ಬೆಂಗಳೂರು: ಯಡಿಯೂರಪ್ಪ (Yediyurappa) ಕುಟುಂಬದ ವಿರುದ್ಧ ಮಾಜಿ ಸಚಿವ ಕೆಎಸ್ಈಶ್ವರಪ್ಪ (KS Eshwarappa) ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ್ದಾರೆ.
ಶಿವಮೊಗ್ಗದ ಬಿಜೆಪಿ ಅಭ್ಯರ್ಥಿ ರಾಘವೇಂದ್ರ (BY Raghavendra) ಅವರನ್ನು ಬಂಧಿಸಿ ಕ್ರಮ ಕೈಗೊಳ್ಳಬೇಕೆಂದು ದೂರು ನೀಡಿದ್ದಾರೆ. ರಾಘವೇಂದ್ರ ಹಲವು ಚುನಾವಣಾ ಅಕ್ರಮ ನಡೆಸಿದ್ದಾರೆ ಎಂದು ಆರೋಪಿಸಿ ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಗೆ ದೂರು ಸಲ್ಲಿಸಿದ್ದಾರೆ.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸೋಲುವ ಭೀತಿಯಿಂದ ಬಿಜೆಪಿ ಅಭ್ಯರ್ಥಿ ರಾಘವೇಂದ್ರ ಅವರು ತಮ್ಮ ವಿರುದ್ಧ ಕೆಲವು ನಕಲಿ ಫೋಟೋ ಬಿಡುಗಡೆ ಮಾಡಿದ್ದಾರೆ. ನನ್ನದು ಮೋದಿಯವರದ್ದು ಫೋಟೋ ಹಾಕಿ ಸುಳ್ಳು ಪ್ರಚಾರ ಮಾಡಿದ್ದಾರೆ. ಚುನಾವಣೆಯಲ್ಲಿ ಸಂಪೂರ್ಣ ಮೋಸ ಮತ್ತು ಅಪಪ್ರಚಾರ ಮಾಡಿದ್ದಾರೆ ಎಂದು ದೂರಿದ್ದಾರೆ.
ಕೂಡಲೇ ರಾಘವೇಂದ್ರರನ್ನು ಬಂಧಿಸಿ ಕ್ರಮ ಕೈಗೊಳ್ಳಬೇಕೆಂದು ಈಶ್ವರಪ್ಪ ಮನವಿ ಮಾಡಿದ್ದಾರೆ.