ದೆಹಲಿ: ಅಬಕಾರಿ ನೀತಿ ಪ್ರಕರಣದಲ್ಲಿ ಇಡಿ ನ್ಯಾಯಾಲಯಕ್ಕೆ ಹೊಸ ಚಾರ್ಜ್ ಶೀಟ್ ಸಲ್ಲಿಸಿದ್ದು, ಬಿಆರ್‌ಎಸ್ ನಾಯಕಿ ಕೆ ಕವಿತಾ (K Kavitha) ಅವರನ್ನು ಆರೋಪಿ ಎಂದು ಹೆಸರಿಸಲಾಗಿದೆ.
ಅಲ್ಲದೇ, ದೆಹಲಿ ಸಿಎಂ ಹಾಗೂ ಆಪ್ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ವಿರುದ್ಧ ಇದೇ ರೀತಿಯ ದೂರು ಮುಂದಿನ ವಾರ ದಾಖಲಾಗುವ ಸಾಧ್ಯತೆ ಇದೆ ಎಂದು ಪಿಟಿಐ ವರದಿ ಮಾಡಿ ಹೇಳಿದೆ.
ಇದು ಎಎಪಿ ನಾಯಕ ಮತ್ತು ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ, ಎಎಪಿ ರಾಜ್ಯಸಭಾ ಸಂಸದ ಸಂಜಯ್ ಸಿಂಗ್ ಮತ್ತು ಇತರರು ಸೇರಿದಂತೆ 18 ಜನರನ್ನು ಬಂಧಿಸಿರುವ ಈ ಪ್ರಕರಣದಲ್ಲಿ ಇಡಿ ಸಲ್ಲಿಸಿದ ಆರನೇ ಪೂರಕ ಚಾರ್ಜ್ ಶೀಟ್ ಆಗಿದೆ. ಮಾರ್ಚ್ 21ರಂದು ಸಿಎಂ ಅರವಿಂದ ಕೇಜ್ರಿವಾಲ್ ಅವರನ್ನು ಬಂಧಿಸಲಾಗಿತ್ತು. ಪುತ್ರಿ ಕೆ ಕವಿತಾ ಅವರನ್ನು ಮಾರ್ಚ್ 15 ರಂದು ಹೈದರಾಬಾದ್‌ನಿಂದ ವಶಕ್ಕೆ ಪಡೆಯಲಾಗಿತ್ತು. ಮೇ 10ರಂದು ಕೇಜ್ರಿವಾಲ್ ಗೆ ಮಧ್ಯಂತರ ಜಾಮೀನು ದೊರೆತಿದೆ. ಜೂನ್ 1 ರವರೆಗೆ ಮಧ್ಯಂತರ ಜಾಮೀನು ನೀಡಿದೆ.
21 ದಿನಗಳ ಮಧ್ಯಂತರ ಜಾಮೀನು ಅವಧಿಯಲ್ಲಿ ಲೆಫ್ಟಿನೆಂಟ್ ಗವರ್ನರ್ ಅನುಮತಿ ಪಡೆಯಲು ತೀರಾ ಅಗತ್ಯವಿದ್ದಲ್ಲಿ ಯಾವುದೇ ಅಧಿಕೃತ ಕಡತಕ್ಕೆ ಸಹಿ ಹಾಕದಂತೆ ಕೇಜ್ರಿವಾಲ್ ಅವರಿಗೆ ನ್ಯಾಯಾಲಯ ತಿಳಿಸಿದೆ. ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ದೀಪಂಕರ್ ದತ್ತ ಅವರ ಪೀಠವು, “ಅವರು ಮುಖ್ಯಮಂತ್ರಿ ಕಚೇರಿ ಮತ್ತು ದೆಹಲಿ ಸಚಿವಾಲಯಕ್ಕೆ ಭೇಟಿ ನೀಡುವುದಿಲ್ಲ ಎಂದು ಹೇಳಿದೆ.