• Home
  • About Us
  • ಕರ್ನಾಟಕ
Thursday, June 19, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಮಡಿಕೇರಿಯ (Madikere) ಭಾಗಮಂಡಲ ಜಲಾವೃತ; ಸಂಪರ್ಕ ಕಡಿತ..

ಕೃಷ್ಣ ಮಣಿ by ಕೃಷ್ಣ ಮಣಿ
May 17, 2024
in ಕರ್ನಾಟಕ
0
ಮಡಿಕೇರಿ ಭಾಗಮಂಡಲ ಜಲಾವೃತ.. ಸಂಪರ್ಕ ಕಡಿತ
Share on WhatsAppShare on FacebookShare on Telegram

ಮೇಲಿನ ಹೆಡ್​ಲೈನ್​ ನೋಡಿ ಶಾಕ್​ ಆಗಬೇಡಿ, ಕೊಡಗಿನಲ್ಲಿ(Kodagu) ಧಾರಾಕಾರ ಮಳೆಯಾಯ್ತಾ ಅಂದುಕೊಳ್ಳಬೇಡಿ. ಆದರೆ ಪ್ರತಿವರ್ಷ ಈ ರೀತಿಯ ಹೆಡ್​ಲೈನ್​ ಕೆಲದಿನಗಳ ಕಾಲ ಕಾಯಂ. ಮಳೆಗಾಲ ಶುರುವಾದ ಬಳಿಕ ಭಾರೀ ಮಳೆಯ ಪರಿಣಾಮ ಕಾವೇರಿ ಭೋರ್ಗರೆದು ಹರಿಯುತ್ತಾಳೆ. ಅದರಲ್ಲೂ ಕಾವೇರಿಯ ಉಗಮಸ್ಥಾನ(Origin Of Kaveri) ಭಾಗಮಂಡಲದಲ್ಲಿ ಜಲಾವೃತವಾಗುವ ಪರಿಣಾಮ ವಾಹನ ಸಂಚಾರ ಮಾಡುವುದೂ ದುಸ್ತರ ಎನ್ನುವಂತಾಗುತ್ತದೆ. ಆದರೆ ಇನ್ಮುಂದೆ ಭಾಗಮಂಡಲ ಜಲಾವೃತ, ವಾಹನ ಸಂಚಾರ ನಿಷಿದ್ಧ ಎನ್ನುವ ಮಾತು ಕೇಳಿಬರುವುದಿಲ್ಲ. ಆದರೆ ಭಾಗಮಂಡಲದಲ್ಲಿ ತುಂಬಿ ಹರಿಯುವ ನದಿಯನ್ನು ಕಣ್ತುಂಬಿಕೊಳ್ಳುವ ಅವಕಾಶವೊಂದು ತೆರೆದುಕೊಂಡಿದೆ.

ADVERTISEMENT

ಹಾಲಿ ಇಂಧನ ಸಚಿವರಾಗಿ ಕೆಲಸ ಮಾಡುತ್ತಿರುವ ಕೆ.ಜೆ ಜಾರ್ಜ್​, 2018ರಲ್ಲೂ ಸಚಿವರಾಗಿ ಕಾರ್ಯ ನಿರ್ವಹಿಸಿದ್ದರು. ಅಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಕೆ.ಜೆ ಜಾರ್ಜ್ ಅವರ ದೂರದೃಷ್ಟಿ ಯೋಜನೆ ಇಂದು ಸಾಕಾರಗೊಂಡಿದೆ. ಭಾಗಮಂಡಲದಲ್ಲಿ 880 ಮೀಟರ್ ಉದ್ದದ ಮೇಲ್ಸೇತುವೆ ಯೋಜನೆಗೆ ಒಪ್ಪಿಗೆ ಪಡೆದಿದ್ದರು. ಇದೀಗ ಕಾಮಗಾರಿ ಪೂರ್ಣಗೊಂಡಿದ್ದು, ಕೊಡಗಿನ ಜನರ ಸಂಕಷ್ಟಕ್ಕೆ ತೆರೆಬೀಳುವ ವಿಶ್ವಾಸ ಮೂಡಿಸಿದೆ.

