ಮುಂಬೈ: ಸಚಿವ ನಿತಿನ್ ಗಡ್ಕರಿ ಅವರು ಕಾರ್ಯಕ್ರಮದ ವೇಳೆ ಸ್ಟೇಜ್ ಮೇಲೆಯೇ ಕುಸಿದು ಬಿದ್ದಿರುವ ಘಟನೆಯೊಂದು ನಡೆದಿದೆ.
ಈ ಘಟನೆ ಮಹಾರಾಷ್ಟ್ರದ ಯವತ್ಮಾಲ್ ನಲ್ಲಿ ನಡೆದಿದೆ. ಲೋಕಸಭಾ ಚುನಾವಣೆಯ ಸಮಾವೇಶದಲ್ಲಿ ಭಾಗವಹಿಸಿದ ಸಂದರ್ಭದಲ್ಲಿಯೇ ಅವರು ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ. ಗಡ್ಕರಿ, ಶಿವಸೇನೆಯ ಮುಖ್ಯಮಂತ್ರಿ ಏಕನಾಥ್ ಶಿಂಧೆ ಬಣದ ರಾಜಶ್ರೀ ಪಾಟೀಲ್ ಪರ ಪ್ರಚಾರ ನಡೆಸುತ್ತಿದ್ದರು. ಆ ವೇಳೆಯೇ ಕುಸಿದು ಬಿದ್ದಿದ್ದಾರೆ. ಗಡ್ಕರಿ ನಾಗ್ಪುರ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ.
ಈಗಾಗಲೇ ಆ ಕ್ಷೇತ್ರದ ಚುನಾವಣೆ ಮುಕ್ತಾಯವಾಗಿದೆ.
ಪ್ರಜ್ಞೆ ತಪ್ಪಿದ ಕುರಿತು ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ ನಿತಿನ್ ಗಡ್ಕರಿ, ಮಹಾರಾಷ್ಟ್ರದ ಪುಸಾದ್‌ನಲ್ಲಿ ನಡೆದ ಸಮಾವೇಶದ ವೇಳೆ ಬಿಸಿಲಿನ ತಾಪದಿಂದ ಅನಾನುಕೂಲವಾಗಿತ್ತು. ಆದರೆ ಈಗ ನಾನು ಸಂಪೂರ್ಣವಾಗಿ ಆರೋಗ್ಯವಾಗಿದ್ದೇನೆ. ಮುಂದಿನ ಸಭೆಗೆ ಹಾಜರಾಗಲು ವರುದ್‌ಗೆ ತೆರಳುತ್ತಿದ್ದೇನೆ. ನಿಮ್ಮ ಪ್ರೀತಿ ಹಾಗೂ ಶುಭ ಹಾರೈಕೆಗಳಿಗೆ ಧನ್ಯವಾದಗಳು ಎಂದು ಬರೆದುಕೊಂಡಿದ್ದಾರೆ.