ನನಗೆ 100 ಕೋಟಿ ರೂಪಾಯಿ ಆಫರ್ ನೀಡಿದ್ರು – ದೇವರಾಜೇಗೌಡ
ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಅಧಿಜಾರಿಗಳ ವಶದಲ್ಲಿರುವ ಬಿಜೆಪಿ ಮುಖಂಡ ದೇವರಾಜೇಗೌಡ, ಮಾಧ್ಯಮಗಳ ಮುಂದೆ ಸ್ಫೋಟಕ ಹೇಳಿಕೆ ನೀಡಿದ್ದಾರೆ.
ನನಗೆ ಈ ಪ್ರಮರಣದಲ್ಲಿ 100 ಕೋಟಿ ರೂಪಾಯಿಯ ಆಫರ್‌ನ್ನ ನೇರವಾಗಿ ಡಿಸಿಎಂ ಡಿ.ಕೆ. ಶಿವಕುಮಾರ್ ನೀಡಿದ್ರು. ಕುಮಾರಸ್ವಾಮಿ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರಿಗೆ ದೊಡ್ಡ ಪ್ರಮಾಣದಲ್ಲಿ ಮುಖಭಂಗ ಮಾಡುವ ಹುನ್ನಾರ ಇದರಲ್ಲಿ ಅಡಗಿತ್ತು. ನಾಲ್ವರು ಸಚಿವರು ಕೂಡ ತೆರೆಮರೆಯಲ್ಲಿ ಕಾರ್ಯನಿರ್ವಹಣೆ ಮಾಡುತ್ತಿದ್ರು. ಇದಕ್ಕೆ ನನಗೆ 5 ಕೋಟಿ ರೂಪಾಯಿಗಳ ಹಣವನ್ನು ಕೂಡ ಕಳುಹಿಸಿದ್ರು ಎಂದು ಮಾಧ್ಯಮಗಳ ಮುಂದೆ ತಿಳಿಸಿದ್ದು, ಪ್ರಕರಣ ಮತ್ತಷ್ಟು ತಿರುವು ಪಡೆದುಕೊಳ್ಳವ ಮುನ್ಸೂಚನೆ ನೀಡಿದ್ದಾರೆ.