ಭಾಗಮಂಡಲದ ಪ್ರವಾಹ ಪೀಡಿತ ಪ್ರದೇಶದಲ್ಲಿ ಅತ್ಯಂತ ಅಗತ್ಯವಾಗಿದ್ದ ಈ ಸೇತುವೆಯನ್ನು ನಿರ್ಮಿಸುವಲ್ಲಿ ಜಾರ್ಜ್​ ಅವರ ಪ್ರಯತ್ನದ ಫಲ ಇಂದು ಮೇಲ್ಸೇತುವೆ ಕಾಮಗಾರಿ ಮುಕ್ತಾಯವಾಗಿದೆ. ಮಳೆಗಾಲದಲ್ಲಿ ಸದಾ ಒಂದಕ್ಕೊಂದು ಪ್ರದೇಶಗಳ ಸಂಪರ್ಕ ಕಡಿದುಕೊಳ್ಳುವ ಅಪಾಯ ಪ್ರತಿವರ್ಷವೂ ಎದ್ದು ಕಾಣುತ್ತಿತ್ತು. ಆದರೆ ಇದೀಗ ಮೇಲ್ಸೇತುವೆ ಉದ್ಘಾಟನೆಗೆ ಸಜ್ಜಾಗಿ ನಿಂತಿದ್ದಾರೆ. ನೂರಾರು ವರ್ಷಗಳಿಂದ ಮಳೆಗಾಲದಲ್ಲಿ ಜೀವ ಕೈಲಿಡಿದು ಸಂಚಾರ ಮಾಡುತ್ತಿದ್ದ ಜನತೆ ನಿಟ್ಟುಸಿರು ಬಿಡುವಂತಾಗಿದೆ.

2018ರಲ್ಲಿ ಕೊಡಗು ಉಸ್ತುವಾರಿ ಸಚಿವರಾಗಿದ್ದ ಸಚಿವ ಕೆ.ಜೆ ಜಾರ್ಜ್, ಭಾಗಮಂಡಲ ಸಮಸ್ಯೆ ಬಗ್ಗೆ ಅರಿತುಕೊಂಡಿದ್ದರು. ಭಾಗಮಂಡಲ, ಚೇರಂಗಾಲ, ಕೋರಂಗಾಲ, ತಲಕಾವೇರಿ ಮತ್ತು ಅಯ್ಯಂಗೇರಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳನ್ನು ಸಂಪರ್ಕಿಸಲು ಈ ಸೇತುವೆಯ ಅಗತ್ಯವನ್ನು ಸಂಪುಟದಲ್ಲಿ ಪ್ರಸ್ತಾಪಿಸಿದರು. ಮಳೆಗಾಲದಲ್ಲಿ ಈ ಪ್ರದೇಶದ ಜೀವನಾಡಿ ಕಾವೇರಿ ನದಿಯ ಆರ್ಭಟದಲ್ಲಿ ಈ ಪ್ರದೇಶಗಳ ಸಂಪರ್ಕ ಕಡಿತ ಆಗುವ ಬಗ್ಗೆ ಸರ್ಕಾರದ ಗಮನ ಸೆಳೆದು ಯೋಜನೆ ತಂದಿದ್ದರು. ಇದೀಗ ಸಚಿವ ಜಾರ್ಜ್ ಕಾರ್ಯ ಜನಮನ್ನಣೆ ಪಡೆಯುತ್ತಿದೆ.

ರಾಜಕೀಯ ನಾಯಕರು ಎನಿಸಿಕೊಂಡವರು ಜೀವನದಲ್ಲಿ ಸಾಕಷ್ಟು ರಾಜಕಾರಣ ಮಾಡುತ್ತಾರೆ. ಜೊತೆಗೆ ಸಾಕಷ್ಟು ಅಭಿವೃದ್ಧಿ ಯೋಜನೆಗಳನ್ನು ಮಾಡುತ್ತಾರೆ. ಆದರೆ ಅದರಲ್ಲಿ ಕೆಲವೊಂದು ಯೋಜನೆಗಳು ಭಾವನಾತ್ಮಕ ಸ್ಥಾನ ಪಡೆದುಕೊಳ್ಳುತ್ತವೆ. ತಮ್ಮ ಜೀವನದಲ್ಲಿ ಸಾರ್ಥಕತೆಯ ಮೈಲಿಗಲ್ಲು ಸ್ಥಾಪಿಸುತ್ತವೆ. ಅದೇ ರೀತಿ ಸಚಿವ ಕೆ.ಜೆ ಜಾರ್ಜ್ ಭಾಗಮಂಡಲ ಯೋಜನೆ ಮೂಲಕ​ ಸಾರ್ಥಕತೆ ಪಡೆದುಕೊಂಡಂತಿದೆ. ಆದರೂ ಶತಮಾನಗಳ ಸಮಸ್ಯೆಗೆ ಮುಕ್ತಿ ಕೊಟ್ಟಿರುವುದು ಆ ಭಾಗದ ಜನರ ನೆಮ್ಮದಿಗೆ ಕಾರಣವಾಗಿದೆ.

