ಹಾಸನ ಅಶ್ಲೀಲ ವಿಡಿಯೋ ಕೇಸ್ ಬಗೆದಷ್ಟು ಬಯಲಾಗುತ್ತಿದೆ. ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣ ಬಗ್ಗೆ SIT ತನಿಖೆ ತೀವ್ರಗೊಳಿಸಿದೆ. ರೇವಣ್ಣಗಂತೂ ಸಂಕಷ್ಟದ ಸರಮಾಲೆ ಸುತ್ತಿಕೊಂಡು ಕಗ್ಗಂಟಾಗಿ ಪರಿಣಮಿಸಿದೆ.
ಲೈಂಗಿಕ ಕಿರುಕುಳ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ, ಶಾಸಕ ಹೆಚ್.ಡಿ ರೇವಣ್ಣ ನಿವಾಸಕ್ಕೆ ಎಸ್ ಐಟಿ ಅಧಿಕಾರಿಗಳು ಭೇಟಿ ನೀಡಿದ್ದು ಸಂತ್ರಸ್ತ ಮಹಿಳೆಯೊಂದಿಗೆ ಸ್ಥಳ ಮಹಜರು ನಡೆಸಿದ್ದಾರೆ.ಹಾಸನ ಜಿಲ್ಲೆಯ ಹೊಳೆನರಸೀಪುರದಲ್ಲಿ ಹೆಚ್. ಡಿ. ರೇವಣ್ಣ ಅವರ ನಿವಾಸಕ್ಕೆ ಎಸ್ ಐಟಿ ಅಧಿಕಾರಿಗಳು ಐದು ವಾಹನಗಳಲ್ಲಿ ಭೇಟಿ ನೀಡಿದ್ದು, ಸ್ಥಳ ಮಹಜರು ನಡೆಸಿದ್ದಾರೆ. ಸಂತ್ರಸ್ತ ಮಹಿಳೆಯನ್ನೂ ಜೊತೆಗೆ ಕರೆದುಕೊಂಡು ಬಂದು ಎಸ್ ಐಟಿ ಅಧಿಕಾರಿಗಳು ಹೆಚ್.ಡಿ ರೇವಣ್ಣ ನಿವಾಸದಲ್ಲಿ ಸ್ಥಳ ಮಹಜರು ನಡೆಸಿದ್ದಾರೆ. ಎಸ್ ಐಟಿ ಅಧಿಕಾರಿಗಳಿಗೆ ಸ್ಥಳೀಯ ಪೊಲೀಸರು ಸಾಥ್ ನೀಡಿದ್ದಾರೆ.ಹೆಚ್ ಡಿ ರೇವಣ್ಣರಿಂದ ಲೈಂಗಿಕ ಕಿರುಕುಳ ಎಂದು ಆರೋಪಿಸಿ ಸಂತ್ರಸ್ತ ಮಹಿಳೆ ದೂರು ದಾಖಲಿಸಿದ್ದರು. ಇನ್ನು ಸ್ಥಳ ಮಹಜರು ಪ್ರಕ್ರಿಯೆಯನ್ನ ಅಧಿಕಾರಿಗಳು ವಿಡಿಯೋ ರೆಕಾರ್ಡ್ ಮಾಡಿಕೊಂಡಿದ್ದಾರೆ
ತುಂಗಭದ್ರ ಆಣೆಕಟ್ಟಿನಲ್ಲಿ ವ್ಯರ್ಥವಾಗುತ್ತಿರುವ 27 ಟಿಎಂಸಿ ನೀರಿನ ಸದ್ಬಳಕೆಗೆ ಸರ್ಕಾರ ಸೂಕ್ತ ಕ್ರಮ: ಡಿಸಿಎಂ ಡಿ.ಕೆ.ಶಿವಕುಮಾರ್
ನವಲಿ ಸಮಾನಾಂತರ ಜಲಾಶಯ ಹಾಗೂ ಪಂಪ್ ಮಾಡಿ ನೀರು ಬಳಸಿಕೊಳ್ಳುವ ಪರ್ಯಾಯ ಯೋಜನೆಗಳ ಬಗ್ಗೆ ಆಂಧ್ರ, ತೆಲಂಗಾಣ ರಾಜ್ಯಗಳ ಜತೆ ಚರ್ಚೆ “ತುಂಗಭದ್ರ ಜಲಾಶಯದಲ್ಲಿ ಹೂಳು ತುಂಬಿ...
Read moreDetails