೇತ್ರದಿಂದ ಶಾಸಕಿಯಾಗಿ ಆಯ್ಕೆಯಾಗಿದ್ರು. ಆದ್ರೆ ಕಳೆದ 2023 ರ ವಿಧಾನಸಭಾ ಚುನಾವಣೆಯಲ್ಲಿ ಕೇವಲ 16 ಮತಗಳ ಅಂತರದಿಂದ ಬಿಜೆಪಿಯ ಸಿ.ಕೆ.ರಾಮಮೂರ್ತಿ ವಿರುದ್ಧ ಪರಾಭವಗೊಂಡಿದ್ದಾರೆ. ಇನ್ನು ರೆಡ್ಡಿ ಸಮುದಾಯಕ್ಕೆ ಸೇರಿದ ಸೌಮ್ಯರೆಡ್ಡಿಗೆ ತಂದೆ ಹಾಗೂ ಸಚಿವ ರಾಮಲಿಂಗಾರೆಡ್ಡಿ ಅವರ ಆಶೀರ್ವಾದ ಗಟ್ಟಿಯಾಗಿದೆ. ರಾಮಲಿಂಗಾರೆಡ್ಡಿ ಅವರು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಮೇಲೆ ಕಳೆದ ಮೂರುವರೆ ದಶಕಗಳಿಂದಲೂ ಹಿಡಿತ ಸಾಧಿಸಿದ್ದು, ಕ್ಷೇತ್ರದಲ್ಲಿ ಕಟ್ಟಾ ಕಾಂಗ್ರೆಸ್ಸಿಗ ಎಂಬ ಹೆಸರನ್ನು ಸಂಪಾದನೆ ಮಾಡಿದ್ದಾರೆ. ಇನ್ನು ಕ್ಷೇತ್ರದಲ್ಲಿನ 8 ವಿಧಾನಸಭಾ ಕ್ಷೇತ್ರಗಳಲ್ಲೂ ರಾಮಲಿಂಗಾರೆಡ್ಡಿ ಚಿರಪರಿಚಿತ. ಇತ್ತ ಕ್ಷೇತ್ರದ ವ್ಯಾಪ್ತಿಗೆ ಬರುವ ಬಿಟಿಎಂಲೇಔಟ್‌ನ ಹಾಲಿ ಶಾಸಕರಾಗಿ, ಸರ್ಕಾರದಲ್ಲಿ ಸಾರಿಗೆ ಸಚಿವರಾಗಿಯೂ ರಾಮಲಿಂಗಾರೆಡ್ಡಿ ಕಾರ್ಯನಿರ್ವಹಣೆ ಮಾಡುತ್ತಿದ್ದು, ತಂದೆ ಮಗಳ ಬೆನ್ನಿಗೆ ನಿಂತಿದ್ದಾರೆ. ಈ ನಿಟ್ಟಿನಲ್ಲಿ ಸ್ವಲ್ಪ ಮಟ್ಟಿಗೆ ಫೈಟ್ ಏರ್ಪಡುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ. ಬೊಮ್ಮನಹಳ್ಳಿ, ಬಿಟಿಎಂಲೇಔಟ್ ವಿಧಾನಸಭಾ ಕ್ಷೇತ್ರಗಳ ರೆಡ್ಡಿ ಸಮುದಾಯದ ಮತಗಳು, ಜಯನಗರದ ಮಾಜಿ ಶಾಸಕಿಯಾಗಿರುವ ಕಾರಣ ಅಲ್ಲಿನ ಮತಗಳು ಸೌಮ್ಯರೆಡ್ಡಿ ಕೈ ಹಿಡಿಯುವ ಸಾಧ್ಯತೆಯಿದೆ ಎನ್ನಲಾಗಿದ್ದು, ಗೆಲುವು ಯಾರಿಗೆ ಸಲ್ಲುತ್ತದೆ ಎಂಬುದು ಕುತೂಹಲ ಕೆರಳಿಸಿದೆ.

Tags: BJPCongress Partyತೇಜಸ್ವಿ ಸೂರ್ಯನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಬಿಜೆಪಿ V/S ಕಾಂಗ್ರೆಸ್ಸಿದ್ದರಾಮಯ್ಯಸೌಮ್ಯರೆಡ್ಡಿ
Previous Post

ಸಿಎಂ & ಡಿಸಿಎಂ ಪ್ರತಿಷ್ಟೆ ಈ ಮೂರು ಕ್ಷೇತ್ರಗಳಲ್ಲಿ ಅಡಗಿದೆ ! ಮೈಸೂರು – ಬೆಂಗಳೂರು – ಬೆಂ.ಗ್ರಾಮಾಂತಾರ ಅಗ್ನಿ ಪರೀಕ್ಷೆ ?!

Next Post

How this Nigerian woman went from aspiring developer to meeting Mark Zuckerberg

Related Posts

ಪಾಕಿಸ್ತಾನ ಜಿಂದಾಬಾದ್ ಹೇಳಿಕೆ ಮತ್ತೆ ವೈರಲ್: ಚೇತನ್ ಅಹಿಂಸಾ ಸುತ್ತ ಹೊಸ ವಿವಾದ
Top Story

ಪಾಕಿಸ್ತಾನ ಜಿಂದಾಬಾದ್ ಹೇಳಿಕೆ ಮತ್ತೆ ವೈರಲ್: ಚೇತನ್ ಅಹಿಂಸಾ ಸುತ್ತ ಹೊಸ ವಿವಾದ

by ಪ್ರತಿಧ್ವನಿ
April 29, 2026
0

ನಟ ಹಾಗೂ ಸಾಮಾಜಿಕ ಕಾರ್ಯಕರ್ತ ಚೇತನ್ ಅಹಿಂಸಾ ಇತ್ತೀಚೆಗೆ ನೀಡಿದ ಹೇಳಿಕೆಗಳು ಹಾಗೂ ಸಾಮಾಜಿಕ ಜಾಲತಾಣದ ಪೋಸ್ಟ್‌ಗಳ ಹಿನ್ನೆಲೆಯಲ್ಲಿ ಹೊಸ ವಿವಾದಕ್ಕೆ ಕಾರಣರಾಗಿದ್ದಾರೆ. ಡಾ. ರಾಜ್‌ಕುಮಾರ್ ಅಭಿಮಾನಿಗಳು...

Read moreDetails
ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

April 29, 2026
ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

April 29, 2026
“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

April 29, 2026
ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

April 29, 2026
Next Post

How this Nigerian woman went from aspiring developer to meeting Mark Zuckerberg

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada