
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ ಸಿಕ್ಕಾಪಟ್ಟೆ ಸದ್ದು ಮಾಡುತ್ತಿದೆ. ರಾಜಕೀಯ ವಲಯದಲ್ಲಿ ಪರಸ್ಪರ ವಾಕ್ಸಮರಕ್ಕೆ ಈ ವಿಚಾರ ಸಾಕ್ಷಿಯಾಗಿದೆ.ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣ ಸಂಬಂಧ ಪ್ರಜ್ವಲ್ ರೇವಣ್ಣ ಯಾವ ದೇಶದಲ್ಲಿದ್ರೂ ಹಿಡಿದು ತರುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಪ್ರಜ್ವಲ್ ರೇವಣ್ಣನ ಪಾಸ್ಪೋರ್ಟ್ ರದ್ದುಗೊಳಿಸುವಂತೆ ಪ್ರಧಾನಿ ಮೋದಿಯವರಿಗೆ ಪತ್ರ ಬರೆದಿದ್ದೇನೆ. ಪಾಸ್ಪೋರ್ಟ್ ರದ್ದತಿ ಅಧಿಕಾರವಿರುವುದು ಕೇಂದ್ರ ಸರ್ಕಾರಕ್ಕೆ ಮಾತ್ರ. ಪಾಸ್ ಪೋರ್ಟ್ ರದ್ದಾದರೇ ಪ್ರಜ್ವಲ್ ರೇವಣ್ಣ ವಿದೇಶದಲ್ಲಿರಲು ಆಗಲ್ಲ. ಮೋದಿ ಅವರು ಪಾಸ್ ಪೋರ್ಟ್ ರದ್ದು ಮಾಡಲಿ ಎಂದು ಸವಾಲು ಹಾಕಿದರು.ಚುನಾವಣೆ ವೇಳೆ ಪ್ರಜ್ವಲ್ ರೇವಣ್ಣ ನನ್ನ ಮಗ ಎಂದು ಹೆಚ್ಡಿ ಕುಮಾರಸ್ವಾಮಿ ಹೇಳಿದ್ದರು. ನನ್ನ ಮಗ ನಿಖಿಲ್ ಬೇರೆ ಅಲ್ಲ, ಪ್ರಜ್ವಲ್ ರೇವಣ್ಣ ಬೇರೆ ಅಲ್ಲ ಅಂದಿದ್ದರು. ಈಗ ಅವರ ಕುಟುಂಬ ಬೇರೆ ನಮ್ಮ ಕುಟುಂಬ ಬೇರೆ ಅಂತಿದ್ದಾರೆ. ಪ್ರಜ್ವಲ್ ಪ್ರಕರಣ ಮೊದಲೇ ಬಿಜೆಪಿಗೂ ಗೊತ್ತಿತ್ತು. ಆದರೂ ಜೆಡಿಎಸ್ ಜೊತೆ ಹೊಂದಾಣಿಕೆ ಮಾಡಿಕೊಂಡರು. ಈಗ ಯಾಕೆ ಕ್ರಮ ವಹಿಸುತ್ತಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದರು.