ವಿಜಯಪುರ: ಈಜಲು ತೆರಳಿದ್ದ ಇಬ್ಬರು ಬಾಲಕರು ನೀರುಪಾಲಾಗಿರುವ ಘಟನೆಯೊಂದು ನಡೆದಿದೆ.
ಈ ಘಟನೆ ಜಿಲ್ಲೆಯ ಸಿಂದಗಿಯ (Sindagi) ಗೋಲಗೇರಿ ಗ್ರಾಮದಲ್ಲಿ ನಡೆದಿದೆ. ಸಾವನ್ನಪ್ಪಿದ ಬಾಲಕರನ್ನು ಸೋಮಶೇಖರ್ ಆಲಮೇಲ್ (16), ಮಲಿಕ್ ನದಾಫ್ (16) ಎಂದು ಗುರುತಿಸಲಾಗಿದೆ.
ವಿಜಯಪುರ ಜಿಲ್ಲೆ ಸೇರಿದಂತೆ ರಾಜ್ಯದಲ್ಲಿ ವ್ಯಾಪಕ ಬಿಸಿಲು ಇದೆ. ಬಿಸಿಲಿನ ಬೇಗೆಗೆ ಪ್ರತಿಯೊಬ್ಬರೂ ಕಂಗಾಲಾಗಿದ್ದಾರೆ. ಹೀಗಾಗಿ ಬಿಸಿಲಿನ ಬೇಗೆ ತಪ್ಪಿಸಿಕೊಳ್ಳುವ ನಿಟ್ಟಿನಲ್ಲಿ ಬಾಲಕರು ಬಾವಿಯಲ್ಲಿ ಈಜಲು ತೆರಳಿದ್ದರು. ಈ ಳೆ ಈಜು ಬಾರದ ಕಾರಣ ಮುಳುಗಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಮಕ್ಕಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಈ ಕುರಿತು ಸಿಂದಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.