ನವದೆಹಲಿ: ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಗೆ ಮಧ್ಯಂತರ ಜಾಮೀನು ಸಿಕ್ಕಿದೆ. ಈ ಹಿನ್ನೆಲೆಯಲ್ಲಿ ಅವರು ಹೊರ ಬರುತ್ತಿದ್ದಂತೆ ಮಾಧ್ಯಮದ ಜೊತೆ ಮಾತನಾಡಿದ್ದಾರೆ.

ಮಧ್ಯಂತರ ಜಾಮೀನು ಪಡೆದು ತಿಹಾರ್ ಜೈಲಿನಿಂದ ಹೊರ ಬರುತ್ತಿದ್ದಂತೆ ಎಲ್ಲ ಬೆಂಬಲಿಗರಿಗೆ ಧನ್ಯವಾದಗಳು. ದೇವರ ಆಶೀರ್ವಾದ ನನ್ನ ಜೊತೆಗಿದೆ. ನಿರಕುಂಶ ಪ್ರಭುತ್ವದ ವಿರುದ್ಧ ನಾವು ಹೋರಾಡಬೇಕು ಎಂದು ಹೇಳಿದ್ದಾರೆ.

ನಾಳೆ ಹನುಮಾನ್ ಮಂದಿರದಲ್ಲಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ನಂತರ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಲಿದ್ದಾರೆ. ಕೇಜ್ರಿವಾಲ್ ಅವರನ್ನು ಜೈಲಿನಿಂದ ಪತ್ನಿ ಸುನಿತಾ ಸ್ವಾಗತಿಸಿದ್ದಾರೆ. ಆಮ್ ಆದ್ಮಿ ಪಕ್ಷದ (AAP) ಬೆಂಬಲಿಗರು, ಕಾರ್ಯಕರ್ತರು ಹಾಗೂ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಕೂಡ ತಿಹಾರ್ ಜೈಲಿನ ಹೊರಗೆ ಹಾಜರಿದ್ದರು. ಅರವಿಂದ್ ಕೇಜ್ರಿವಾಲ್ ಅವರು ಕಳೆದ 50 ದಿನಗಳಿಂದ ಜೈಲಿನಲ್ಲಿದ್ದರು. ಈಗ ಜೂನ್ 1ರ ವರೆಗೂ ಅವರಿಗೆ ಮಧ್ಯಂತರ ಜಾಮೀನು ಸಿಕ್ಕಿದೆ.