ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಗುರುವಾರ ಕೂಡ ಭರ್ಜರಿ ಮಳೆಯಾಗಿದ್ದು, ಶುಕ್ರವಾರ ವ್ಯಾಪಕವಾಗಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಸಿಲಿಕಾನ್ ಸಿಟಿಯಲ್ಲಿ ಕಳೆದ ನಾಲ್ಕೈದು ದಿನಗಳಿಂದ ಮಳೆಯಾಗುತ್ತಿದೆ. ಬಸವನಗುಡಿ, ಚಾಮರಾಜಪೇಟೆ, ಕಾರ್ಪೊರೇಷನ್, ಟೌನ್ ಹಾಲ್, ಮೆಜೆಸ್ಟಿಕ್, ಮೈಸೂರು ಬ್ಯಾಂಕ್ ಸರ್ಕಲ್, ಯಶವಂತಪುರ ಸುತ್ತಮುತ್ತ ಮಳೆಯಾಗುತ್ತಿದೆ. ದೊಡ್ಡ ಬಿದರಕಲ್ಲು 41.50 ಮಿ.ಮೀ, ನಂದಿನಿ ಲೇಔಟ್ 19 ಮಿ.ಮೀ, ಮರಪ್ಪನ ಪಾಳ್ಯ 18 ಮಿ.ಮೀ, ನಾಗಪುರ 17 ಮೀ.ಮೀ, ಬಗಲಗುಂಟೆ 16 ಮಿ.ಮೀ, ಕೊಟ್ಟಿಗೆಪಾಳ್ಯ 15 ಮಿ.ಮೀ, ಪೀಣ್ಯ ಇಂಡಸ್ಟ್ರಿಯಲ್ ಏರಿಯಾ 13.50 ಮಿ.ಮೀ, ಹಂಪಿನಗರ 11 ಮಿ.ಮೀ. ಮಾರುತಿ ಮಂದಿರ 10.50 ಮಿ.ಮೀ ಮಳೆಯಾಗಿರುವ ಕುರಿತು ವರದಿಯಾಗಿದೆ.
ಹಲವೆಡೆ ತಗ್ಗು ಪ್ರದೇಶಗಳಲ್ಲಿ ನೀರು ನುಗ್ಗಿ ಜನಸಾಮಾನ್ಯರು ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ರೈತರು ಸಂತಸ ವ್ಯಕ್ತಪಡಿಸುತ್ತಿದ್ದಾರೆ.