• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಮಾಜಿ ಮೇಯರ್ ಮನೆಯಲ್ಲಿ ಸೆಕ್ಯೂರಿಟಿಯಿಂದಲೇ ಕೋಟ್ಯಾಂತರ ರೂ. ಮೌಲ್ಯದ ಚಿನ್ನಾಭರಣ, ನಗದು ಲೂಟಿ!

ಪ್ರತಿಧ್ವನಿ by ಪ್ರತಿಧ್ವನಿ
April 21, 2024
in ಕರ್ನಾಟಕ
0
ಮಾಜಿ ಮೇಯರ್ ಮನೆಯಲ್ಲಿ ಸೆಕ್ಯೂರಿಟಿಯಿಂದಲೇ ಕೋಟ್ಯಾಂತರ ರೂ. ಮೌಲ್ಯದ ಚಿನ್ನಾಭರಣ, ನಗದು ಲೂಟಿ!
Share on WhatsAppShare on FacebookShare on Telegram

ಬೆಂಗಳೂರು: ಶ್ರೀಮಂತರ ಮನೆಯಲ್ಲಿ ಸೆಕ್ಯೂರಿಟಿ ಸೇರಿದಂತೆ ಆಳು-ಕಾಳು ಇಟ್ಟುಕೊಳ್ಳುವುದು ಸಾಮಾನ್ಯ. ಹಲವರಂತೂ ಯಾವುದೇ ಪೂರ್ವಾಪರ ಇಲ್ಲದೆ, ಹಿಂದೆ- ಮುಂದೆ ನೋಡದೆ ಆಳುಗಳನ್ನು ನೇಮಿಸಿಕೊಂಡು ಬಿಡುತ್ತಾರೆ. ಸೆಕ್ಯೂರಿಟಿ, ಅಡುಗೆ, ಕಾರು ಚಾಲಕ ಸೇರಿದಂತೆ ಮನೆಗೆ ಬೇಕಾದವರನ್ನು ನೇಮಿಸಿಕೊಂಡು ಬಿಡುತ್ತಾರೆ. ಆದರೆ, ಅವರೆಲ್ಲ ಪ್ರಾಮಾಣಿಕರೇ…? ಅದರ ಬಗ್ಗೆ ಗಮನ ಹರಿಸುವುದೇ ಇಲ್ಲ. ಹೀಗೆ ಗಮನ ಹರಿಸದ ಹಿನ್ನೆಲೆಯಲ್ಲಿ ಸೆಕ್ಯೂರಿಟಿಯೇ ಮನೆ ಲೂಟಿ ಮಾಡಿ ಪರಾರಿಯಾಗಿರುವ ಘಟನೆಯೊಂದು ಸಿಲಿಕಾನ್ ಸಿಟಿಯಲ್ಲಿ ನಡೆದಿದೆ.

ADVERTISEMENT

ಅದೂ ಪ್ರತಿಷ್ಠಿತ ವ್ಯಕ್ತಿಯ ಮನೆಯಲ್ಲಿಯೇ ನಡೆದಿದ್ದು, ಕೋಟ್ಯಾಂತರ ರೂ. ಮೌಲ್ಯದ ಚಿನ್ನಾಭರಣ ಹಾಗೂ ನಗದು ದೋಚಿ ಪರಾರಿಯಾಗಿದ್ದಾನೆ ಎನ್ನಲಾಗಿದೆ. ಸಿಲಿಕಾನ್ ಸಿಟಿಯ ಮಾಜಿ ಮೇಯರ್(Former Mayor) ಮನೆಯಲ್ಲಿ ಕೋಟ್ಯಾಂತರ ರೂ. ಮೌಲ್ಯದ ಚಿನ್ನಾಭರಣ ಹಾಗೂ ನಗದು ಕಳ್ಳತನ(Theft) ವಾಗಿರುವ ಘಟನೆ ನಡೆದಿದೆ.

ಸಿಲಿಕಾನ್ ಸಿಟಿಯಿ ಸಂಜಯನಗರದಲ್ಲಿ ಈ ಘಟನೆ ನಡೆದಿದೆ. ಮನೆಯ ಸೆಕ್ಯೂರಿಟಿ ಗಾರ್ಡ್ ಈ ಕೃತ್ಯ ಎಸಗಿರಬಹುದು ಎಂದು ಶಂಕಿಸಲಾಗಿದೆ. ಸೆಕ್ಯೂರಿಟಿ ಗಾರ್ಡ್ ನರಬಹದ್ದೂರ ಶಾಯಿ ಎಂಬಾತ ಕೃತ್ಯ ಎಸಗಿ ಪರಾರಿಯಾಗಿದ್ದಾನೆ ಎನ್ನಲಾಗಿದೆ.

