ಮಾಜಿ ಸಿಎಂ ಹಿರಿಯ ರಾಜಕಾರಣಿ ಎಸ್.ಎಂ.ಕೃಷ್ಣ ಅವರಿಗೆ ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ.ವಯೋಸಹಜ ಕಾಯಿಯಲೆ ಹಿನ್ನೆಲೆ ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ (91) ಅವರು ಆಸ್ಪತ್ರೆಗೆ ದಾಖಲಾಗಿದ್ದು, ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ಮುಂದುವರೆದಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ವಯೋಸಹಜ ಕಾಯಿಲೆ ಹಿನ್ನೆಲೆ ಕೆಲವು ದಿನಗಳ ಹಿಂದೆಯಷ್ಟೇ ಎಸ್.ಎಂ.ಕೃಷ್ಣ ಅವರು ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದು, ಅವರಿಗೆ ಸದ್ಯ ಇದೀಗ ಡಾ.ಸತ್ಯನಾರಾಯಣ ಮೈಸೂರು ಮತ್ತು ಡಾ.ಸುನೀಲ್ ಕಾರಂತ್ ನೇತೃತ್ವದ ಕ್ರಿಟಿಕಲ್ ಕೇರ್ ತಂಡ ಚಿಕಿತ್ಸೆ ನೀಡುತ್ತಿದೆ ಎಂದು ತಿಳಿದುಬಂದಿದೆ.ಜ್ವರ, ಕೆಮ್ಮು ಹಿನ್ನೆಲೆ ಏಪ್ರಿಲ್ 21ರಂದು ಎಸ್.ಎಂ.ಕೃಷ್ಣ ಅವರನ್ನು ಬೆಂಗಳೂರಿನ ವಿಠಲ್ ಮಲ್ಯ ರಸ್ತೆಯ ವೈದೇಹಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದ್ದು, ಬಳಿಕ ಅವರನ್ನು ಡಿಸ್ಟಾರ್ಜ್ ಮಾಡಲಾಗಿತ್ತು. ಮತ್ತೆ ಕೆಲ ದಿನಗಳ ಬಳಿಕ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!
ಬೆಂಗಳೂರು : ಬಾಬಾ ಸಾಹೇಬ್ ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದಿಂದಲೇ ನಾನು ಈ ರಾಜ್ಯದ ಮುಖ್ಯಮಂತ್ರಿ ಆಗಿದ್ದೇನೆ ಎಂದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. https://youtu.be/jc4uNwRML78?si=OFDsWjRgGzT4buqt ಇಂದು...
Read moreDetails






