ಶಿವಮೊಗ್ಗ ಲೋಕಸಭಾ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಅವರ ನಾಮಪತ್ರ ಸಲ್ಲಿಕೆ ಪ್ರಕ್ರಿಯೆಯಲ್ಲಿ ಭಾಗಿಯಾಗಲು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪರ ಜೊತೆಗೆ ಮಂಡ್ಯ ಲೋಕಸಭಾ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ತೆರಳಿದ್ದಾರೆ. ಇಂದು ಬೆಳಿಗ್ಗೆ 9 ಘಂಟೆಗೆ ವಿಶೇಷ ಹೆಲಿಕಾಪ್ಟರ್ ಮೂಲಕ ಬೆಂಗಳೂರಿನ ಹೆಚ್‌ಎಎಲ್ ವಿಮಾನನಿಲ್ದಾಣದಿಂದ ಶಿವಮೊಗ್ಗದ ರಾಷ್ಟ್ರಕವಿ ಕುವೆಂಪು ವಿಮಾನನಿಲ್ದಾಣಕ್ಕೆ ಪ್ರಯಾಣ ಬೆಳೆಸಿರುವ ನಾಯಕರು, ಅಲ್ಲಿ ಅದ್ದೂರಿಯಾದ ರೋಡ್ ಶೋ ಮುಗಿಸಿ, ಬಳಿಕ ನಾಮಪತ್ರ ಸಲ್ಲಿಕೆಗೆ ಮುಂದಾಗಲಿದ್ದಾರೆ.