ಮನೆಯಲ್ಲಿಟ್ಟಿದ್ದ ಸುಮಾರು 1,29,17,000 ರೂ. ಮೌಲ್ಯದ ಚಿನ್ನಾಭರಣ, ಬೆಳ್ಳಿ, ವಾಚ್‌ ಗಳು ಹಾಗೂ ನಗದು ಕಳ್ಳತನವಾಗಿವೆ. 99,75,000 ರೂ. ಮೌಲ್ಯದ 1,425 ಗ್ರಾಂ ಚಿನ್ನಾಭರಣ, 18,92,000 ರೂ. ಮೌಲ್ಯದ 22 ಕೆಜಿ ಬೆಳ್ಳಿ ವಸ್ತುಗಳು, 6.50 ಲಕ್ಷ ರೂ. ಮೌಲ್ಯದ 3 ವಾಚ್‌ ಗಳು ಹಾಗೂ 4 ಲಕ್ಷ ರೂ. ನಗದು ಹಣ ದೋಚಿ ಪರಾರಿಯಾಗಿದ್ದಾನೆ. ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೇ, ಈ ಕುರಿತು ದೂರು ದಾಖಲಿಸಿಕೊಂಡಿದ್ದು, ಸೆಕ್ಯೂರಿಟಿ ಗಾರ್ಡ್ ಗಾಗಿ ಹುಡುಕಾಟ ನಡೆಸಿದ್ದಾರೆ.

Tags: BangaloresecurityTheft
Previous Post

ಏಕಾಏಕಿ ಸ್ಮಶಾನದ ಗೋಡೆ ಕುಸಿತ; ಬಾಲಕಿ ಸೇರಿದಂತೆ ನಾಲ್ವರು ಬಲಿ

Next Post

Health tips: ಎಷ್ಟೇ ನೀರು ಕುಡಿದರು ಬಿಕ್ಕಳಿಕೆ ಕಡಿಮೆ ಆಗ್ತಾ ಇಲ್ವಾ? ಹಾಗಿದ್ರೆ ಈ ಟೆಕ್ನಿಕ್ ನ ಟ್ರೈ ಮಾಡಿ.!

Related Posts

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :
Top Story

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

by ಪ್ರತಿಧ್ವನಿ
May 27, 2026
0

ಬೆಂಗಳೂರು : ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಚರ್ಚೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಇದಕ್ಕೆ ಸಂಬಂಧಿಸಿದ ಪೂರಕ ಬೆಳವಣಿಗೆಗಳು ಮುಂದುವರೆದಿವೆ. ಹೈಕಮಾಂಡ್‌ ನಾಯಕರೊಂದಿಗಿನ ಸಭೆಯ ಬಳಿಕ ಬೆಂಗಳೂರಿಗೆ ಆಗಮಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ...

Read moreDetails
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ದೆಹಲಿ ಹೈಕಮಾಂಡ್ ಫಾರ್ಮುಲಾ ಫೈನಲ್? ಸಿಎಂ ಬದಲಾವಣೆ ಒಪ್ಪಲು ಇಲ್ಲಿದೆ ಮುಖ್ಯ ಕಾರಣ 

May 27, 2026
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

May 27, 2026
ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

May 26, 2026
“ಸರ್ಕಾರದಲ್ಲಿ ‘ಕುರ್ಚಿ’ಗಾಗಿ ಕಚ್ಚಾಟ, ದೆಹಲಿ ‘ಹೈಕಮಾಂಡ್’ ಮುಂದೆ ಸಾಷ್ಟಾಂಗ ನಮಸ್ಕಾರ!”

“ಸರ್ಕಾರದಲ್ಲಿ ‘ಕುರ್ಚಿ’ಗಾಗಿ ಕಚ್ಚಾಟ, ದೆಹಲಿ ‘ಹೈಕಮಾಂಡ್’ ಮುಂದೆ ಸಾಷ್ಟಾಂಗ ನಮಸ್ಕಾರ!”

May 26, 2026
Next Post
Health tips: ಎಷ್ಟೇ ನೀರು ಕುಡಿದರು ಬಿಕ್ಕಳಿಕೆ ಕಡಿಮೆ ಆಗ್ತಾ ಇಲ್ವಾ? ಹಾಗಿದ್ರೆ ಈ ಟೆಕ್ನಿಕ್ ನ ಟ್ರೈ ಮಾಡಿ.!

Health tips: ಎಷ್ಟೇ ನೀರು ಕುಡಿದರು ಬಿಕ್ಕಳಿಕೆ ಕಡಿಮೆ ಆಗ್ತಾ ಇಲ್ವಾ? ಹಾಗಿದ್ರೆ ಈ ಟೆಕ್ನಿಕ್ ನ ಟ್ರೈ ಮಾಡಿ.!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!