
ರಾಜ್ಯ ಬಿಜೆಪಿಯ ಹಿರಿಯ ನಾಯಕ ಕೆಎಸ್ ಈಶ್ವರಪ್ಪ ಅವರನ್ನು ಬಿಜೆಪಿಯಿಂದ ಉಚ್ಚಾಟನೆ ಮಾಡಲಾಗಿದೆ. ರಾಜ್ಯ ಬಿಜೆಪಿ ಶಿಸ್ತು ಸಮಿತಿ ಈ ನಿರ್ಧಾರ ಕೈಗೊಂಡಿದೆ.
ರಾಜ್ಯ ಬಿಜೆಪಿಯ ಹಿರಿಯ ನಾಯಕ ಹಾಗೂ ಮಾಜಿ ಉಪಮುಖ್ಯಮಂತ್ರಿ ಕೆಎಸ್ ಈಶ್ವರಪ್ಪ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಲಾಗಿದ್ದು, ಆರು ವರ್ಷಗಳ ಕಾಲ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ ಎಂದು ತಿಳಿಸಲಾಗಿದೆ. ಬಿಜೆಪಿ ಶಿಸ್ತು ಸಮಿತಿ ಈ ನಿರ್ಧಾರ ಕೈಗೊಂಡಿದೆ. ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದ ಕೆಎಸ್ ಈಶ್ವರಪ್ಪ, ತಮ್ಮ ನಾಮಪತ್ರವನ್ನು ಹಿಂಪಡೆಯಲು ಇಂದು ಕೊನೆಯ ದಿನವಾಗಿತ್ತು. ಆದರೆ, ಈಶ್ವರಪ್ಪ ನಾಮಪತ್ರವನ್ನು ಹಿಂಪಡೆಯಲು ನಿರಾಕರಿಸಿದ ಕಾರಣ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಿ ಆದೇಶ ಹೊರಡಿಸಲಾಗಿದೆ.

ಶಿವಮೊಗ್ಗ ಕಣದಲ್ಲಿ ಈಶ್ವರಪ್ಪ..
ಪುತ್ರನಿಗೆ ಹಾವೇರಿ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಕೈತಪ್ಪಿದ ಹಿನ್ನಲೆಯಲ್ಲಿ ಬಂಡಾಯವೆದ್ದು ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪಗೆ ಚುನಾವಣಾ ಆಯೋಗ ಚಿಹ್ನೆ ನೀಡಿದೆ.ಕಬ್ಬಿನ ಜೊತೆ ಇರುವ ರೈತ’ನ ಚಿಹ್ನೆಯನ್ನು ಕೆ.ಎಸ್ ಈಶ್ವರಪ್ಪಗೆ ನೀಡಲಾಗಿದೆ. ಕಳೆದ ವಿಧಾನಸಭಾ ಚುನಾವಣಾ ವೇಳೆಯೇ ಚುನಾವಣಾ ರಾಜಕೀಯಕ್ಕೆ ರಾಜಕೀಯ ಘೋಷಿಸಿದ್ದ ಕೆ.ಎಸ್ ಈಶ್ವರಪ್ಪ ತಮ್ಮ ಪುತ್ರ ಕಾಂತೇಶ್ ಗೆ ಲೋಕಸಭೆ ಚುನಾವಣೆಯಲ್ಲಿ ಟಿಕೆಟ್ ನೀಡುವಂತೆ ಮನವಿ ಮಾಡಿದ್ದರು.ಆದರೆ ತಮ್ಮ ಪುತ್ರ ಕಾಂತೇಶ್ ಗೆ ಟಿಕೆಟ್ ಸಿಗದ ಹಿನ್ನೆಲೆ ಬಿಜೆಪಿ ವಿರುದ್ದ ಬಂಡಾಯ ಅಭ್ಯರ್ಥಿಯಾಗಿ ಚುನಾವಣಾ ಕಣದಲ್ಲಿ ಉಳಿದುಕೊಂಡಿದ್ದಾರೆ.