ಕರ್ನಾಟಕ ಸಾರ್ವಭೌಮ ಡಾ. ರಾಜಕುಮಾರ್ ಹುಟ್ಟು ಹಬ್ಬದಂದೇ ಕ್ರೇಜಿಸ್ಟಾರ್ ರವಿಚಂದ್ರನ್ ಅಭಿನಯದ ದ ಜಡ್ಜಮೆಂಟ್ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ.

G9 Communication Media and Entertainment ಲಾಂಛನದಲ್ಲಿ ನಿರ್ಮಾಣವಾಗಿರುವ ಈ ಚಿತ್ರದ ಚಿತ್ರೀಕರಣ ಸಂಪೂರ್ಣವಾಗಿ ಮುಕ್ತಾಯವಾಗಿದ್ದು, ಚಿತ್ರತಂಡ ಸಂತಸ ಹಂಚಿಕೊಂಡಿದೆ.

ಈ ಕುರಿತು ಮಾಹಿತಿ ನೀಡಿದ ನಿರ್ದೇಶಕ ಗುರುರಾಜ ಕುಲಕರ್ಣಿ, ಚಿತ್ರದ ಚಿತ್ರೀಕರಣ ಸಂಪೂರ್ಣವಾಗಿ ಮುಕ್ತಾಯವಾಗಿದೆ. ಚಿತ್ರೀಕರಣವನ್ನು ಕಳೆದ ವರ್ಷ ಅಣ್ಣಾವ್ರ ಹುಟ್ಟು ಹಬ್ಬದಂದೇ ಆರಂಭಿಸಲಾಗಿತ್ತು. ಈ ವರ್ಷ ಅವರ ಹುಟ್ಟು ಹಬ್ಬದಂದೇ ಮತ್ತೆ ಚಿತ್ರೀಕರಣ ಮುಕ್ತಾಯವಾಗಿದೆ. ಈ ಚಿತ್ರವನ್ನು ಮೇನಲ್ಲಿ ತೆರೆಗೆ ತರುವ ಪ್ರಯತ್ನ ಮಾಡಲಾಗುವುದು ಎಂದು ಹೇಳಿದ್ದಾರೆ.

ನಿರ್ಮಾಪಕ ಶರದ್ ನಾಡಗೌಡ, ರಾಮು ರಾಯಚೂರು, ವಿಶ್ವನಾಥ್ ಗುಪ್ತ ಹಾಗು ರಾಜಶೇಖರ ಪಾಟೀಲ್ ಇದ್ದರು. ಧನ್ಯಾ ರಾಮಕುಮಾರ್, ನಟಿ ಮೇಘನಾ ಗಾಂವ್ಕರ್, ಗೀತ ರಚನೆಕಾರ ಪ್ರಮೋದ್ ಮರವಂತೆ, ರೇಖಾ ಕೂಡ್ಲಗಿ, ನವಿಲ, ಛಾಯಾಗ್ರಾಹಕ ಪಿ.ಕೆ.ಹೆಚ್ ದಾಸ್, ಸಂಕಲನಕಾರ ಕೆಂಪರಾಜ್ ಈ ಸಂದರ್ಭದಲ್ಲಿ ಹಾಜರಿದ್ದರು.

ಈ ಚಿತ್ರದಲ್ಲಿ ಕ್ರೇಜಿಸ್ಟಾರ್ ರವಿಚಂದ್ರನ್, ದಿಗಂತ್ , ಧನ್ಯ ರಾಮಕುಮಾರ್, ಮೇಘನಾ ಗಾಂವ್ಕರ್, ಲಕ್ಷ್ಮೀ ಗೋಪಾಲಸ್ವಾಮಿ, ನಾಗಾಭರಣ, ಪ್ರಕಾಶ್ ಬೆಳವಾಡಿ, ರಂಗಾಯಣ ರಘು, ರವಿಶಂಕರ್ ಗೌಡ, ಸುಜಯ್ ಶಾಸ್ತ್ರಿ ಕೃಷ್ಣ ಹೆಬ್ಬಾಳೆ, ರೇಖಾ ಕೂಡ್ಲಿಗಿ, ನವಿಲ ಮುಂತಾದವರು ನಟಿಸಿದ್ದಾರೆ. ಚಿತ್ರಕ್ಕೆ ಅನೂಪ್ ಸೀಳಿನ್ ಸಂಗೀತ ನೀಡಿದ್ದಾರೆ.