ಬೆಂಗಳೂರು ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣದಲ್ಲಿ ಇಬ್ಬರು ಪ್ರಮುಖ ಆರೋಪಗಳನ್ನು NIA ಟೀಂ ಪಶ್ಚಿಮ ಬಂಗಾಳದಲ್ಲಿ (West Bengal) ಅರೆಸ್ಟ್ ಮಾಡಿದೆ. ಕೆಲವೇ ಗಂಟೆಗಳಲ್ಲಿ ಬೆಂಗಳೂರಿಗೆ ವಿಮಾನದ ಮೂಲಕ ಕರೆತರಲಾಗ್ತಿದೆ. ಆದರೆ ಬೆಂಗಳೂರಿಗೆ ಶಂಕಿತರು ಬಂದಿಳಿಯುವ ಮುನ್ನವೇ ಹುಬ್ಬಳ್ಳಿಯಲ್ಲಿ ಓರ್ವ ಶಂಕಿತನ ಬಂಧನ ಮಾಡಲಾಗಿದೆ.

ಕೇಂದ್ರ ಗುಪ್ತಚರ ಇಲಾಖೆ ಮಾಹಿತಿ ಆಧರಿಸಿ ಹುಬ್ಬಳ್ಳಿಯಲ್ಲಿ ಓರ್ವ ಶಂಕಿತ ವ್ಯಕ್ತಿಯನ್ನು ವಶಕ್ಕೆ ಪಡೆದಿದೆ NIA ಟೀಂ. ಹುಬ್ಬಳ್ಳಿಯ ಗಣೇಶ ಪೇಟೆಯ ಶೋಯೆಬ್ ಮಿರ್ಜಾ ಎಂಬಾತನನ್ನು ವಶಕ್ಕೆ ಪಡೆಯಲಾಗಿದೆ. ಹುಬ್ಬಳ್ಳಿಯ ಗಣೇಶ ಪೇಟೆಯಲ್ಲಿ ನಡೆದ ಕಾರ್ಯಚರಣೆ ಶೋಯೆಬ್ ಮಿರ್ಜಾನನ್ನು ಬಂಧಿಸಿ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ವಿಚಾರಣೆ ನಡೆಸಲಾಗ್ತಿದೆ. ಆದರೆ ಯಾವ ಪ್ರಕರಣಕ್ಕೆ ವಶಕ್ಕೆ ಪಡೆಯಲಾಗಿದೆ ಎಂಬ ಮಾಹಿತಿ ಇನ್ನೂ ಲಭ್ಯವಾಗಿಲ್ಲ.
