ಮಂಗಳೂರು: ಕಾರು ಹಾಗೂ ಆ್ಯಂಬುಲೆನ್ಸ್ ಮಧ್ಯೆ ಅಪಘಾತ ಸಂಭವಿಸಿದ ಪರಿಣಾಮ ಮೂವರು ಸಾವನ್ನಪ್ಪಿರುವ ಘಟನೆ ನಡೆದಿದೆ.
ಈ ಘಟನೆ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ಕುಂಜತ್ತೂರು ಹತ್ತಿರ ನಡೆದಿದೆ. ಶ್ರೀನಾಥ, ಶರತ್ ಮೆನನ್ ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ. ಮೃತರು ಕೇರಳದ ತ್ರಿಶೂರು ಜಿಲ್ಲೆ ಗುರುವಾಯೂರು ನಿವಾಸಿಗಳು ಎನ್ನಲಾಗಿದೆ.
ಆಂಬುಲೆನ್ಸ್ ಕಾಸರಗೋಡಿನಿಂದ ಮಂಗಳೂರಿಗೆ ತೆರಳುತ್ತಿತ್ತು. ಈ ಸಂದರ್ಭದಲ್ಲಿ ಮಂಗಳೂರಿನಿಂದ ಮಂಜೇಶ್ವರದತ್ತ ತೆರಳುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ. ಆಂಬುಲೆನ್ಸ್ ನಲ್ಲಿದ್ದ ರೋಗಿಗೂ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.