ಕೃಷ್ಣಮಣಿ

Tags: BhagamandalaCauveryFloodK.J GeorgeKaveriKodaguMadikeriMinisterOverbridgeRainಕಾವೇರಿಜಲಾವೃತತಲಕಾವೇರಿಫ್ಲೈಓವರ್ಬ್ರಿಡ್ಜ್ಭಾಗಮಂಡಲ
Previous Post

ರೈತರ ಸಾಲಕ್ಕೆ ಬರ ಪರಿಹಾರ ಹಣ ಜಮೆ; ಬ್ಯಾಂಕ್ ಗಳ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ಕಿಡಿ

Next Post

A ಚಿತ್ರ ರೀ ರಿಲೀಸ್ ಆಗುತ್ತಿರುವ ಸಂದರ್ಭದಲ್ಲಿ  ನೆನಪುಗಳನ್ನು ಹಂಚಿಕೊಂಡ ನಾಯಕ ನಟಿ ಚಾಂದಿನಿ !

Related Posts

ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್
Top Story

ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್

by Chetan
June 18, 2025
0

ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್ಖರ್ಗೆ ಭಾಗಿ - ಏವಿಯೇಷನ್ ನಲ್ಲಿ ಕರ್ನಾಟಕವೇ ಮುಂಚೂಣಿಯಲ್ಲಿದೆ ಎಂದ ಪ್ರಿಯಾಂಕ್ https://youtu.be/hWOHlkSh63g ParisAirShow ನಲ್ಲಿ ಭಾರತ ಮತ್ತು ವಿಶೇಷವಾಗಿ...

Read moreDetails

ಸರ್ಕಾರಕ್ಕೆ ಹೇಳಿ ಮೊದ್ಲು ಗುಂಡಿ ಮುಚ್ಚೋಕೆ

June 18, 2025
ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ

ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ

June 18, 2025
ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ

ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ

June 18, 2025
ವಿಶ್ವ ಯೋಗ ದಿನದಂದು ‘ಯೋಗ ಸಂಗಮ’ ಕಾರ್ಯಕ್ರಮ – ರಾಜ್ಯಾದ್ಯಂತ 5 ಲಕ್ಷ ಜನರಿಂದ ಯೋಗಭ್ಯಾಸ – ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ವಿಶ್ವ ಯೋಗ ದಿನದಂದು ‘ಯೋಗ ಸಂಗಮ’ ಕಾರ್ಯಕ್ರಮ – ರಾಜ್ಯಾದ್ಯಂತ 5 ಲಕ್ಷ ಜನರಿಂದ ಯೋಗಭ್ಯಾಸ – ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

June 17, 2025
Next Post
A ಚಿತ್ರ ರೀ ರಿಲೀಸ್ ಆಗುತ್ತಿರುವ ಸಂದರ್ಭದಲ್ಲಿ  ನೆನಪುಗಳನ್ನು ಹಂಚಿಕೊಂಡ ನಾಯಕ ನಟಿ ಚಾಂದಿನಿ !

A ಚಿತ್ರ ರೀ ರಿಲೀಸ್ ಆಗುತ್ತಿರುವ ಸಂದರ್ಭದಲ್ಲಿ  ನೆನಪುಗಳನ್ನು ಹಂಚಿಕೊಂಡ ನಾಯಕ ನಟಿ ಚಾಂದಿನಿ !

Please login to join discussion

Recent News

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !
Top Story

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

by Chetan
June 19, 2025
ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .
Top Story

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

by ಪ್ರತಿಧ್ವನಿ
June 18, 2025
ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್
Top Story

ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್

by Chetan
June 18, 2025
Top Story

ಸರ್ಕಾರಕ್ಕೆ ಹೇಳಿ ಮೊದ್ಲು ಗುಂಡಿ ಮುಚ್ಚೋಕೆ

by ಪ್ರತಿಧ್ವನಿ
June 18, 2025
ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ
Top Story

ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ

by ಪ್ರತಿಧ್ವನಿ
June 18, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

June 19, 2025
ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*

ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*

June 18, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada